Site icon Vistara News

Karnataka Politics: ಎಚ್‌.ಡಿ. ಕುಮಾರಸ್ವಾಮಿ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ: ದಿನೇಶ್‌ ಗುಂಡೂರಾವ್‌ ವಾಗ್ದಾಳಿ

HD Kumaraswmy dinesh Gundurao

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಜತೆಗೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಸುದ್ದಿಯ ಕುರಿತು ಸಚಿವ ದಿನೇಶ್‌ ಗುಂಡೂರಾವ್‌ ಟೀಕೆ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ದಿನೇಶ್‌ ಗುಂಡೂರಾವ್‌, BJPಯ ‘ಬಿ ಟೀಂ’ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ HDK ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದಿದ್ದಾರೆ (Karnataka Politics).

JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ.

ಇದನ್ನೂ ಓದಿ: BJP-JDS Coalition: ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

JDS ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯತೀತ ಸಿದ್ದಾಂತವೇ ಕಾರಣ.

BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌.‌

Exit mobile version