ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ಶಾಸಕರನ್ನು ಸೇರಿಸಿಕೊಳ್ಳಲು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಅಸ್ತು ಎಂದಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ ಸೇರಿ 24 ಶಾಸಕರು ಸಿದ್ದು ಸಂಪುಟ ಸೇರಿದ್ದಾರೆ. ನಿರೀಕ್ಷೆಯಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ದಿನೇಶ್ ಗುಂಡೂರಾವ್ ಅವರು ಕೂಡ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಎಂದಿನಂತೆ ಸಿದ್ದರಾಮಯ್ಯ ಆಪ್ತರಿಗೇ ಮಣೆ ಹಾಕಲಾಗಿದ್ದು, ಆ ಮೂಲಕ ಸಿದ್ದು ಸಂಪುಟದಲ್ಲೂ ಹಿಡಿತ ಸಾಧಿಸಿದ್ದಾರೆ.
ಎಚ್.ಕೆ. ಪಾಟೀಲ್, ಈಶ್ವರ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಚೆಲುವರಾಯಸ್ವಾಮಿ, ಶರಣಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಸಂತೋಷ್ ಲಾಡ್, ವಿರೋಧದ ಮಧ್ಯೆಯೂ ಎನ್.ಎಸ್ ಬೋಸರಾಜು, ಎಂ.ಸಿ. ಸುಧಾಕರ್, ಡಿ.ಸುಧಾಕರ್, ಎಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಕೃಷ್ಣ ಬೈರೇಗೌಡ ಸೇರಿ 24 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇನ್ನು ಬಹುತೇಕ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಎಂಬುದು ಮಹತ್ವದ ವಿಷಯವಾಗಿದೆ.
ಇಲ್ಲಿದೆ ನೂತನ ಸಚಿವರ ಪಟ್ಟಿ
ಸವದಿಗಿಲ್ಲ ಮಂತ್ರಿ ಭಾಗ್ಯ
ಸಂಪೂರ್ಣ ಸಂಪುಟ ರಚನೆಗೆ ಹೈಕಮಾಂಡ್ ನಿರ್ಧರಿಸಿದೆ. ಆದರೆ, ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಕೊಟ್ಟಿದೆ. ಹಾಗೆಯೇ, ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ನೆರವಾದ, ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಮೇಲುಗೈ ಸಾಧಿಸಲು ಪ್ರಮುಖ ಪಾತ್ರ ನಿರ್ವಹಿಸಿದ ಲಕ್ಷ್ಮಣ ಸವದಿ ಅವರಿಗೆ ಮಂತ್ರಿಗಿರಿ ಕರುಣಿಸಿಲ್ಲ. ಇನ್ನು, ರಾಯಚೂರು ಜಿಲ್ಲೆಯ ಕೈ ನಾಯಕರ ವಿರೋಧದ ನಡುವೆಯೂ ಬೋಸರಾಜು ಅವರಿಗೆ ಮಣೆ ಹಾಕಲಾಗಿದೆ.
ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್
ನನಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎಂದು ಹೇಳಿದ್ದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಹಾಗೆಯೇ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿಲ್ಲ.
ಇದನ್ನೂ ಓದಿ: Karnataka Politics: ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಸಚಿವ ಸ್ಥಾನ ಕಳೆದುಕೊಂಡ ಟಿ.ಬಿ. ಜಯಚಂದ್ರ !