Site icon Vistara News

Karnataka Politics : ಸೋನಿಯಾ ಗಾಂಧಿ ಮುಂದೆ ಸಿದ್ದರಾಮಯ್ಯ ಇಲಿ, ಬೆಕ್ಕು, ಜಿರಳೆ ಆಗಿರುತ್ತಾರೆ: ಶ್ರೀರಾಮುಲು ತಿರುಗೇಟು

siddaramaiah and basavaraj bommai

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಗೆ ಹೋಲಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸರಿಯಲ್ಲ. ಹಾಗಾದರೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮನೆಯಲ್ಲಿ ಸಿದ್ದರಾಮಯ್ಯ ಇಲಿ‌, ಬೆಕ್ಕು ಜಿರಳೆ ಆಗಿರುತ್ತಾರೆ ಎಂದು ನಾವು ಹೇಳಬಹುದಲ್ಲವೇ ಎಂದು ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ (Karnataka Politics) ವಾಕ್ಸಮರಗಳು ಹೆಚ್ಚಾಗತೊಡಗಿವೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಮಂಗಳವಾರ (ಡಿ. ೦೩) ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಿ ಮರಿಯಂತೆ ಇರುತ್ತಾರೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಶ್ರೀರಾಮುಲು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ಈಗ ವಿಪಕ್ಷ ನಾಯಕರಾಗಿದ್ದಾರೆ. ಸಿಎಂ ಸ್ಥಾನದ ವ್ಯಕ್ತಿಯನ್ನು ನಾಯಿಗೆ ಹೋಲಿಕೆ ಮಾಡುವುದು ಎಷ್ಟು ಸರಿ? ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಹಾಗಿದ್ದರೆ, ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಮನೆಯಲ್ಲಿ ಇಲಿ‌, ಬೆಕ್ಕು ಜಿರಳೆ ಆಗಿರುತ್ತಾರೆ ಎಂದು ನಾವೂ ಹೆಳಬಹುದು ಅಲ್ಲವೇ? ಸಿಎಂ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಇನ್ನು ಸೋನಿಯಾ ಗಾಂಧಿ ಮುಂದೆ ಸಿದ್ದರಾಮಯ್ಯ ತುಟಿ ಬಿಚ್ಚಲ್ಲ. ಆದರೆ, ಪ್ರಧಾನಿ ಮೋದಿ ಮುಂದೆ ಸಿಎಂ ಧೈರ್ಯವಾಗಿ ಮಾತನಾಡುತ್ತಾರೆ ಎಂದು ಆಗ್ರಹಿಸಿದರು.

ಇದನ್ನೂ ಓದಿ | Pakistan | ಸಾಲದ ಸುಳಿಯಲ್ಲಿ ಪಾಕಿಸ್ತಾನ, ಫ್ಯಾನ್- ಬಲ್ಬ್ ಉತ್ಪಾದನೆಯೂ ಸ್ಥಗಿತ!

Exit mobile version