ಬರ ಪರಿಹಾರ ಭಿಕ್ಷೆಯಲ್ಲ, ಅದು ರಾಜ್ಯದ ತೆರಿಗೆ ಹಣ ಎಂದ ಸಿದ್ದರಾಮಯ್ಯ
ರಾಜ್ಯಕ್ಕೆ 17,900 ಕೋಟಿ ರೂ.ಗಳ ಬರ ಪರಿಹಾರ (Karnataka Drought) ನೀಡುವಂತೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ವರದಿ ನೀಡಿಲ್ಲ. ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್‌ಡಿಆರ್‌ಎಫ್‌ನಡಿ ಪರಿಹಾರವನ್ನು ನೀಡಬೇಕಿದ್ದು, ಅದು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Karnataka Drought: ಬರ ಪರಿಹಾರ ಭಿಕ್ಷೆಯಲ್ಲ, ಅದು ರಾಜ್ಯದ ತೆರಿಗೆ ಹಣ ಎಂದ ಸಿದ್ದರಾಮಯ್ಯ
ನೇಜಾರು ಕೊಲೆ ಪ್ರಕರಣ; ಮೃತರ ಕುಟುಂಬಸ್ಥರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ
ಒಂದೇ ಕುಟುಂಬದ ನಾಲ್ವರ ಕೊಲೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೃತರ ಕುಟುಂಬಸ್ಥರ ಉಡುಪಿಯ ನೇಜಾರು ನಿವಾಸಕ್ಕೆ (Udupi Murder) ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವೆ, ಅವರಿಗೆ ಸಾಂತ್ವನ ಹೇಳಿ, ಕುಟುಂಬಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.
Udupi Murder: ನೇಜಾರು ಕೊಲೆ ಪ್ರಕರಣ; ಮೃತರ ಕುಟುಂಬಸ್ಥರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ
Opposition Leader : ಆರ್. ಅಶೋಕ್‌ಗೆ ವಿಪಕ್ಷ ನಾಯಕ ಸ್ಥಾನ ಫಿಕ್ಸ್; ಸಮಾಧಾನಗೊಂಡರೇ ಯತ್ನಾಳ್?
ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಬಹುತೇಕ ಫೈನಲ್ ಆಗಿದೆ. ಆರ್. ಅಶೋಕ್ ಅವರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ ಎನ್ನಲಾಗಿದೆ. ಕಿರಿಯ-ಹಿರಿಯ ಫಾರ್ಮೂಲಾವನ್ನು ಉಪಯೋಗಿಸಲಾಗಿದ್ದು, ಎರಡೂ ವರ್ಗದವರಿಗೂ ಅಸಮಾಧಾನವಾಗದಂತೆ ನೋಡಿಕೊಳ್ಳಲು ಈ ತೀರ್ಮಾನವನ್ನು ಕೈಗೊಳ್ಳಲಾಗಿದ ಎಂದು ಮೂಲಗಳು ತಿಳಿಸಿವೆ.
Opposition Leader : ಆರ್. ಅಶೋಕ್‌ಗೆ ವಿಪಕ್ಷ ನಾಯಕ ಸ್ಥಾನ ಫಿಕ್ಸ್; ಸಮಾಧಾನಗೊಂಡರೇ ಯತ್ನಾಳ್?
HD Kumaraswamy : ಹುಷಾರ್…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ಮತ್ತೆ ಸದ್ದು ಮಾಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಕೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಪೆನ್‌ಡ್ರೈವ್ ಠುಸ್ ಎಂದೆಲ್ಲ ಹೇಳಬೇಡಿ. ಅದೇನು ಠುಸ್ ಆಗಿಲ್ಲ. ನಿಮ್ಮ ಸಚಿವರು ಮನವಿ ಮಾಡಿಕೊಂಡಿದ್ದಕ್ಕೆ ಬಿಟ್ಟಿದ್ದೇನೆ ಎಂಬರ್ಥದಲ್ಲಿ ಗುಡುಗಿದ್ದಾರೆ.
HD Kumaraswamy : ಹುಷಾರ್…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ
Indira Canteen : ಇಂದಿರಾ ಕ್ಯಾಂಟೀನ್‌ಗೆ ಮರುಜೀವ; 188 ಕಡೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ
ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಮಾಡಲು ಕೆಟಿಪಿಪಿ ಕಾಯಿದೆಯ ಕಾಲಂ 4G ವಿನಾಯಿತಿ ನೀಡಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರದ ಇತರ ಕಡೆ ಕ್ಯಾಂಟಿನ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ.
Indira Canteen : ಇಂದಿರಾ ಕ್ಯಾಂಟೀನ್‌ಗೆ ಮರುಜೀವ; 188 ಕಡೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ