Site icon Vistara News

Karnataka High Court: ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ಖಾಸಗಿ ದೂರು ರದ್ದು ಮಾಡಿದ ಹೈಕೋರ್ಟ್

Karnataka High court

karnataka High court

ಬೆಂಗಳೂರು: ಜಾರಿ ನಿರ್ದೇಶಾನಲಯವು (Enforcement Directorate) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ್ದನ್ನು ಖಂಡಿಸಿ ಬೆಂಗಳೂರಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ಸ್ಪೀಕರ್ ಆಗಿರುವ ಸ್ಪೀಕರ್ ಯು.ಟಿ.ಖಾದರ್ (UT Khader) ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು (Private complaint) ಕರ್ನಾಟಕ ಹೈಕೋರ್ಟ್ (Karnataka Hihg Court) ರದ್ದು ಮಾಡಿ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಯು.ಟಿ ಖಾದರ್ ಸೇರಿ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು ಮತ್ತು ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಯು.ಟಿ ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರು ಮತ್ತು ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ ಖಾದರ್ ಅವರು ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಪ್ರಕರಣ ರದ್ದು ಮಾಡಿ‌ ಆದೇಶ ನೀಡಲಾಗಿದೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿನಗರ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿತ್ತು. 2023ರ ಜು.7ರಂದು ಕೋರ್ಟ್ ಆದೇಶ ನೀಡಿತ್ತು. ಆ ಆದೇಶದ ಆಧಾರದ ಮೇಲೆ ಯು.ಟಿ. ಖಾದರ್‌ ಅವರ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಈ ಸುದ್ದಿಯನ್ನೂ ಓದಿ: Karnataka High Court : ಸೌದಿಯಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಶೈಲೇಶ್‌: ಕೇಂದ್ರದ ಮೌನಕ್ಕೆ ಹೈಕೋರ್ಟ್‌ ಆಕ್ಷೇಪ

Exit mobile version