ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ 40-45 ಶಾಸಕರು (40-45 Congress MLAs) ನನ್ನ ಸಂಪರ್ಕದಲ್ಲಿದ್ದಾರೆ. ದಿಲ್ಲಿ ನಾಯಕರು ಓಕೆ ಅಂದರೆ ಒಂದೇ ದಿನದಲ್ಲಿ ಆಪರೇಷನ್ (Operation Kamala) ಮಾಡಬಹುದು ಎಂಬ (Karnataka politics) ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ಅವರ ಹೇಳಿಕೆಯನ್ನು ಕಾಂಗ್ರೆಸ್ (Congress Karnataka) ನಿರೀಕ್ಷೆಯಂತೆಯೇ ಗೇಲಿ ಮಾಡಿದೆ!
ಬಿ.ಎಲ್ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಇನ್ನು ಕಾಂಗ್ರೆಸ್ ಶಾಸಕರ ಜತೆಗೆ ಸಂಪರ್ಕ ಅದು ಹೇಗೆ ಸಾಧಿಸಿದರೋ ಎಂದು ಕಾಂಗ್ರೆಸ್ ಕೇಳಿದೆ. ಜತೆಗೆ ಇದೊಂದು ಶತಮಾನದ ಜೋಕ್ ಎಂದು ಹೇಳಿದೆ.
ಕಾಂಗ್ರೆಸ್ ಈ ಸಂಬಂಧ ಮಾಡಿರುವ ಟ್ವೀಟ್ ಹೀಗಿದೆ..
ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. @blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ.
ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.@blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!
— Karnataka Congress (@INCKarnataka) September 1, 2023
ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ…
ರಾಜ್ಯದಲ್ಲಿ ಲೋಕಸಭಾ ಚುನಾವಣೆ ತಯಾರಿಗಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ರಾಜ್ಯದ ಸಂಸದರು, ಶಾಸಕರು, ಮೇಲ್ಮನೆ ಸದಸ್ಯರು, ಮಾಜಿ ಶಾಸಕರನ್ನು ಒಳಗೊಂಡ ಸಂಘಟನಾ ಸಭೆಯನ್ನು ಆಯೋಜಿಸಿದ್ದರು. ಆದರೆ, ಈ ಸಭೆಗೆ ಬಿಜೆಪಿಯ ಶಾಸಕರೇ ಆದ ಎಸ್‌ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್, ಶಂಕರ್ ಪಾಟೀಲ್ ಮುನೇನಕೊಪ್ಪ ಅವರೇ ಬಂದಿರಲಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರು ಬೇರೆ ಬೇರೆ ಕಾರಣಗಳಿಂದ ಗೈರುಹಾಜರಾಗಿದ್ದರು.
ಈ ಅಂಶಗಳನ್ನು ಕೂಡಾ ಕಾಂಗ್ರೆಸ್ ಉಲ್ಲೇಖಿಸಿದೆ. ಸಂತೋಷ್ ಅವರು ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ಈ ಸಭೆ ನಡೆಸಿದ್ದಾರೆ ಎನ್ನುವುದು ಕಾಂಗ್ರೆಸ್ ಊಹೆ. ಸಂತೋಷ್ ಅವರು ಕಾಂಗ್ರೆಸ್ ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಕಾಲೆಳೆದಿದೆ.
ಬಿಜೆಪಿ ಸಭೆಯಲ್ಲಿ ರಾಜ್ಯಾಧ್ಯಕ್ಷರು ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆಯ ಬಗ್ಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಚರ್ಚೆ ನಡೆಸಬಾರದು ಎಂದು ಸಂತೋಷ್ ಅವರು ತಾಕೀತು ಮಾಡಿದ್ದರು.