Site icon Vistara News

Karnataka Live News : ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

karnataka live
Prabhakar R

ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ (Raichur News) ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Prabhakar R

ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

ಖಾಸಗಿ ಬಸ್‌ ಮತ್ತು ಮಹೀಂದ್ರ ಜೀಪ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ನಿಟ್ಟೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

https://vistaranews.com/karnataka/12-injured-in-accident-between-private-bus-and-jeep-in-karkala/529181.html

Deepa S

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

ಹಾಡುಹಗಲೇ ನಗರದಲ್ಲಿ ವಕೀಲರೊಬ್ಬರ ಬರ್ಬರ (lawyer Murder) ಹತ್ಯೆಗೈದು ಪರಾರಿಯಾಗಿದ್ದ ಖತರ್ನಾಕ್‌ ಹಂತಕರನ್ನು (murder case) ಹಡೆಮುರಿ‌ ಕಟ್ಟುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಸ್ತಿಗಾಗಿ ನಡೆದ ದಶಕಗಳ ದ್ವೇಷಕ್ಕೆ ವಕೀಲ ಈರಣ್ಣಗೌಡ ಬಲಿಯಾಗಿದ್ದಾರೆ.

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!
Prabhakar R

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ (Moral Policing) ನಡೆದಿದೆ. ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ವಾರದ ಹಿಂದೆ ನಡೆದಿರುವ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!


Deepa S

ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಜತೆಗೆ ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ
Exit mobile version