ಕರ್ನಾಟಕ
Karnataka Politics: ಬಿಜೆಪಿ ಕಾಲದ ಹಗರಣಗಳ SIT ತನಿಖೆ?; ಅಧಿವೇಶನದಲ್ಲಿ ಪ್ರತಿಪಕ್ಷ ಕಟ್ಟಿ ಹಾಕಲು ಪ್ಲ್ಯಾನ್?
Karnataka Politics: ಬಿಜೆಪಿ ಕಾಲದಲ್ಲಿ ನಡೆದಿದೆ ಎನ್ನಲಾದ ಎಲ್ಲ ಹಗರಣಗಳ ತನಿಖೆಗೆ ವಿಧಾನಸಭಾ ಅಧಿವೇಶನಕ್ಕೆ ಮುನ್ನವೇ ತನಿಖೆ ಆದೇಶ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ (Budget session) ಜುಲೈ 3ರಿಂದ ಆರಂಭಗೊಳ್ಳಲಿದ್ದು, ಅದಕ್ಕಿಂತ ಮೊದಲು ಬಿಜೆಪಿ ಕಾಲದ ಹಗರಣಗಳ (Scams under BJP Government) ತನಿಖೆಗೆ ಆದೇಶ ನೀಡಬೇಕು ಎಂಬ ಒತ್ತಡ ಹೆಚ್ಚಿದೆ.
ಈ ಬಜೆಟ್ ಅಧಿವೇಶನದಲ್ಲಿ (Karnataka Politics) ಬಿಜೆಪಿಯು ರಾಜ್ಯ ಸರ್ಕಾರದ (Congress Government) ಗ್ಯಾರಂಟಿಗಳು (Congress Guarantee) ಇನ್ನೂ ಜಾರಿಯಾಗದಿರುವ ವಿಚಾರವನ್ನೇ ಪ್ರಮುಖವಾಗಿ ಉಲ್ಲೇಖಿಸಿ ಕಾಂಗ್ರೆಸ್‌ನ್ನು ಕಟ್ಟಿಹಾಕುವ ಪ್ರಯತ್ನ ನಡೆಸಲಿದೆ. ಇದನ್ನು ತಡೆಯುವುದಕ್ಕಾಗಿ ಕಾಂಗ್ರೆಸ್ ಹಿಂದಿನ ಸರ್ಕಾರದ ಹಗರಣಗಳ ಬಾಣ ಬಿಡಲು ಮುಂದಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಅದು ಪ್ರಕಟಿಸಿದ ಪಂಚ ಗ್ಯಾರಂಟಿಗಳು ಎಷ್ಟು ಕಾರಣವೋ? ಸರ್ಕಾರದ ವಿರುದ್ಧ ಅದು ಅತ್ಯಂತ ವ್ಯವಸ್ಥಿತವಾಗಿ ನಡೆಸಿದ ಭ್ರಷ್ಟಾಚಾರದ ಆರೋಪದ ಪ್ರಚಾರವೂ ಕಾರಣ. ಹೀಗಿರುವಾಗ ಪಕ್ಷ ಈ ವಿಚಾರದಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಕೂಗು ಸರ್ಕಾರದ ಅಂತರಂಗದಲ್ಲಿ ಜೋರಾಗಿದೆ.
ವಿಶೇಷ ತನಿಖಾ ತಂಡ ರಚನೆ ಮಾಡಿ ಹಗರಣಗಳ ತನಿಖೆ ಮಾಡಿಸಬೇಕು ಎಂಬ ಅಭಿಪ್ರಾಯವನ್ನು ಹೆಚ್ಚಿನ ಸಚಿವರು ಮತ್ತು ಶಾಸಕರು ವ್ಯಕ್ತಪಡಿಡುತ್ತಿದ್ದಾರೆ. ಆದರೆ, ಗ್ಯಾರಂಟಿಗಳ ಜಾರಿಯಲ್ಲಿ ಬ್ಯುಸಿಯಾಗಿದ್ದೇವೆ, ತನಿಖೆ ಮಾಡಿಸೋಣ, ವಿಧಾನಸಭಾ ಅಧಿವೇಶನ ಕಳೆಯಲಿ ಎನ್ನುವುದು ಕೆಲವರ ಅಭಿಪ್ರಾಯ.
ತಡಮಾಡುವುದು ಬೇಡ ಎಸ್.ಐ.ಟಿ (SIT Investigation) ತಂಡ ರಚನೆ ಮಾಡಿ ತನಿಖೆ ಶುರು ಮಾಡಿಸೋಣ, ಎಸ್.ಐ.ಟಿ ತಂಡ ರಚನೆ ಆದರೆ ಅಧಿವೇಶನದಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಒತ್ತಾಯಿಸಿದ್ದಾರೆ.
ಎಸ್‌ಐಟಿ ತನಿಖೆ ನಡೆಯುತ್ತಾ?
ಈ ನಡುವೆ, ಬಿಬಿಎಂಪಿ ಮತ್ತು ಬಿಡಿಎ ಅಕ್ರಮಗಳಿಗೆ ಸಂಬಂಧಿಸಿ ಎಸ್ಐಟಿ ಮೂಲಕ ತನಿಖೆ ನಡೆಸುವ ಸುಳಿವನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ. ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ. ಆಗ ಉಳಿದ ಹಗರಣಗಳ ವಿಚಾರದಲ್ಲೂ ಧ್ವನಿ ಎತ್ತಲು ಸಚಿವರು ಸಿದ್ಧರಾಗಿದ್ದಾರೆ.
ತನಿಖಾ ಲಿಸ್ಟ್ ನಲ್ಲಿರುವ ಹಗರಣಗಳು
ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ , ಪಿಎಸ್ಐ ಹಗರಣ, ಸಹಾಯಕ ಪ್ರಧ್ಯಾಪಕರ ನೇಮಕಾತಿ ಹಗರಣದ ಬಗ್ಗೆ ಪ್ರಮುಖಗಾಗಿ ಒತ್ತಾಯ ಕೇಳಿಬಂದಿದೆ. ಇದರ ಜತೆಗೆ ಆರೋಗ್ಯ ಇಲಾಖೆ ಸೇರಿದಂತೆ ಕೆಲ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆಗೆ ಒತ್ತಾಯಿಸಲಾಗುತ್ತಿದೆ.
ತನಿಖೆಗೆ ವಿಶೇಷ ತಂಡ ರಚನೆ ಯಾಕೆ?
ಸಾಮಾನ್ಯವಾಗಿ ಯಾವುದೇ ಹಗರಣಗಳು ನಡೆದಾಗ ಇಲಾಖಾವಾರು ತನಿಖೆ ನಡೆಸುವುದು ವಾಡಿದೆ. ಆದರೆ, ಇಲ್ಲಿ ನಡೆದಿದೆ ಎನ್ನಲಾದ ಕೆಲವು ಹಗರಣಗಳಲ್ಲಿ ತಾಂತ್ರಿಕ ವಿಚಾರಗಳೇ ಪ್ರಮುಖವಾಗಿರುವುದರಿಂದ ಇಲಾಖಾವಾರು ತನಿಖೆ ನಡೆಸುವುದು ಕಷ್ಟ ಎಂಬ ಮಾತಿದೆ. ಹೀಗಾಗಿ ಎಸ್‌ಐಟಿ ತನಿಖೆ ನಡೆಸಿದರೆ ಉತ್ತಮ ಎಂಬ ಮಾತುಗಳಿವೆ.
ಬಿಟ್ ಕಾಯಿನ್ ಹಗರಣದ ತನಿಖೆಗೆ ತಾಂತ್ರಿಕ ಸಮಸ್ಯೆಗಳಿವೆ, ಆದ್ದರಿಂದ ತಂತ್ರಜ್ಞಾನದ ಮಾಹಿತಿ ಇರುವ ಅಧಿಕಾರಿಗಳು ಬೇಕು. ಗಂಗಕಲ್ಯಾಣ ಹಗರಣದಲ್ಲೂ ನಕಲಿ ಬಿಲ್, ಜೊತೆಗೆ ಐಟಿ ರಿಟರ್ನ್ಸ್ ಮಾಡಿದ್ದಾರೆ ಎಂಬ ಆರೋಪವಿದೆ. ಹಾಗಾಗಿ ತಾಂತ್ರಿಕ ಪರಿಣಿತರಿಗೆ ತಂಡದ ಆಗತ್ಯವಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
ಇದನ್ನೂ ಓದಿ: BJP Karnataka: ಒಬ್ಬರನ್ನೂ ಗೆಲ್ಲಿಸಲು ಆಗದವರನ್ನು ಕೋರ್ ಕಮಿಟಿಯಿಂದ ಕಿತ್ಹಾಕಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕೋಲಾಹಲ
ಇನ್ನೊಂದು ಕಡೆಯಲ್ಲಿ ಬಿಜೆಪಿ ಕೂಡಾ ನೀವು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಾ ಬಂದಿದ್ದೀರಿ. ನಿಮ್ಮದೇ ಸರ್ಕಾರ ಬಂದಿದೆ. ಹಾಗಿದ್ದರೂ ಇನ್ನೂ ತನಿಖೆಗೆ ಆದೇಶ ಯಾಕೆ ನೀಡಿಲ್ಲ ಎಂದೇ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನಿಸುವ ಸಾಧ್ಯತೆಯೂ ದಟ್ಟವಾಗಿದೆ. ಹೀಗಾಗಿ ತನಿಖೆಯ ಘೋಷಣೆ ಮಾಡುವುದು ಕಾಂಗ್ರೆಸ್ ಸರ್ಕಾರಕ್ಕೆ ಅನಿವಾರ್ಯವಾಗಿದೆ.
ಕರ್ನಾಟಕ
Cauvery Dispute: ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು
Cauvery Water Dispute: ಕಾವೇರಿ ನದಿ ನೀರು ಹಂಚಿಕೆ (Cauvery Water Dispute) ಗಲಾಟೆ ಹೆಚ್ಚಾಗುತ್ತಿದೆ. ಈ ಮಧ್ಯೆ ತಮಿಳುನಾಡಿನ ರೈತರು ಕೈಯಲ್ಲಿ ಸತ್ತ ಇಲಿಯನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ(Cauvery Dispute) ಗಲಾಟೆ ದಿನ ಕಳೆದಂತೆ ಕಾವೇರುತ್ತಿದೆ. ಈ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಒಡಕು ಮೂಡುವಂತೆ ಮಾಡಿದೆ. ಇತ್ತ ಕರ್ನಾಟಕದ ರೈತರು ನೀರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ತಮಿಳುನಾಡಿನ ಕೃಷಿಕರು ಸತ್ತ ಇಲಿಯನ್ನು ತಮ್ಮ ಬಾಯಿಯ ಬಳಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಹೋರಾಟಕ್ಕೆ ಇಳಿದಿದ್ದಾರೆ.
ತಮಿಳಿನಾಡಿನ ತಿರುಚಿರಪಳ್ಳಿಯಲ್ಲಿ ರೈತರು ಈ ರೀತಿಯ ವಿಚಿತ್ರ ಪ್ರತಿಭಟನೆಗೆ ಇಳಿದು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾವೇರಿ ನೀರು ಒದಗಿಸಬೇಕೆಂದು ಕರ್ನಾಟಕ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸದ್ಯ ಈ ವಿಡಿಯೊ ವೈರಲ್ ಆಗಿದೆ. ಕರ್ನಾಟಕವು ಕಾವೇರಿ ನೀರನ್ನು ತಡೆಹಿಡಿಯುವುದನ್ನು ಮುಂದುವರಿಸಿದರೆ, ಭತ್ತದ ಕೃಷಿಗೆ ನೀರಿನ ಕೊರತೆ ಕಾಡಲಿದೆ. ಇದರಿಂದ ರೈತರು ಬದುಕುಳಿಯಲು ಇಲಿ ಮಾಂಸವನ್ನು ಸೇವಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುವುದನ್ನು ಸಂಕೇತಿಸುವಂತೆ ಇಲಿಯ ಮೃತದೇಹವನ್ನು ಕೈಯಲ್ಲಿಟ್ಟು ಪ್ರತಿಭಟನೆ ನಡೆಸಲಾಗಿದೆ.
#WATCH | A group of Tamil Nadu farmers in Tiruchirappalli holding dead rats in their mouths protest against the Karnataka government and demand the release of Cauvery water to the state from Karnataka pic.twitter.com/CwQyVelyjF
— ANI (@ANI) September 26, 2023
ಇದೇ ಮೊದಲ ಸಲ ಅಲ್ಲ
ವಿಶೇಷವೆಂದರೆ ರೈತರು ಈ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಇದು ಮೊದಲ ಸಲವೇನಲ್ಲ. 2017ರಲ್ಲಿ 65 ವರ್ಷದ ಚಿನ್ನಗೊಡಂಗಿ ಪಳನಿಸ್ವಾಮಿ ಎನ್ನುವ ರೈತರೊಬ್ಬರು ಜೀವಂತ ಇಲಿಯೊಂದನ್ನು ಹಲ್ಲಿನ ನಡುವೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಆ ಮೂಲಕ ತಮಿಳುನಾಡಿನ ರೈತರ ಸಮಸ್ಯೆಯನ್ನು ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.
“ಪರಿಸ್ಥಿತಿ ಸುಧಾರಿಸದಿದ್ದರೆ ನಾವು ಇಲಿಗಳನ್ನು ಸೇವಿಸ ಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಸಂದೇಶವನ್ನು ನಾನು ನನ್ನ ಸಹವರ್ತಿಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದೆ” ಎಂದು ಚಿನ್ನಗೊಡಂಗಿ ಪಳನಿಸ್ವಾಮಿ ತಿಳಿಸಿದ್ದರು.
ಅದಕ್ಕೂ ಮೊದಲು 2016ರಲ್ಲಿ, ತಮಿಳುನಾಡಿನ ತಿರುಚ್ಚಿಯಲ್ಲಿ ಸುಮಾರು 30 ರೈತರ ಗುಂಪು ಸತ್ತ ಇಲಿಗಳನ್ನು ಬಾಯಿ ಬಳಿ ಹಿಡಿದುಕೊಂಡು ಪ್ರತಿಭಟನೆ ನಡೆಸಿತ್ತು. ನೀರಿನ ಬಿಕ್ಕಟ್ಟು ಭತ್ತದ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಿದೆ ಮತ್ತು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಆರ್ಥಿಕ ಸಂಕಷ್ಟದ ಪರಿಣಾಮವಾಗಿ ಇಲಿ ಮಾಂಸವನ್ನೂ ರೈತರು ಸೇವಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬುದನ್ನು ಆ ಗುಂಪು ವಿವರಿಸಿತ್ತು.
ಇದನ್ನೂ ಓದಿ: Cauvery Dispute : 3000 ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?
ರಾಜ್ಯಕ್ಕೆ ಹೊಡೆತ
ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಕರ್ನಾಟಕ
Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್ ಪೇಪರ್ ಲೂಟಿ
Rowdism in Ramanagara : ರಾಮನಗರದ ಒಂದು ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ನಡೆಸಬಾರದು ಎಂದು ಆಗ್ರಹಿಸಿದ ರೌಡಿಗಳ ಗ್ಯಾಂಗ್ ಚುನಾವಣಾ ಅಧಿಕಾರಿಗಳ ಮೇಲೆಯೇ ದಾಳಿ ನಡೆಸಿ ಬ್ಯಾಲೆಟ್ ಪೇಪರ್ ಎತ್ತಿಕೊಂಡು ಹೋಗಿದೆ. ಆರೋಪಿಗಳನ್ನು ಗುರುತಿಸಲಾಗಿದೆ.
ಬೆಂಗಳೂರು: ಹಾಲು ಉತ್ಪಾದಕರ ಸಂಘದ (Milk Producers Union) ನಿರ್ದೇಶಕರ ಆಯ್ಕೆಗಾಗಿ (Election of directors) ಬಂದ ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ (Attack on Election officers) ಅವರ ಕೈಯಲ್ಲಿದ್ದ ಬ್ಯಾಲೆಟ್ ಪ್ಯಾಪರ್ (Ballet Paper), ಲ್ಯಾಪ್‌ಟಾಪ್, ಮೊಬೈಲ್ ಮತ್ತು ಇತರ ಸಾಮಗ್ರಿ ದರೋಡೆ ಮಾಡಿದ ಭಯಾನಕ ಘಟನೆಯೊಂದು ರಾಮನಗರ ಜಿಲ್ಲೆಯ (Ramanagara News) ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.
ಇಲ್ಲಿನ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ನಿರ್ದೇಶಕ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯುವುದಿತ್ತು. ಚುನಾವಣಾಧಿಕಾರಿ ಉಮೇಶ್ ಮತ್ತು ಉಷಾ ಅವರು ಹಾಲು ಉತ್ಪಾದಕರ ಸಂಘದತ್ತ ಹೋಗುವಾಗ ಅವರ ಮೇಲೆ ದಾಳಿ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಮಾಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಗಡಿ-ಕುಣಿಗಲ್ ರಸ್ತೆಯಲ್ಲಿ ಈ ದಾಳಿ ನಡೆದಿದೆ.
ಹಾಡುಹಗಲೇ ಭಯಾನಕ ಕೃತ್ಯ
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಎಲ್ಲವೂ ಸಿದ್ಧತೆ ನಡೆದಿತ್ತು. ಆದರೆ, ಪಂಚಾಯಿತಿ ಅಧ್ಯಕ್ಷ ಬಲರಾಮ್ ಮತ್ತು ಇತರ ಚುನಾವಣೆ ನಡೆಸಬಾರದು ಎಂದು ಪಟ್ಟು ಹಿಡಿದಿದ್ದರು. ಆದರೆ, ದಿನಾಂಕ ನಿಗದಿಯಾಗಿ ಎಲ್ಲ ವ್ಯವಸ್ಥೆಗಳೂ ನಡೆದಿದ್ದವು.
ಉಮೇಶ್ ಮತ್ತು ಉಷಾ ಎಂಬ ಇಬ್ಬರು ಚುನಾವಣಾ ಅಧಿಕಾರಿಗಳಾಗಿ ನಿಯುಕ್ತರಾಗಿದ್ದರು. ಬುಧವಾರ ಅವರು ಕಾರಿನಲ್ಲಿ ಹಾಲು ಉತ್ಪಾದಕರ ಸಂಘದತ್ತ ಸಾಗುತ್ತಿದ್ದಂತೆಯೇ ಪುಂಡರ ತಂಡವೊಂದು ಅವರ ಕಾರನ್ನು ಅಡ್ಡಗಟ್ಟಿತ್ತು. ಮಾರಕಾಸ್ತ್ರಗಳನ್ನು ತೋರಿಸಿ ಕಾರಿನಿಂದ ಇಳಿಸಿತು.
ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರನ್ನು ಕೆಳಗೆ ಇಳಿಸಿದ ದುಷ್ಟರು ಕಾರಿನಲ್ಲಿದ್ದ ಬ್ಯಾಲೆಟ್ ಪೇಪರ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಿತ್ತುಕೊಂಡಿತು. ಉಮೇಶ್ ಅವರು ತಮ್ಮ ಕೈಯಿಂದ ಕಿತ್ತುಕೊಂಡ ಪೇಪರ್‌ಗಳನ್ನು ಕಸಿದುಕೊಳ್ಳಲು ಅವರನ್ನು ಬೆನ್ನಟ್ಟಿದರು. ಆದರೆ ದುಷ್ಕರ್ಮಿಗಳು ತಾವು ಬಂದಿದ್ದ ಸ್ಯಾಂಟ್ರೋ ಕಾರಿನಲ್ಲಿ ಕುಳಿತು ಪರಾರಿಯಾದರು. ಈ ಹಂತದಲ್ಲಿ ಕೆಲವರು ಕಾರನ್ನು ನಿಲ್ಲಿಸಲು ಯತ್ನಿಸಿದರು. ಆದರೆ, ದುಷ್ಕರ್ಮಿಗಳು ಅವರನ್ನು ತಳ್ಳಿ ಮುಂದಕ್ಕೆ ಸಾಗಿದರು. ಈ ಹಂತದಲ್ಲಿ ಕಾರಿನ ಮುಂಭಾಗದಲ್ಲಿದ್ದ ಉಷಾ ಅವರ ಮೇಲೆಯೇ ಕಾರು ನುಗ್ಗಿತ್ತು. ಕಾರು ಡಿಕ್ಕಿಯಾಗಿ ಮುಗ್ಗರಿಸಿ ಬಿದ್ದ ಅವರು ರಸ್ತೆಗೆ ಉರುಳಿದರು.
ಮಾಜಿ ಅಧ್ಯಕ್ಷ ಬಲರಾಮ್ ಮತ್ತು ಟೀಮ್, ಕಾರಿಗಾಗಿ ಶೋಧ
ಇದು ಮಾಜಿ ಅಧ್ಯಕ್ಷ ಬಲರಾಂ ಮತ್ತು ಅವನ ಸಹಚರರ ಕೃತ್ಯ ಎಂದು ಪೊಲೀಸರಿಗೆ ತಿಳಿದುಬಂದಿದೆ. ಸ್ಥಳೀಯರು ಕೂಡಾ ಇದನ್ನು ದೃಢೀಕರಿಸಿದ್ದಾರೆ.
ಹುಲ್ಲೇನಹಳ್ಳಿ ನಾಲ್ಕು ವ್ಯಕ್ತಿಗಳಿಂದ ಕೃತ್ಯ ನಡೆಸಿದೆ. ಗ್ರಾಪಂ ಮಾಜಿ ಅಧ್ಯಕ್ಷ ಬಲರಾಮ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೇಮಂತ್, ಸೀನು, ದಾಸೇಗೌಡ, ಮತ್ತೊಬ್ಬನಿಂದ ಈ ಕೃತ್ಯ ನಡೆದಿದೆ ಎಂದು ಎಸ್‌ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಆರೋಪಿಗಳು ಮತ್ತು ಸ್ಯಾಂಟ್ರೋ ಕಾರು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕ ಮಂಜು ಕುಮ್ಮಕ್ಕು ಆರೋಪ
ಈ ನಡುವೆ, ದರೋಡೆಗೆ ಜೆಡಿಎಸ್ ಮಾಜಿ ಶಾಸಕ ಎ ಮಂಜು ಕುಮ್ಮಕ್ಕು ನೀಡಿದ್ದಾರೆ. ಮಾಜಿ ಅಧ್ಯಕ್ಷ ಬಲರಾಮ್ ತನ್ನ ಸಹಚರರ ಮೂಲಕ ಈ ಕೃತ್ಯ ನಡೆಸಿದ್ದಾನೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
23 ವರ್ಷದ ಬಳಿಕ ಚುನಾವಣೆ ನಡೆಯುತ್ತಿತ್ತು!
ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ನಿರ್ದೇಶಕರ ಚುನಾವಣೆ 23 ವರ್ಷಗಳ ಬಳಿಕ ನಡೆಯುತ್ತಿದೆ. ಇಲ್ಲಿ ಚುನಾವಣೆ ನಡೆಯಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಬೆಂಬಲಿಗರ ತಂಡವು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ಕೃತ್ಯವನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ
MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ
MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್‌ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.
ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ
ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ
ಎಸ್‌ಎನ್ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ
ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.
ಕರ್ನಾಟಕ
BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
BJP JDS alliance : ಕೋಮುವಾದಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ. ಅಲ್ಲದೆ, ಜಾತ್ಯತೀತತೆಯನ್ನು ನಾಶ ಮಾಡಿದ್ದೇ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಎಲ್ಲೆಲ್ಲಿ ಸೆಕ್ಯುಲರಿಸಂ ಇತ್ತೋ ಅದನ್ನು ಕಾಂಗ್ರೆಸ್‌ನವರೇ ನಾಶ ಮಾಡಿದರು. ಅಧಿಕಾರಕ್ಕಾಗಿ ಏನನ್ನೆಲ್ಲ ಮಾಡಿದರು? ಫಾರೂಕ್ ಅಬ್ದುಲ್ಲ (Farooq Abdullah) ಅವರನ್ನು ಯಾವ ಸಿದ್ಧಾಂತ ಉಳಿಸುವುದಕ್ಕೆ ಅವರು ಸೋಲಿಸಿದರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (Former Prime Minister HD DeveGowda) ಇದನ್ನೆಲ್ಲ ನೋಡಿ, ನೋವು ಅನುಭವಿಸಿದ್ದಾರೆ. ಒಂದು ಸಮಾಜಕ್ಕೆ ಸಹಾಯ ಮಾಡಬೇಕು ಅಂತ ದೇವೇಗೌಡರು ಮಾಡಿದ ಹಾಗೆ ಯಾರೂ ಮಾಡಿಲ್ಲ. ಈಗಾಗಲೇ ಇಬ್ರಾಹಿಂ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಮುಸ್ಲಿಮರಿಗೆ ನಾನು ಗೌರವ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಈ ಮೂಲಕ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದ್ದರೆ, ನನಗೆ ವೋಟ್ ಹಾಕುತ್ತಿರಲಿಲ್ಲ. ನಾನು ಯಾರಿಗೂ ಅಗೌರವಯುತವಾಗಿ ನಡೆದುಕೊಂಡಿಲ್ಲ. ಇಬ್ರಾಹಿಂ ಜೊತೆ ಹಲವು ವಿಷಯ ಚರ್ಚೆ ಮಾಡಿದ್ದೇನೆ. ಇವತ್ತು ದೇಶಕ್ಕೆ ಅವಶ್ಯಕತೆ ಇರುವ ಬಗ್ಗೆ ಲೆಕ್ಕ ಹಾಕಿದ್ದೇವೆ. ಹಾಗಾಗಿ ಈ ಮೈತ್ರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಸಿಎಂ ಮಾಡಿ ಎಂದು ನಾವು ಕೇಳಿದ್ದೆವಾ?
ಈಗ ಬಿಜೆಪಿ ಬಿ ಟೀಂ ಅನ್ನೋದನ್ನು ದೇವೇಗೌಡರು ಪ್ರೂವ್ ಮಾಡಿದ್ದರು ಅಂತಿದ್ದಾರಲ್ಲ ಅವತ್ತು ದೇವೇಗೌಡರು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡ ಅಂದಿದ್ದರು. ಆಗ ನಾವು ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಸೇರಿರಲಿಲ್ಲ. ಆದರೆ, ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಮುಂದೆ ಬಂದಿದ್ದು ಯಾರು? ಅಂದು ನನಗೆ ಬಿಜೆಪಿಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರಿಂದ ಫೋನ್ ಬಂದಿತ್ತು. ಆಗ ನಾನು ಬಿಜೆಪಿ ಜತೆ ಸೇರಿದ್ದರೆ 5 ವರ್ಷದ ಆಡಳಿತ ನಮ್ಮದಾಗಿರುತ್ತಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಹಾಸನದಲ್ಲಿ ರಾಹುಲ್ ಗಾಂಧಿ ಕರೆದುಕೊಂಡು ಬಂದು ಭಾಷಣ ಮಾಡಿಸಿದ್ದರು. ಸಿದ್ದರಾಮಯ್ಯ ಅವರು ಜಾತ್ಯತೀತತೆಯನ್ನು ಉಳಿಸುತ್ತೇನೆ ಎಂದು ಹೇಳುತ್ತಾರೆ. ಆದರೆ, ಅಂದು ನನ್ನ ಸರ್ಕಾರವನ್ನು ಬೀಳಿಸುವಾಗ 5 ಶಾಸಕರನ್ನು ಕರೆತಂದರೆ, ಅತ್ತ ಕಡೆಯಿಂದ ಮತ್ತೆ ಐವರನ್ನು ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದವರು ಯಾರು? ಜಾತ್ಯತೀತತೆ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಇದೀಗ ನೋಡುತ್ತಿದ್ದೀರಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಕಾವೇರಿ ತಟದಲ್ಲಿ ರೈತರ ಉಳಿವಿಗೆ ದೇವೇಗೌಡರೇ ಕಾರಣ
ನೀರಾವರಿ ಸಮಸ್ಯೆ ಬಗೆಹರಿಸಲು ದೇವೇಗೌಡರು ಹಳ್ಳಿ ಹಳ್ಳಿ ಸುತ್ತಿದ್ದಾರೆ. ನೀರಾವರಿಗೆ ದೇವೇಗೌಡರು ಮಾಡಿರುವುದನ್ನು ಯಾರೊಬ್ಬರೂ ಮಾಡಿಲ್ಲ. ಚರ್ಚೆ ಮಾಡುವ ಸಂಘಟನೆಗಳಿಗೆ ಒಂದು ಮಾತು ಹೇಳುತ್ತೇನೆ. ಕಾವೇರಿ ತಟದಲ್ಲಿ ರೈತರು ಉಳಿದಿರುವುದಕ್ಕೆ ದೇವೇಗೌಡರೇ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು
ನಮ್ಮ ಪಕ್ಷ ಉಳಿಸಿಕೊಳ್ಳಲು ಕಾಲು ಹಿಡಿದುಕೊಂಡರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜನತಾದಳಕ್ಕೆ ಇನ್ನು ಆ ದುರ್ಗತಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಕಾವೇರಿ ಬಗ್ಗೆ ಧ್ವನಿ ಎತ್ತಲಿಲ್ಲ? ಕಾವೇರಿ ವಿಚಾರವಾಗಿ ಯಾಕೆ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ? ಕೆಆರ್‌ಎಸ್ ನೀರಿನ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಈ ಸರ್ಕಾರ ಇಷ್ಟು ಕೇವಲವಾಗಿ ನಡೆದುಕೊಳ್ಳುತ್ತಿದೆ. ವಿಷಯವನ್ನು ಡೈವರ್ಟ್ ಮಾಡುತ್ತಿದೆ. ಪಕ್ಷದ ಬಗ್ಗೆ ಹೆಸರು ಕೆಡಿಸಲು ಹೊರಟಿದ್ದಾರೆ. ನನಗೇನೂ ಶಾಕ್ ಕೊಡುವ ವಿಷಯವಲ್ಲ ಇದು. ಈಗಾಗಲೇ ನನಗೆ ಸಾಕಷ್ಟು ಶಾಕ್ ಕೊಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಮೈನಾರಿಟಿಗೆ ತೊಂದರೆ ಮಾಡಲ್ಲ: ಎಚ್.ಡಿ. ದೇವೇಗೌಡ
ನಾನು ಇವತ್ತು ನೀರಾವರಿ ಮಂತ್ರಿಗಳ ಯಾವ ಮಾತಿಗೂ ಗಮನ ಕೊಡಲ್ಲ. ಬಾಂಗ್ಲಾದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನಮ್ಮ ಮುಂದೆ ಇರೋದು ಮೈನಾರಿಟಿ ಮಾತು ಅಷ್ಟೇ. ನಾವು ಮೈನಾರಿಟಿ ಎಲ್ಲೇ ಇದ್ದರೂ ತೊಂದರೆ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಆಗ ಮಧ್ಯ ಪ್ರವೇಶಿಸಿದ ಎಚ್.ಡಿ. ಕುಮಾರಸ್ವಾಮಿ, ಮೈನಾರಿಟಿ ಮಾತ್ರ ಅಲ್ಲ ಇಡೀ ಕರ್ನಾಟಕದ ರಕ್ಷಣೆ ನಮ್ಮ ಗುರಿಯಾಗಿದೆ. ನಾಟ್ ಓನ್ಲಿ ಮೈನಾರಿಟಿ ಬ್ರದರ್, ಎಂಟೈರ್ ಕರ್ನಾಟಕ ರಕ್ಷಣೆ ಮಾಡುತ್ತೇವೆ ಎಂದು ಗುಡುಗಿದರು.
ಇದನ್ನೂ ಓದಿ: BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
ಕಾವೇರಿ ನೀರಿನ ವಿಷಯದಲ್ಲಿ ಈಗ ಬಂದಿರುವ ಆದೇಶವು ನನ್ನ ರಾಜ್ಯದ ಜನತೆಯ ಮರಣ ಶಾಸನವಾಗಿದೆ ಎಂದು ಎಚ್.ಡಿ. ದೇವೇಗೌಡ ಬೇಸರವನ್ನು ಹೊರಹಾಕಿದರು.
-
ದೇಶ15 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ23 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ16 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್22 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ23 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್19 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್