ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳ ಮನೆಗೆ ಆಗಾಗ ಹೋಗುತ್ತಿದ್ದು, ಒಂದು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ (Student Harrassment) ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರು ವಿವಿಯ ಪ್ರಾಧ್ಯಾಪಕರೊಬ್ಬರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿ ಆದೇಶ ನೀಡಿದೆ.
ಮಂಗಳೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೇದವ ಅವರು ವಿದ್ಯಾರ್ಥಿನಿಯೊಬ್ಬಳ ಜತೆ ಆತ್ಮೀಯ ಸಂಬಂಧ ಹೊಂದಿದ್ದು, ಆಗಾಗ ಆಕೆಯ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. 2013ರ ಆಗಸ್ಟ್ 2ರಂದು ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನುವುದು ಆರೋಪ.ಘಟನೆಯನ್ನು ಯಾರಿಗೂ ಹೇಳದಂತೆ, ಒಂದೊಮ್ಮೆ ಹೇಳಿದರೆ ರೌಡಿಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತದಿಂದ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎನ್ನುವುದು ಅವರ ಮೇಲಿನ ಆರೋಪವಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಮಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವೇದವ ಅವರನ್ನು ತಪ್ಪಿತಸ್ಥರೆಂದು ಹೇಳಿತ್ತು. ಮತ್ತು ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಈ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಡಾ. ವೇದವ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ವೇದವ ಅವರ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು, ವೇದವ ಅವರ ಅರ್ಜಿ ವಜಾ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2017ರ ಜೂನ್ 9ರ ಆದೇಶವನ್ನು ಬದಿಗೆ ಸರಿಸಲಾಗಿದೆ. ಅಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು 506ರ ಅಡಿ ದಾಖಲಾಗಿರುವ ಪ್ರಕರಣದಿಂದ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗಿದೆ ಎಂದು ಹೇಳಿದೆ.
ದೋಷಮುಕ್ತಗೊಳಿಸಲು ಕಾರಣಗಳೇನು?
1. ವೇದವ ಅವರು ವಿದ್ಯಾರ್ಥಿನಿಯ ಜೊತೆ 2013ರ ಜೂನ್ 2ರಂದು ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದು, 2014ರ ಅಕ್ಟೋಬರ್ 16ರಂದು ಎಫ್ಐಆರ್ ದಾಖಲಿಸಲಾಗಿದೆ. ಇದರರ್ಥ ದೂರುದಾರೆ ಮತ್ತು ಅರ್ಜಿದಾರರು ಸಂಬಂಧದಲ್ಲಿದ್ದರು ಎಂಬುದಾಗಿದೆ.
2. ಇಬ್ಬರ ನಡುವಿನ ಸಂಬಂಧ ಹದಗೆಟ್ಟಾಗ ದೂರುದಾರೆಯು ಪ್ರತೀಕಾರ ತೀರಿಸಿಕೊಳ್ಳುವ ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ, ವೇದವ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ಪೀಠವು ಆದೇಶದಲ್ಲಿ ವಿವರಿಸಿದೆ.
3. ದೂರುದಾರೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಕೊತೆ ಲೈಂಗಿಕ ಸಂಪರ್ಕ ಬೆಳೆಸಿರುವುದಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ವಿವರಣೆ ಇಲ್ಲ. ಆದರೆ, ಅರ್ಜಿದಾರರು ಬಲವಂತವಾಗಿ ಆಕೆಯ ಜೊತೆ ಸಂಭೋಗಿಸಿದ್ದರು ಎಂಬುದು ಆರೋಪವಾಗಿದೆ. ಇದಕ್ಕೆ ಐಪಿಸಿ ಸೆಕ್ಷನ್ 376, 506 ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ : High court : 20 ವರ್ಷದಿಂದ ಅಕ್ರಮವಾಗಿ ಭಾರತದಲ್ಲಿದ್ದ ಮಾತ್ರಕ್ಕೆ ಬಾಂಗ್ಲಾದೇಶದ ಪ್ರಜೆ ಭಾರತೀಯ ಆಗುವುದಿಲ್ಲ ಎಂದ ಕೋರ್ಟ್