Karnataka Rain: ಬೆಟ್ಟದಿಂದ ಉರುಳಿದ ಕಲ್ಲುಬಂಡೆ; 20ಕ್ಕೂ ಹೆಚ್ಚು ಜನ ಅದೃಷ್ಟವಶಾತ್ ಪಾರು - Vistara News

ಕರ್ನಾಟಕ

Karnataka Rain: ಬೆಟ್ಟದಿಂದ ಉರುಳಿದ ಕಲ್ಲುಬಂಡೆ; 20ಕ್ಕೂ ಹೆಚ್ಚು ಜನ ಅದೃಷ್ಟವಶಾತ್ ಪಾರು

ಮಂಗಳವಾರ ಬೆಳಗಿನಜಾವ ಸುರಿದ ಭಾರೀ ಮಳೆಯಿಂದಾಗಿ ಗಂಗಾವತಿ ತಾಲೂಕಿನ (Koppala News) ಸಂಗಾಪುರದ 2ನೇ ವಾರ್ಡ್‌ನ ಗದ್ವಾಲ್ ಏರಿಯಾದ ಸಮೀಪದಲ್ಲಿರುವ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿದೆ. ಐದಾರು ಮನೆಗಳಿಗೆ ಹಾನಿಯಾಗುವುದು ಕೂದಲೆಳೆಯ ಅಂತರದಿಂದ ತಪ್ಪಿದೆ. ಕುಡಿಯುವ ನೀರಿಗಾಗಿ ಹಾಕಲಾಗಿದ್ದ 4 ಇಂಚು ಗಾತ್ರದ ಕಬ್ಬಿಣದ ಪೈಪ್, ಉರುಳಿ ಬಂದಿರುವ ಕಲ್ಲು ಬಂಡೆಯನ್ನು ತಡೆಹಿಡಿದಿದೆ.

VISTARANEWS.COM


on

Karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗಂಗಾವತಿ: ಮಂಗಳವಾರ ಬೆಳಗಿನಜಾವ ಸುರಿದ ಭಾರೀ ಮಳೆಯಿಂದಾಗಿ (Karnataka Rain) ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿದೆ. ಅದೃಷ್ಟವಶಾತ್ 20ಕ್ಕೂ ಹೆಚ್ಚು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೀವ ಉಳಿಸಿದ ಪೈಪ್‌ಲೈನ್

ತಾಲೂಕಿನ ಸಂಗಾಪುರದ 2ನೇ ವಾರ್ಡ್‌ನ ಗದ್ವಾಲ್ ಏರಿಯಾದ ಸಮೀಪದಲ್ಲಿರುವ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿ ಅದೃಷ್ಟವಶಾತ್ ಐದಾರು ಮನೆಗಳಿಗೆ ಹಾನಿಯಾಗುವುದು ಕೂದಲೆಳೆಯ ಅಂತರದಿಂದ ತಪ್ಪಿದೆ.

ಇದನ್ನೂ ಓದಿ: Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

ಕುಡಿಯುವ ನೀರಿಗಾಗಿ ಹಾಕಲಾಗಿದ್ದ ನಾಲ್ಕು ಇಂಚು ಗಾತ್ರದ ಕಬ್ಬಿಣದ ಪೈಪ್, ಉರುಳಿ ಬಂದಿರುವ ಕಲ್ಲು ಬಂಡೆಯನ್ನು ತಡೆಹಿಡಿದಿದೆ. ಇದರಿಂದ ನಾಲ್ಕೈದು ಮನೆಯಲ್ಲಿ ವಾಸವಿದ್ದ ಸುಮಾರು 20ಕ್ಕೂ ಹೆಚ್ಚು ಜನರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಆಕಸ್ಮಿಕ ಕಬ್ಬಿಣದ ಪೈಪ್‌ಲೈನ್ ಕಲ್ಲು ಬಂಡೆಯನ್ನು ಹಿಡಿದು ನಿಲ್ಲಿಸದೇ ಇದ್ದರೆ ಗಾಢ ನಿದ್ರೆಯಲ್ಲಿದ್ದ ಐದಾರು ಕುಟುಂಬದ ಸದಸ್ಯರಿಗೆ ಊಹಿಸಲಾಗದ ಹಾನಿಯಾಗಿರುತಿತ್ತು ಎಂದು ಪ್ರತ್ಯಕ್ಷದರ್ಶಿ ಲೋಕೇಶ್‌ ರಾಠೋಡ್ ತಿಳಿಸಿದ್ದಾರೆ.

ಮಳೆಯ ಅವಾಂತರದಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗಂಗಾವತಿ ನಗರದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ಇಡೀ ರಾತ್ರಿ ನಿದ್ರೆ ಬಿಟ್ಟು ಬಕೇಟು, ಪಾತ್ರೆಗಳಿಂದ ನೀರು ಹೊರ ಹಾಕಿ ಹೈರಾಣಾದ ಘಟನೆ ನಡೆದಿದೆ. ಇಲ್ಲಿನ ಗಾಂಧಿನಗರದ ಕೊಳಚೆ ಪ್ರದೇಶದಲ್ಲಿನ ಸಾಕಷ್ಟು ಮನೆಗಳಿಗೆ ಹಾನಿಯಾಗಿದ್ದು, ಬಸಮ್ಮ ಹನುಮಂತಪ್ಪ ಸುಳೇಕಲ್ ಎಂಬ ಮಹಿಳೆಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಜುಲೈ ನಗರದ ಪೆಟ್ರೋಲ್ ಬಂಕ್ ಹಿಂದಿನ ಜನವಸತಿ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ನಗರದ ಜನವಸತಿ ಪ್ರದೇಶಗಳಾದ ಎಚ್ಆರ್‌ಎಸ್ ಕಾಲೋನಿ, ಮಹೆಬೂಬ ನಗರ, ಕಿಲ್ಲಾ ಏರಿಯಾ, ಗೌಸೀಯಾ ಕಾಲೋನಿ, ಈದ್ಗಾ ಕಾಲೋನಿ, ಬನ್ನಿಗಿಡದ ಕ್ಯಾಂಪ್, ಅಗಡಿ ಸಂಗಣ್ಣ ಕ್ಯಾಂಪ್, ಲಿಂಗರಾಜ ಕ್ಯಾಂಪ್, ಶರಣಬಸವೇಶ್ವರ ನಗರದಲ್ಲಿನ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಮನೆಗಳಿಗೆ ಹಾನಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಹಸೀಲ್ದಾರ್ ಯು. ನಾಗರಾಜ್, ತಾಲೂಕಿನಾದ್ಯಂತ ಮಂಗಳವಾರ ನಸುಕಿನ ವೇಳೆ ಸುರಿದ ಅಪಾರ ಪ್ರಮಾಣ ಮಳೆಯಿಂದಾಗಿ ಸಾರ್ವಜನಿಕರ ಆಸ್ತಿ-ಪಾಸ್ತಿ ಮನೆಗಳಿಗೆ ಹಾನಿಯಾಗಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವೆಂಕಟಗಿರಿ ಹೋಬಳಿಯಲ್ಲಿ ಸುಮಾರು ಆರು ಮನೆಗಳು ಕುಸಿದಿರುವ ಮಾಹಿತಿ ಸಿಕ್ಕಿದೆ. ಮರಳಿ ಹೋಬಳಿಯಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಸಂಜೆ ವೇಳೆಗೆ ಪೂರ್ಣ ಪ್ರಮಾಣದ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest3 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest21 hours ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ23 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 day ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest2 days ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest2 days ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest2 days ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest3 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest4 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌