Site icon Vistara News

Karnataka Politics: ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಬೆಂಗಳೂರಿನಲ್ಲಿಯೂ ದೂರು ದಾಖಲು

karnataka politics second complaint lodged against bjp mla harish poonja

#image_title

ಬೆಂಗಳೂರು: ಸಿದ್ದರಾಮಯ್ಯ 24 ಹಿಂದುಗಳ ಹತ್ಯೆ ಮಾಡಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಬೆಂಗಳೂರಿನಲ್ಲಿಯೂ ದೂರು ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌. ಮನೋಹರ್‌ ಅವರು ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ದೂರು ನೀಡಿದ್ದಾರೆ.

ಇದೇ ಹೇಳಿಕೆಯನ್ನು ಆಧರಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ನಮಿತಾ ಕೆ. ಪೂಜಾರಿ ಎಂಬವರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್‌ ದಾಖಲಾಗಿದೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ದೂರು ನೀಡಲಾಗಿದೆ.

ಈ ಕುರಿತು ದೂರು ನೀಡಿರುವ ಮನೋಹರ್‌, ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ಆಧಾರರಹಿತ ಹೇಳಿಕೆ ನೀಡಿರುವ ಶಾಸಕ ಹರೀಶ್‌ ಪೂಂಜಾ, 24 ಜನ ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯರವರು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಹರೀಶ್‌ ಪೂಂಜ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವುದು ಹಾಗೂ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಶಾಂತಿ ಕದಡುವ
ಹುನ್ನಾರವು ಅವರ ಹೇಳಿಕೆಯಲ್ಲಿ ಅಡಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಇವರ ವಿರುದ್ಧ. ಪ್ರಕರಣ
ದಾಖಲಿಸಿಕೊಳ್ಳಬೇಕು.

ಬಜರಂಗದಳದ ಹೆಸರನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ಅವರ ಹೇಳಿಕೆಯಲ್ಲಿ ಅಡಗಿದೆ. ಹರೀಶ್‌ ಪೂಂಜನ ಹೇಳಿಕೆಯಿಂದ ರಾಜ್ಯದಲ್ಲಿ ಶಾಂತಿ ಕದಡುವ
ಸನ್ನಿವೇಶ ಉದ್ಭವಿಸುತ್ತದೆ. ತಕ್ಷಣವೇ ಆತನ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿ ತನಿಖೆ ನಡೆಸಲು
ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕೆಂದು ಈ ದೂರನ್ನು ಸಲ್ಲಿಸುತ್ತಿದ್ದೇವೆ ಎಂದು ಮನೋಹರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ದ್ವೇಷ ಭಾಷಣ; ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌

Exit mobile version