ಕರ್ನಾಟಕ
Karnataka Live News : ರಾಜ್ಯದಲ್ಲಿನ ಪ್ರಮುಖ ಬೆಳವಣಿಗೆಗಳ ಲೇಟೆಸ್ಟ್ ಮಾಹಿತಿ ; ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಬಂಧನ
Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್ ಡೇಟ್ಸ್ ಗಳು ಇಲ್ಲಿವೆ.
ಕರ್ನಾಟಕ
Gold Rate Today: ಬಂದ್ ನಡುವೆ ಬಂಗಾರದ ಬೆಲೆ ಇಳಿಕೆ, ಇಷ್ಟಿದೆ ಇಂದು ದರ
22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಮಂಗಳವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹20 ಹಾಗೂ ₹21 ಇಳಿದಿದೆ.
ಬೆಂಗಳೂರು: 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಮಂಗಳವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹20 ಹಾಗೂ ₹21 ಇಳಿದಿದೆ.
ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5,475ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 54,750 ಮತ್ತು ₹ 5,47,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹5,973 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,784 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹59,730 ಮತ್ತು ₹ 5,97,300 ವೆಚ್ಚವಾಗಲಿದೆ.
ಒಂದು ಗ್ರಾಂ ಬೆಳ್ಳಿಯ ಬೆಲೆ ₹ 75, ಎಂಟು ಗ್ರಾಂ ₹600 ಮತ್ತು 10 ಗ್ರಾಂ ₹ 750ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,500 ಮತ್ತು 1 ಕಿಲೋಗ್ರಾಂಗೆ ₹ 75,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.
ನಗರ | 22 ಕ್ಯಾರಟ್ | 24 ಕ್ಯಾರಟ್ |
ದಿಲ್ಲಿ | 54,900 | 59,880 |
ಮುಂಬಯಿ | 54,900 | 59,880 |
ಬೆಂಗಳೂರು | 54,750 | 59,730 |
ಚೆನ್ನೈ | 55,050 | 60,050 |
ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:
ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.
ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.
ಕರ್ನಾಟಕ
Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!
Cauvery water dispute : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸರ್ಕಾರದ ಆಡಳಿತ ವೈಖರಿಯನ್ನು ಟೀಕೆ ಮಾಡಿದೆ. ಅಲ್ಲದೆ, ಹಲವು ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಉತ್ತರ ಇಲ್ಲ ಎಂದು ಹೇಳಿದೆ. ಜತೆಗೆ ರಾಜ್ಯ ಸರ್ಕಾರಕ್ಕೆ ಏಳು ಪ್ರಶ್ನೆಗಳನ್ನು ಕೇಳಿದೆ.
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಬೆಂಗಳೂರು ಬಂದ್ ತೀವ್ರತೆ ಪಡೆದುಕೊಂಡಿದೆ. ಇದೇ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಬಿಜೆಪಿ ಸಹ ರಾಜಧಾನಿ ಬೆಂಗಳೂರಿನ ಹಲವು ಕಡೆ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದೆ. ಈಗ ಕರ್ನಾಟಕ ಬಿಜೆಪಿಯು (BJP Karnataka) ರಾಜ್ಯ ಸರ್ಕಾರಕ್ಕೆ ಪ್ರಮುಖವಾಗಿ ಏಳು ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ, ಜನತಾ ದರ್ಶನದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಏಳು ಪ್ರಶ್ನೆಗಳನ್ನು ಕೇಳಿದೆ.
ತಮಿಳುನಾಡಿಗೆ ಕಾವೇರಿ ನೀರು (Cauvery water to Tamil Nadu) ಬಿಟ್ಟಿರುವ ಕ್ರಮವನ್ನು ಪ್ರಶ್ನಿಸಿರುವ ರಾಜ್ಯ ಬಿಜೆಪಿ, ಅನ್ನಭಾಗ್ಯ ಯೋಜನೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ಕಾರದ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನೆ ಮಾಡಿದೆ. ಇನ್ನು ಬಸ್ ಸೌಕರ್ಯ ಹಾಗೂ ಅಭಿವೃದ್ಧಿ ವಿಷಯವನ್ನೂ ಬಿಜೆಪಿ ಎತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ “ಎಕ್ಸ್”ನಲ್ಲಿ ಬಿಜೆಪಿ ಕರ್ನಾಟಕ ಪೋಸ್ಟ್‌ವೊಂದನ್ನು ಅಪ್ಲೋಡ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಇದನ್ನೂ ಓದಿ: Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್, ಬಾಯ್ ಬಾಯ್ ಎಂದ ಕಂಡಕ್ಟರ್
ಬಿಜೆಪಿ ಪೋಸ್ಟ್‌ನಲ್ಲೇನಿದೆ?
ಜನತಾ ದರ್ಶನವೆಂಬ (Janata Darshan) ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗೆ ಅವರ ಬಳಿ ಇಲ್ಲ ಉತ್ತರ..!
- ಚುನಾವಣೆಗೂ ಮುನ್ನ ಘೋಷಿಸಿದ ಅನ್ನಭಾಗ್ಯದ ಹತ್ತು ಕೆಜಿ ಅಕ್ಕಿ ಕೊಡುತ್ತಿಲ್ಲ ಏಕೆ?
- ಬರಗಾಲ ಬಂದಿದ್ದರೂ ಸುಪ್ರೀಂ ತೀರ್ಪಿಗೂ ಮುನ್ನ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇಕೆ..?
- ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಯೋಜನೆಗಳನ್ನು ಕನ್ನಡಿಗರಿಗೆ ದೊರಕದಂತೆ ಮಾಡಿದ್ದೀರಿ ಏಕೆ?
- ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ತಡೆಯಲು ಪ್ರಯತ್ನ ಮಾಡುತ್ತಿಲ್ಲವೇಕೆ?
- ಹಳ್ಳಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳನ್ನು ಸರ್ಕಾರ ಬಿಡುತ್ತಿಲ್ಲ ಏಕೆ?
- ಒಂದು ಸಮುದಾಯದ ಉದ್ದಾರಕ್ಕೆ ನೂರಾರು ಕೋಟಿ ಕೊಟ್ಟಿದ್ದೀರಿ. ಆದರೆ, ನಿಮ್ಮಿಂದ ಬೇರೆ ಅಭಿವೃದ್ಧಿ ಆಗುತ್ತಿಲ್ಲವೇಕೆ?
- ಪ್ರತಿಯೊಂದರ ಬೆಲೆ ಏರಿಕೆ ಮಾಡಿ ಸ್ವಾಭಿಮಾನಿ ಕನ್ನಡಿಗರ ಬದುಕನ್ನು ಬೀದಿಗೆ ತಂದಿದ್ದೀರಿ ಏಕೆ?
ಇದನ್ನೂ ಓದಿ: Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?
ಈ ರೀತಿಯಾಗಿ ಕಾಂಗ್ರೆಸ್ ಸರ್ಕಾರದ ನಡೆಯನ್ನು ಬಿಜೆಪಿ ಟೀಕೆ ಮಾಡಿದೆ. ಅಲ್ಲದೆ, “ವಿಧಾನಸೌಧದಲ್ಲಿ ಕೈಗೆ ಸಿಗದ ಸಚಿವರು ಅಡಗುತಾಣದಲ್ಲಿ ಅವಿತು ಕುಳಿತಿದ್ದಾರೆ” ಎಂದು ಸಚಿವರ ನಡೆಯನ್ನು ಟೀಕಿಸಿದೆ. ರಾಜ್ಯದ ಜನರು ಬೀದಿಯಲ್ಲಿ ನಿಂತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ಪೋಸ್ಟ್ ಮೂಲಕ ಕಿಡಿಕಾರಿದೆ.
ಕರ್ನಾಟಕ
Veerendra Patil : ಮಾಜಿ ಸಿಎಂ ವೀರೇಂದ್ರ ಪಾಟೀಲ್ ಪತ್ನಿ ಶಾರದಾ ಪಾಟೀಲ್ ವಿಧಿವಶ
Veerendra Patil : ರಾಜ್ಯದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ನಿಧನರಾಗಿದ್ದಾರೆ. ವೀರೇಂದ್ರ ಪಾಟೀಲ್ ಅವರು 1997ರಲ್ಲಿ ನಿಧನರಾಗಿದ್ದರು.
ಕಲಬುರಗಿ: ರಾಜ್ಯದ ಮಾಜಿ ಮುಖ್ಯಮಂತ್ರಿ (Former Chief minister) ವೀರೇಂದ್ರ ಪಾಟೀಲ್ (Veerendra patil) ಅವರ ಪತ್ನಿ ಶಾರದಾ ಪಾಟೀಲ್ (Sharada Patil) ಅವರು ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ಆಗಿತ್ತು.
ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಇದ್ದ ಅವರು ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಚಿಂಚೋಳಿಯ ವೀರೇಂದ್ರ ಪಾಟೀಲ್ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸುವ ಚಿಂತನೆ ಇದೆ. ಶಾರದಾ ಪಾಟೀಲ್ ಅವರು ಮಾಜಿ ಶಾಸಕ ಕೈಲಾಸನಾಥ ಪಾಟೀಲ್ ಅವರ ತಾಯಿಯಾಗಿದ್ದಾರೆ.
ವೀರೇಂದ್ರ ಪಾಟೀಲ್-ಶಾರದಾ ಪಾಟೀಲ್ ದಂಪತಿಗೆ ಕೈಲಾಶನಾಥ್ ಮತ್ತು ಇಬ್ಬರು ಪುತ್ರಿಯರಿದ್ದಾರೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವೀರೇಂದ್ರ ಪಾಟೀಲ್ ಅವರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 1968-1971 ಅವಧಿಯಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ 33 ತಿಂಗಳು 10 ದಿನ ಅಧಿಕಾರ ನಡೆಸಿದ್ದರು. 1989-1990ರ ಎರಡನೇ ಬಾರಿಗೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅವರು ನಿಜಲಿಂಗಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕೆಲಸ ಮಾಡಿದ್ದರು.
ವೀರೇಂದ್ರ ಪಾಟೀಲ್ ಅವರ ಸಾಹಸಿಕ ರಾಜಕೀಯ ಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದರು ಶಾರದಾ ಪಾಟೀಲ್. ವೀರೇಂದ್ರ ಪಾಟೀಲ ಅವರು 1997ರ ಮಾರ್ಚ್ 14ರಂದು ನಿಧನರಾಗಿದ್ದರು.
ಇದನ್ನೂ ಓದಿ: BS Viswanathan : ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಸ್. ವಿಶ್ವನಾಥನ್ ನಿಧನ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪಾಟೀಲ್ ಸಂತಾಪ
ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರ ನಿಧನದ ವಿಚಾರ ಬೇಸರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಆದರ್ಶ ಗೃಹಿಣಿಯಾಗಿದ್ದರು. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಮೃತರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಉಡುಪಿ
Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಲ್ಕು ಜಿಲ್ಲೆಗಳಿಗೆ ಅಲರ್ಟ್
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಒಳನಾಡಲ್ಲಿ ಹಗುರ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Live News5 hours ago
Bangalore Bandh Live: ಬೆಂಗಳೂರು ಬಂದ್; ಪ್ರತಿಭಟನಾಕಾರರ ಬಂಧನ, ಆತ್ಮಹತ್ಯೆ ಯತ್ನ, ಎಲ್ಲೆಲ್ಲಿ ಏನೇನಾಗ್ತಿದೆ?
-
ವಿದೇಶ22 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ20 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ14 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ದೇಶ12 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
ಕರ್ನಾಟಕ15 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema18 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ದೇಶ20 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!