ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಂಗೀತ ಲೋಕದ ನಾದಬ್ರಹ್ಮ ಹಂಸಲೇಖ ಅವರು 413ನೇ ಮೈಸೂರು ದಸರಾದ ಉದ್ಘಾಟನೆಯನ್ನು ಮಾಡಿದ್ದಾರೆ. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ
ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ; ಜಗಮಗಿಸುತ್ತಿದೆ ಮೈಸೂರು
ನವರಾತ್ರಿ ಹಿನ್ನೆಲೆಯಲ್ಲಿ (Mysore Dasara) ಮೈಸೂರು ನಗರದಲ್ಲಿ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಭಾನುವಾರ ಸಂಜೆ ಚಾಲನೆ ನೀಡಿದರು. ರಿಮೋಟ್ ಬಟನ್ ಹೊತ್ತುವ ಮೂಲಕ ವಿದ್ಯುತ್ ದೀಪಾಲಂಕಾರಕ್ಕೆ ಸಚಿವರು ಚಾಲನೆ ನೀಡಿದ್ದು, 98 ವೃತ್ತಗಳು, 59 ಪ್ರತಿಕೃತಿಗಳು ಹಾಗೂ 27 ಇತರೆ ಜಾಗಗಳಲ್ಲಿ ದೀಪಾಲಂಕಾರದಿಂದ ಸಾಂಸ್ಕೃತಿಕ ನಗರಿ ಜಗಮಗಿಸುತ್ತಿದೆ.
https://vistaranews.com/karnataka/dasara-electric-lighting-inaugurated-in-mysore/481476.html
ಬೆಂಗಳೂರು ಸೇರಿ ಮಲೆನಾಡಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ!
ರಾಜ್ಯದಲ್ಲಿ ಅ.15ರಿಂದ 17ರವರೆಗೆ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ. ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ (Rain News) ಸೂಚನೆ ಇದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Karnataka Weather : ಬೆಂಗಳೂರು ಸೇರಿ ಮಲೆನಾಡಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ!
ಅಡುಗೆ ಎಣ್ಣೆ ತುಂಬಿದ ಲಾರಿ ಪಲ್ಟಿ; ಕ್ಯಾನ್ ಹಿಡಿದು ಮುಗಿಬಿದ್ದ ಜನರು
ಅಡುಗೆ ಎಣ್ಣೆ ತುಂಬಿದ ಲಾರಿಯೊಂದು ಪಲ್ಟಿಯಾದ ಪರಿಣಾಮ ಅಲ್ಲಿದ್ದವರು ಎದ್ದನೋ ಬಿದ್ದನೋ ಎಂದು ಓಡಿ ಹೋಗಿ ಬಿಂದಿಗೆ, ಕ್ಯಾನ್‌ಗಳಲ್ಲಿ ಅಡುಗೆ ಎಣ್ಣೆ ತುಂಬಿಸಿಕೊಂಡರು.
https://vistaranews.com/karnataka/vijayanagar/road-accident-lorry-loaded-with-cooking-oil-meets-with-accident/481393.html
ಅ.16, 17ರಂದು ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಐಟಿ ದಾಳಿ ವೇಳೆ ಗುತ್ತಿಗೆದಾರರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕಿರುವುದು, ಭ್ರಷ್ಟಾಚಾರ, ಕಮಿಷನ್ ದಂಧೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ (BJP Protest) ಮುಂದಾಗಿದೆ. ಹೀಗಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಅ.16 ಮತ್ತು 17ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಮತ್ತು ಮಂಡಲಗಳಲ್ಲಿ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ.
BJP Protest: ಅ.16, 17ರಂದು ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾದ ಕೆಪಿಸಿಸಿ: ಸಿ.ಟಿ.ರವಿ
ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಹಿಂದೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು. ಈಗ ಗುತ್ತಿಗೆದಾರ ಅಂಬಿಕಾಪತಿ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ ರೂ., ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ ರೂ., ಹೀಗೆ ಕೋಟಿ ಕೋಟಿ ಹೊರಕ್ಕೆ ಬರುತ್ತಿದೆ. ಇವರಿಬ್ಬರೂ ರಾಜ್ಯದ (Karnataka Politics) ನಂಬರ್ 1, ನಂಬರ್ 2 ಅವರ ಬೇನಾಮಿಗಳಾಗಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
https://vistaranews.com/karnataka/kpcc-turned-into-karnataka-pradesh-commission-congress-says-ct-ravi/481312.html