ಬೆಂಗಳೂರು: ಉಪಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಡಿ.ಕೆ. ಶಿವಕುಮಾರ್ ಭೇಟಿ ಮಾಡಿದರು.
ಡಾಲರ್ಸ್ ಕಾಲನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ಅವರ ಮನೆ ʼಧವಳಗಿರಿʼಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಸುಮಾರು 25 ನಿಮಿಷ ಮಾತುಕತೆ ನಡೆಸಿದರು.
ಡಿ.ಕೆ. ಶಿವಕುಮಾರ್ ಅವರನ್ನು ಬಾಗಿಲವರೆಗೆ ಆಗಮಿಸಿ ಹೂಗುಚ್ಛ ನೀಡಿ ಬಿ.ಎಸ್. ಯಡಿಯೂರಪ್ಪ ಆತ್ಮೀಯವಾಗಿ ಸ್ವಾಗತಿಸಿದರು. ಯಡಿಯೂರಪ್ಪ ಅವರನ್ನು ಡಿ.ಕೆ. ಶಿವಕುಮಾರ್ ಸನ್ಮಾನಿಸಿದರು.
ಸೌಜನ್ಯದ ಭೇಟಿ ಇದಾಗಿದ್ದು, ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ. ಆದರೆ ಇನ್ನೇನು ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಆರಂಭವಾಗುವುದಿದೆ ಹಾಗೂ ಪ್ರತಿಪಕ್ಷ ಬಿಜೆಪಿ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ. ಇದೆಲ್ಲದರ ಹಿನ್ನೆಲೆಯಲ್ಲಿ ರಾಜಕೀಯ ಉದ್ದೇಶ ಇಲ್ಲ ಎಂದು ಹೇಳಲು ಆಗುವುದಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ.
ಭೇಟಿ ನಂತರ ಹೊರಬಂದ ಡಿ.ಕೆ. ಶಿವಕುಮಾರ್ ಅವರು, ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದೆ ತೆರಳಿದರು.
ಇದನ್ನೂ ಓದಿ: Saffronisation issue: ಕೇಸರಿ ಶಾಲಿನ ವಿರುದ್ಧ ಡಿಕೆಶಿ ಆಕ್ರೋಶಕ್ಕೆ ವಿಜಯೇಂದ್ರ, ಕೋಟ ತಿರುಗೇಟು