ಬೆಂಗಳೂರು: ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ (Corrupt Officers) ಲೋಕಾಯುಕ್ತ ಶಾಕ್ ಮುಟ್ಟಿಸಿದೆ. ರಾಜ್ಯದ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ (Lokayukta Raid) ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದು, ಒಬ್ಬೊಬ್ಬ ಅಧಿಕಾರಿ ಬಳಿಯಿಂದಲೂ ಕೋಟ್ಯಂತರ ರೂ. ನಗದು, ಭಾರಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ.
ಕಲಬುರಗಿಯಲ್ಲಿ ಬಿಬಿಎಂಪಿ ರೆವೆನ್ಯೂ ಅಧಿಕಾರಿ ಬಸವರಾಜ ಮಾಗಿ, ಮಂಡ್ಯದಲ್ಲಿ ಗ್ರಾಮೀಣ ನೀರು ಸರಬರಾಜು ನಿವೃತ್ತ ಎಕ್ಷಿಕ್ಯೂಟಿವ್ ಇಂಜಿನಿಯರ್ ಶಿವರಾಜು ಎಸ್., ಚಿತ್ರದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಚೀಫ್ ಇಂಜಿನಿಯರ್ ಎಂ. ರವೀಂದ್ರ, ಧಾರವಾಡದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಶೇಖರ ಗೌಡ, ಬೆಳಗಾವಿಯಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವ ಬನ್ನೂರ್, ದಾವಣೆಗೆರೆಯಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಡಿ.ಎಚ್ ಉಮೇಶ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಂ.ಎಸ್ ಪ್ರಭಾಕರ್, ಮೈಸೂರಿನಲ್ಲಿ ಸೂಪರಿಂಟೆಂಡೆಂಟ್ ಇಂಜಿಯರ್ ಮಹೇಶ್ ಕೆ., ಹಾಸನದಲ್ಲಿ ಸೆಕ್ರೆಟರಿ ಎನ್.ಎಂ ಜಗದೀಶ್, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್ ಇಂಜಿಯರ್ ಕೆ.ಜಿ ಜಗದೀಶ್ ಇವರುಗಳ ಮನೆಗಳು, ಕಚೇರಿಗಳು ಹಾಗೂ ಇತರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ದಾಳಿ ವೇಳೆ ಸಿಕ್ಕ ಹಣ, ವಸ್ತುಗಳ ವಿವರ
ಡಿ. ಮಹದೇವ ಬನ್ನೂರ್: ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ-ವಿಭಾಗ, ಬೆಳಗಾವಿ-ಒಟ್ಟು 4 ಸ್ಥಳಗಳಲ್ಲಿ ಶೋಧ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ– 3 ವಾಸದ ಮನೆಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ 1,00,50,000 ರೂ.
ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 184,122 ರೂ. ನಗದು, 20,33,526 ರೂ. ಬೆಲೆ ಬಾಳುವ ಚಿನ್ನಾಭರಣಗಳು, 7,50,000/- ರೂ ಬೆಲೆ ಬಾಳುವ ವಾಹನಗಳು, ಎಲ್ಲ ಸೇರಿ ಒಟ್ಟು ಮೌಲ್ಯ 29,67,648 ರೂ., ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಡಿ.ಎಚ್. ಉಮೇಶ್: ಕಾರ್ಯಪಾಲಕ ಅಭಿಯಂತರರು(ವಿ), ಕೆ.ಪಿ.ಟಿ.ಸಿ.ಎಲ್, ಚಿಕ್ಕಮಗಳೂರು, ನೌಕರನಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ
ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ– 4 ನಿವೇಶನಗಳು, 4 ವಾಸದ ಮನೆಗಳು, 2 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 4,83,00,000 ರೂ.
ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 40,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 15,00,000 ರೂ., ಬೆಲೆಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ 55,00,000 ರೂ.
ಎಂ. ಎಸ್. ಪ್ರಭಾಕರ್: ಸಹಾಯಕ ಕಾರ್ಯಪಾಲಕ ಅಭಿಯಂತರರು(ವಿ), ಬೆಸ್ಕಾಂ ವಿಜಿಲೆನ್ಸ್ ಪೊಲೀಸ್ ಠಾಣೆ, ದಾವಣಗೆರೆ, ನೌಕರನಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧ
ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ– 2 ನಿವೇಶನಗಳು, 2 ವಾಸದ ಮನೆಗಳು, 4 ಎಕರೆ 33 ಗುಂಟೆ ಕೃಷಿ ಜಮೀನು. ಒಟ್ಟು ಮೌಲ್ಯ ರೂ. 1.57.97,391 ರೂ.
ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 3,00,000 ರೂ. ನಗದು, 30,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 50,000 ರೂ. ಬೆಲೆಬಾಳುವ ವಾಹನಗಳು, 10,00,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. 4,35,00,00 ರೂ., ಕರ್ನಾಟಕ ಲೋಕಾಯುಕ, ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ
ಶೇಖರ್ ಗೌಡ ಹನುಮಗೌಡ ಕುರಡಗಿ: ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬೆಳಗಾವಿ, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ– 5 ನಿವೇಶನ, 4 ವಾಸದ ಮನೆಗಳು, 83 ಎಕರೆ. ಕೃಷಿ ಜಮೀನು ಎಲ್ಲಾ ಸೇರಿ ಒಟ್ಟು ಮೌಲ್ಯ 6,73,18,999 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,65,000 ರೂ. ನಗದು, ವಾಹನಗಳು 88,17,645 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಕರ್ನಾಟಕ ಲೋಕಾಯುಕ, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಎಂ. ರವೀಂದ್ರ, ಮುಖ್ಯ ಅಭಿಯಂತರರು(ನಿವೃತ್ತ), ಲೋಕೋಪಯೋಗಿ ಇಲಾಖೆ, ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 6 ವಾಸದ ಮನೆ. 49-16 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 3,92,55,000 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ– 37.500 ರೂ. ನಗದು, 83,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 1,00,00,000 ರೂ. ಮೌಲ್ಯದ ವಾಹನಗಳು, ರೂ 50,00,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳ ಮೌಲ್ಯವು 2,33,37,500 ರೂ. ಇದೆ.
ಕೆ. ಜಿ. ಜಗದೀಶ: ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆ, ನೌಕರನಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 5 ನಿವೇಶನಗಳು, 7 ವಾಸದ ಮನೆಗಳು, 36- 20 ಎಕರೆ ಕೃಷಿ ಜಮೀನು. ಒಟ್ಟು ಮೌಲ್ಯ 5.01,80,000 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 2,400 ರೂ. ನಗದು. 3,11,302 ರೂ. ಬೆಲೆ ಬಾಳುವ ಚಿನ್ನಾಭರಣಗಳು, 18,00,000 ರೂ. ಬೆಲೆಬಾಳುವ ವಾಹನಗಳು, 3,50,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು 24,61,302 ರೂ., ಕರ್ನಾಟಕ ಲೋಕಾಯುಕ್ತ, ಮಂಡ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಶಿವರಾಜು, ಎಸ್: ಕಾರ್ಯಪಾಲಕ ಅಭಿಯಂತರರು(ನಿವೃತ್ತ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಡ್ಯ ಜಿಲ್ಲೆ. ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನ, 3 ವಾಸದ ಮನೆಗಳು, 10 ಎಕರೆ ಕೃಷಿ ಜಮೀನು, ಒಟ್ಟು ಮೌಲ್ಯ ರೂ. 2,91,04.500 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 6,00,000 ರೂ. ನಗದು, 8,00,000 ರೂ. ಬೆಲೆ ಬಾಳುವ ಚಿನ್ನಾಭರಣ 90,00,000 ರೂ. ಮೌಲ್ಯದ ವಾಹನಗಳು, 2,06,48,500 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ 3,05,48,590 ರೂ. ಕರ್ನಾಟಕ ಲೋಕಾಯುಕ್ತ, ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ವಿಜಯಣ್ಣ: ತಹಶೀಲ್ದಾರ್, ಹಾರೋಹಳ್ಳಿ ತಾಲೂಕು, ರಾಮನಗರ ಜಿಲ್ಲೆ, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 9 ವಾಸದ ಮನೆಗಳು, 13 ಎಕರೆ ಕೃಷಿ ಜಮೀನು, ಒಟ್ಟು ಮೌಲ್ಯ 2,53,98,000 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 2,42,000 ರೂ. ನಗದು, 22,57,000 ರೂ. ಬೆಲೆ ಬಾಳುವ ಚಿನ್ನಾಭರಣ 43,15,000 ರೂ. ಮೌಲ್ಯದ ವಾಹನಗಳು, 34,00,000 ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಮತ್ತು ಇತರೆ ಸೇರಿ ಒಟ್ಟು 1,02,14,000 ರೂ., ಕರ್ನಾಟಕ ಲೋಕಾಯುಕ, ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ
ಮಹೇಶ್. ಕೆ: ಅಧೀಕ್ಷಕ ಅಭಿಯಂತರರು, ಕಬಿನಿ ಮತ್ತು ವರುಣ ನಾಲಾ ವೃತ್ತ, ಮೈಸೂರು, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನ. 3 ವಾಸದ ಮನೆಗಳು, 11 ಎಕರೆ 20 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 3,93,00,000 ರೂ.
ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ-22,80,705 ರೂ. ನಗದು ಸೇರಿ ಎಲ್ಲಾ ಸೇರಿ ಒಟ್ಟು ಮೌಲ್ಯ 50,00,000 ರೂ., ಕರ್ನಾಟಕ ಲೋಕಾಯುಕ್ತ, ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Atal Setu: 17 ಸಾವಿರ ಕೋಟಿ ರೂ. ವೆಚ್ಚದ ಅಟಲ್ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು; ಭಾರಿ ಭ್ರಷ್ಟಾಚಾರ?