ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟ್ರೇಲರ್ ರಿಲೀಸ್
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟ್ರೇಲರ್ ಅನ್ನು ಚಿತ್ರತಂಡ ಶುಕ್ರವಾರ ಬಿಡುಗಡೆ ಮಾಡಿದೆ. ನಟ ರಾಜ್ ಬಿ ಶೆಟ್ಟಿ (Raj B Shetty) ಹಾಗೂ ಆರ್.ಜೆ. ಸಿರಿ ರವಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರ ಆ್ಯಪಲ್ ಬಾಕ್ಸ್ ನಿರ್ಮಾಣ ಸಂಸ್ಥೆಯಲ್ಲಿ ಮೂಡಿಬಂದ ಈ ಸಿನಿಮಾ, ನವೆಂಬರ್ 24ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ.
Raj B Shetty: ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟ್ರೇಲರ್ ರಿಲೀಸ್
ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ
ಬಹು ನಿರೀಕ್ಷಿತ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಹಿರಿಯ ಶಾಸಕ, ಮಾಜಿ ಡಿಸಿಎಂ ಅಶೋಕ್ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆಮಾಡಲಾಗಿದ್ದು, ರಾಜ್ಯದ ಬಿಜೆಪಿ ಅಧ್ಯಕ್ಷನಾಗಿ ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ನಾನು, ಅಶೋಕ್ ಅವರು ಒಗ್ಗಟ್ಟಾಗಿ ಬಡವರ ವಿರೋಧಿ, ರೈತ ವಿರೋಧಿಯಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳಗೆ, ಹೊರಗೆ ಜನರ ಧ್ವನಿಯಾಗಿ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Opposition Leader: ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ
ಸರ್ಕಾರ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದೆ, ಇದಕ್ಕೆಲ್ಲ ಜಗ್ಗಲ್ಲ ಎಂದ ಎಚ್‌ಡಿಕೆ
ಈ ಸರ್ಕಾರ ನನ್ನ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಹೊರಟಿದೆ. ಇದಕ್ಕೆಲ್ಲ ಜಗ್ಗುವವ ನಾನಲ್ಲ. ಇದನ್ನೆಲ್ಲ ಎದುರಿಸುವ ಶಕ್ತಿ ನನಗಿದೆ. ಯಾವುದೇ ತನಿಖೆ ನಡೆಸಲಿ, ಅದಕ್ಕೆ ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
https://vistaranews.com/karnataka/this-government-is-going-to-take-revenge-against-me-says-hd-kumaraswamy/509286.html
ತಮಿಳು ಮಾತುಗಳಿಗೆ ಕ್ಷಮೆ ಕೇಳಿದ ನಟ ಲೂಸ್ ಮಾದ ಯೋಗಿ
ಕಾರ್ಯಕ್ರಮವೊಂದರಲ್ಲಿ ತಮಿಳಿನಲ್ಲಿ ಮಾತನಾಡಿದ್ದಕ್ಕೆ ಸ್ಯಾಂಡಲ್‌ವುಡ್ ನಟ ಲೂಸ್ ಮಾದ ಯೋಗಿ (Loose Maada Yogi) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿನಿಮಾ ಪ್ರಚಾರದ ವೇಳೆ ಆಡಿದ್ದ ತಮ್ಮ ಮಾತುಗಳು ವಿವಾದಕ್ಕೆ ಆಸ್ಪದ ನೀಡಿದ್ದರಿಂದ ಇದೀಗ, ನಟ ಲೂಸ್ ಮಾದ ಯೋಗಿ ಅವರು ಕ್ಷಮೆಯಾಚಿಸಿದ್ದಾರೆ.
Loose Mada Yogi: ತಮಿಳು ಮಾತುಗಳಿಗೆ ಕ್ಷಮೆ ಕೇಳಿದ ನಟ ಲೂಸ್ ಮಾದ ಯೋಗಿ
ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ; ಬಿಎಸ್‌ವೈ ಮೇಲುಗೈ
ಬಿಜೆಪಿಯಿಂದ ವಿರೋಧ ಪಕ್ಷದ (Opposition Leader) ನಾಯಕನ ಆಯ್ಕೆ ಕೊನೆಗೂ ಅಂತಿಮವಾಗಿದೆ. ಮಾಜಿ ಡಿಸಿಎಂ ಆರ್. ಅಶೋಕ್ (R Ashok) ಅವರನ್ನು ವಿಪಕ್ಷ ನಾಯಕ ಎಂದು ಬಿಜೆಪಿ ಹೈಕಮಾಂಡ್ (BJP high command) ಘೋಷಣೆ ಮಾಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Former CM BS Yediyurappa) ಅವರ ಪಾರುಪತ್ಯ ಮುಂದುವರಿದಂತಾಗಿದೆ. ಯಡಿಯೂರಪ್ಪ ಅವರು ಸೂಚಿಸಿದವರೇ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರಾಗಿ ಆಯ್ಕೆಯಾದಂತೆ ಆಗಿದೆ.
Opposition Leader : ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ; ಬಿಎಸ್‌ವೈ ಮೇಲುಗೈ