Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ - Vistara News

ಕರ್ನಾಟಕ

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

Karnataka Rain: 3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ.

VISTARANEWS.COM


on

Karnataka Rain
ಬಾಳೆಹೊನ್ನೂರು ಪಟ್ಟಣದ ಸಂತೆ ಮಾರುಕಟ್ಟೆ ಮುಳುಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭದ್ರಾ ನದಿ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಸತತ ಮಳೆಯಿಂದ (Karnataka Rain) ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣ ಮುಳುಗಡೆಯಾಗಿದೆ. ದೋಬಿ ಹಳ್ಳ ಪ್ರವಾಹಕ್ಕೆ ‌ಬಾಳೆಹೊನ್ನೂರಿನ ನದಿ ತಟದ ಸಂತೆ ಮಾರುಕಟ್ಟೆ, ಮನೆಗಳು, ಅಂಗಡಿ ಮಳಿಗೆಗಳು, ಕಾಫಿ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಭಾರಿ ಪ್ರಮಾಣ ನೀರಿನಿಂದ ಕಾಫಿ, ಅಡಕೆಗೆ ಕೊಳೆ ರೋಗ ಆವರಿಸುವ ಭೀತಿ ಎದುರಾಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಮಳೆ ಹೆಚ್ಚಾದಂತೆ ಕ್ಷಣ ಕ್ಷಣಕ್ಕೂ ಭದ್ರಾ ನೀರಿನ ಅರಿವು ಹೆಚ್ಚಾಗುತ್ತಿದೆ.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿತ

ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕ ಸ್ಥಗಿತವಾಗೋ ಸಾಧ್ಯತೆ ಇದೆ. ಸುಮಾರು 60 ಅಡಿಯಷ್ಟು ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ಸಂಪರ್ಕ‌ ಬಂದ್ ಆದಲ್ಲಿ 500ಕ್ಕೂ ಹೆಚ್ಚು ಕುಟುಂಬಗಳ ಸ್ಥಿತಿ ಅತಂತ್ರವಾಗಲಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು-ಶೃಂಗೇರಿ ರಸ್ತೆಯಲ್ಲಿ 3-4 ಕಡೆ ರಸ್ತೆ ಬದಿ ಗುಡ್ಡ ಕುಸಿದಿದೆ.

ಜಲಸ್ಫೋಟದಿಂದ ರಸ್ತೆಗೆ ಬಂದು ಕೂತ ಗುಡ್ಡ

ಕಳಸದಲ್ಲಿ ಭೂಮಿಯೊಳಗೆ ಜಲಸ್ಫೋಟದಿಂದ ಗುಡ್ಡ ಜರುಗಿ ರಸ್ತೆಗೆ ಬಂದಿರುವ ಘಟನೆ ನಡೆದಿದೆ. ಇದರಿಂದ ಕಳಸ-ಬಲಿಗೆ-ಹೊರನಾಡು ಸಂಪರ್ಕ ಕಡಿತವಾಗಿದೆ.

ಭಾರಿ ಮಳೆಗೆ ಮುಳುಗಿದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಶಿರಸಿ ತಾಲೂಕಿನ ದೊಡ್ನಳ್ಳಿ ಭಾಗದಲ್ಲಿ ಮಳೆಗೆ ಸೇತುವೆ ಮುಳುಗಿದ್ದು, ಚಿಪಗಿ-ದೊಡ್ನಳ್ಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೊಡ್ನಳ್ಳಿ ಭಾಗದಿಂದ ಓಡಾಡುವ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಸೇತುವೆ ಬಳಿ ಸಂಗ್ರಹಗೊಂಡಿದ್ದ ಮರದ ತುಂಡುಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ. ಮಳೆಯಿಂದಾಗಿ ದೊಡ್ನಳ್ಳಿ ಪಂಚಾಯತ್ ವ್ಯಾಪ್ತಿಯ ಕೆಳಗಿನ ಎಸಳೆ ಗ್ರಾಮದಲ್ಲಿ ಜಮೀನು ಜಲಾವೃತವಾಗಿದ್ದು, 50 ಎಕರೆಗೂ ಅಧಿಕ ನಾಟಿ ಮಾಡಿದ ಗದ್ದೆ, ಕಬ್ಬಿನ ತೋಟಕ್ಕೆ ನೀರು ನುಗ್ಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ಭದ್ರಾ ನದಿಗಳು

ಶಿವಮೊಗ್ಗ: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದವಾದ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೂಡಲಿ ದೇವಸ್ಥಾನದ ಬಳಿ ಸ್ನಾನಘಟ್ಟ ಮುಳುಗಡೆಯಾಗಿದೆ.

ಭದ್ರಾವತಿ ಬಳಿ 30 ಮನೆಗಳು ಸಂಪೂರ್ಣ ಜಲಾವೃತ

ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಭದ್ರಾವತಿ ನಗರದ ಕಾಳಜಿ ಕೇಂದ್ರಕ್ಕೆ 30 ಕುಟುಂಬಗಳನ್ನು ಶಿಫ್ಟ್‌ ಮಾಡಲಾಗಿದೆ. ತಡಸ ಧಡಮ್ಘಟ್ಟ ರಸ್ತೆ ಸಂಪರ್ಕ ಬಂದ್ ಅಗಿದ್ದು, ಹತ್ತಾರು ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ

ದಾವಣಗೆರೆ: ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ತುಂಗಾ ಹಾಗೂ ಭದ್ರ ಎರಡು ಜಲಾಶಯಗಳಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳ ರಸ್ತೆ ಸಂಪರ್ಕ ಕಡಿತವಾಗಿದೆ.

ಪುಣ್ಯಕ್ಷೇತ್ರ ಉಕ್ಕಡಗಾತ್ರಿ ತುಮ್ಮಿನಕಟ್ಟೆ, ಪತೇಪುರ್ ರಸ್ತೆ ಸಂಪರ್ಕ ಕಡಿತವಾಗಿದ್ದು, ತುಂಗಾಭದ್ರ ನದಿ ಪ್ರವಾಹದಿಂದ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಮುಳುಗಡೆಯಿಂದ ಸುಮಾರು 10 ಕಿ.ಮೀ ಸುತ್ತಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಸೇತುವೆ ಮುಳುಗಡೆಯಿಂದ ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ನದಿ ಪ್ರವಾಹದಿಂದ ತರಕಾರಿ ಬೆಳೆ, ಭತ್ತದ ಗದ್ದೆ, ಅಡಿಕೆ ತೆಂಗಿನ ತೋಟಗಳು ಜಲಾವೃತವಾಗಿವೆ. ಇದರಿಂದ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ | Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

ಕೊಪ್ಪಳದಲ್ಲಿ ಪ್ರವಾಹ ಭೀತಿ

ಕೊಪ್ಪಳ: ನೀರಿನ ಪ್ರಮಾಣ ಮತ್ತೆ ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ ನದಿಗೆ 1.39 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಮತ್ತೆ ಚಿಕ್ಕಜಂತಕಲ್ ಸೇತುವೆ ಮುಳುಗಿದ್ದು, ವಿರುಪಾಪುರಗಡ್ಡೆ, ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತಗೊಂಡಿದೆ.

ಆನೆಗೊಂದಿಯ ಬಳಿಯ ಶ್ರೀಕೃಷ್ಣದೇವರಾಯ ಸಮಾಧಿ, ಬೆನ್ನೂರು ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಕೃಷಿ ಭೂಮಿಗೆ ನೀರು ನುಗ್ಗುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lakshmi Hebbalkar: ಅಂಗನವಾಡಿ ಪರಿಕಲ್ಪನೆಯನ್ನೇ ನಮ್ಮ ಸರ್ಕಾರ ಬದಲಾಯಿಸಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಕಳೆದ 49 ವರ್ಷಗಳ ಹಿಂದೆ ಇಡೀ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕದ್ದು. ಈಗ ಮತ್ತೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಅಂಗನವಾಡಿಗಳಲ್ಲೇ ‘ಸರ್ಕಾರಿ ಮಾಂಟೆಸ್ಸರಿ’ ಆರಂಭಿಸುವ ಮೂಲಕ ‘ಕರ್ನಾಟಕ’ ದೇಶದ ಇತಿಹಾಸದ ಸುವರ್ಣಾಕ್ಷರದಲ್ಲಿ ಬರೆಯುವಂತ ಹೊಸ ದಾಖಲೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Our government has changed the concept of Anganwadi says Minister Lakshmi Hebbalkar
Koo

ಬೆಳಗಾವಿ: ಕಳೆದ 49 ವರ್ಷಗಳ ಹಿಂದೆ ಇಡೀ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕದ್ದು. ಈಗ ಮತ್ತೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಅಂಗನವಾಡಿಗಳಲ್ಲೇ ‘ಸರ್ಕಾರಿ ಮಾಂಟೆಸ್ಸರಿ’ ಆರಂಭಿಸುವ ಮೂಲಕ ‘ಕರ್ನಾಟಕ’ ದೇಶದ ಇತಿಹಾಸದ ಸುವರ್ಣಾಕ್ಷರದಲ್ಲಿ ಬರೆಯುವಂತ ಹೊಸ ದಾಖಲೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಹಾಗೂ ವಿಶೇಷ ಚೇತನರ ಇಲಾಖೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ 1975ನೇ ಇಸವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಪ್ರಪ್ರಥಮ ಬಾರಿಗೆ ನಮ್ಮ ದೇಶದ ಉಕ್ಕಿನ ಮಹಿಳೆ ದಿ. ಇಂದಿರಾ ಗಾಂಧಿಯವರು ಅಂಗನವಾಡಿಗಳಿಗೆ ಚಾಲನೆ ಕೊಟ್ಟರು ಎಂದು ಹೇಳಿದರು.

ಇದನ್ನೂ ಓದಿ: Invest Karnataka: ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ. ಹೂಡಿಕೆ; ರಾಮನಗರದಲ್ಲಿ ಘಟಕ

ಬಡವರ, ಹಳ್ಳಿಯ ರೈತರ ಮಕ್ಕಳಿಗೆ ಪೌಷ್ಠಿಕ ಆಹಾರದ ಜತೆಯಲ್ಲಿ ಅವರಿಗೆ ಒಳ್ಳೆಯ ಶಿಕ್ಷಣ ಸಿಗಬೇಕು; ಒಳ್ಳೆಯ ಆರೈಕೆ ಸಿಗಬೇಕು ಎನ್ನುವ ಆಶಯದಿಂದ 49 ವರ್ಷಗಳ ಹಿಂದೆ ದಿ. ಇಂದಿರಾ ಗಾಂಧಿಯವರು, ಅದೂ ಕರ್ನಾಟಕದಲ್ಲೇ, ಅದೂ ನಮ್ಮ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಸ್ಥಾಪಿಸಿದರು. ಕರ್ನಾಟಕದಲ್ಲಿ ಅಂಗನವಾಡಿ ಸ್ಥಾಪನೆಗೊಂಡು ಮುಂದಿನ ವರ್ಷಕ್ಕೆ ಐವತ್ತು ವರ್ಷಗಳು ತುಂಬಲಿದ್ದು, ನಮ್ಮ ಅಂಗನವಾಡಿಗಳು ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಷಯ ಎಂದರು.

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ

ಇಡೀ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅದೂ ನಮ್ಮ ಕರ್ನಾಟಕದಲ್ಲಿ ನಮ್ಮ ಅಂಗನವಾಡಿಗಳು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸುಸಂದರ್ಭದಲ್ಲಿ ಇಲಾಖೆಯ ಸಚಿವೆಯಾಗಿ ಇರುವುದು ಹೆಮ್ಮೆ ಎನಿಸುತ್ತಿದೆ. ಹಿಂದೆ ಒಂದು ಕಾಲವಿತ್ತು ಅಂಗನವಾಡಿಗಳಿಗೆ ಹೋಗುವ ಮಕ್ಕಳೆಂದರೆ, ನರ್ಸರಿಗಳಿಗೆ ಫೀ ಕಟ್ಟಲಾಗದವರು, ಬಡವರ ಮಕ್ಕಳು ಮಾತ್ರ ಹೋಗುವ ಪರಿಕಲ್ಪನೆ ಇತ್ತು. ಆದರೆ, ಇಂದು ಆ ಪರಿಕಲ್ಪನೆ ಬದಲಾಗಿದೆ. ನಮ್ಮ ಸರ್ಕಾರ ನಮ್ಮ ಅಂಗನವಾಡಿ ಚಿತ್ರಣವನ್ನೇ ಬದಲಾಯಿಸಿದೆ. ನಮ್ಮ ಅಂಗನವಾಡಿಗಳಲ್ಲೇ ಸರ್ಕಾರಿ ಮಾಂಟೆಸ್ಸರಿ-ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಆರಂಭಿಸಿದೆ. ಈಗಾಗಲೇ, ಬೆಂಗಳೂರಿನಲ್ಲಿ 250 ಎಲ್‌ಕೆಜಿ, ಯುಕೆಜಿ ನರ್ಸರಿಗಳು ಚಾಲನೆಗೊಂಡಿವೆ ಎಂದು ಹೇಳಿದರು.

ದುಡಿಯುವ ಜನರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ

ದೇಶ ಬೆಳೆಯುತ್ತಿದೆ. ರಾಜ್ಯವೂ ಅಭಿವೃದ್ಧಿಯಲ್ಲಿ ಮುನ್ನಡೆಯುತ್ತಿವೆ, ಹಾಗೆಯೇ ನಮ್ಮ ಅಂಗನವಾಡಿಗಳು ಕೂಡ ಉನ್ನತೀಕರಣ ಆಗಬೇಕೆಂಬ ಆಶಯದಿಂದ ನಮ್ಮ ಇಲಾಖೆ, ಅಂಗನವಾಡಿಗಳನ್ನು ಆಧುನೀಕರಣಗೊಳಿಸುತ್ತಿದೆ. ಇದು ಪೈಪೋಟಿ ಯುಗ, ಆಧುನಿಕ ತಂತ್ರಜ್ಜಾನ ಯುಗ. ಹಾಗಾಗಿ, ಇಂತಹ ಯುಗದಲ್ಲಿ, ಬಿಡುವಿಲ್ಲದೆ ದುಡಿಯುವ ಜನರ ಮಕ್ಕಳು, ರೈತರ ಮಕ್ಕಳು ಕೂಡ ನರ್ಸರಿ ಕಲಿಯಬೇಕೆಂಬ ಆಶಯದಿಂದ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ. ಇಂಗ್ಲೀಷ್ ಮತ್ತು ಕನ್ನಡದಲ್ಲಿ ಮಕ್ಕಳಿಗೆ ಕಲಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಅಂಗನವಾಡಿಯಲ್ಲೂ ಎಂಎ, ಬಿಇ ಕಲಿತವರು

ಅಂಗನವಾಡಿಗಳಲ್ಲಿ ಸರ್ಕಾರದ, ಇಲಾಖೆಯ ಅಶಯದಂತೆ ಕಾರ್ಯಕರ್ತೆಯರು ಕೆಲಸ ಮಾಡಬೇಕು. ತಮ್ಮ ಮಕ್ಕಳಂತೆ ಫೋಷಿಸಿ, ಅವರನ್ನು ಒಳ್ಳೆಯ ಶಿಕ್ಷಣವಂತರಾಗಿ ಬೆಳೆಯಲು ಸಹಕಾರ ನೀಡಬೇಕು. ಈಗ ಅಂಗನವಾಡಿ ಗಳಲ್ಲಿ ಕೆಲಸ ಮಾಡುವವರಿಗೆ ಪಿಯುಸಿ ಮಾನದಂಡ ಮಾಡಲಾಗಿದೆ. ಆದರೆ, ಈಗಾಗಲೇ ಅಂಗನವಾಡಿಗಳಲ್ಲಿ ಎಂ ಎ, ಬಿಎ, ಬಿಎಡ್, ಬಿಇ ಕಲಿತವರು ಕೂಡ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇದು ಹೆಮ್ಮೆಯ ಸಂಗತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

18 ಸಾವಿರ ಮಾಂಟೆಸ್ಸರಿ ಆರಂಭ

ಇಡೀ ರಾಜ್ಯದಲ್ಲಿ 18 ಸಾವಿರ, ಬೆಳಗಾವಿ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು, ಅದರಲ್ಲೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ 300ಕ್ಕೂ ಅಧಿಕ ಎಲ್‌ಕೆಜಿ, ಯುಕೆಜಿ ಯನ್ನು ಆರಂಭಿಸಲಾಗುವುದು. ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಮಾಂಟೆಸ್ಸರಿಗಳನ್ನು ತೆರೆಯಲಾಗುತ್ತಿದ್ದು, ಇಲಾಖೆ ವತಿಯಿಂದ ಮಕ್ಕಳಿಗೆ ಯುನಿಫಾರಂ, ಸ್ಕೂಲ್ ಬ್ಯಾಗ್, ನೋಟ್ ಪುಸ್ತಕ, ಕಲಿಕಾ ಪುಸ್ತಕಗಳನ್ನು ವಿತರಿಸಲಾಗುವುದು. ಮುಂದಿನ ತರಗತಿಗಳಿಗೆ ಹೋಗಲು ಟಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಇದನ್ನೂ ಓದಿ: MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

ಈ ವೇಳೆ ಇಲಾಖೆಯ ಉಪ ನಿರ್ದೇಶಕ ನಾಗರಾಜ, ಸಿಡಿಪಿಓ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Congress government: ನಮ್ಮ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ: ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ

Congress government: 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತೆಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ ಎಂದು ಬಿಜೆಪಿಗೆ ನಾಯಕರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ ನೀಡಿದ್ದಾರೆ.

VISTARANEWS.COM


on

Congress government
Koo

ಹಾಸನ: ರಾಜ್ಯದಲ್ಲಿ ಒಂದು ಇಂಚು ಸಿಎಂ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್‌ ಸರ್ಕಾರವನ್ನು (Congress government) ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತದೆ, ನೀವು ಎಚ್ಚರಿಕೆಯಿಂದ ಇರಬೇಕು. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ, ವಾಪಸ್ ತೆಗೆದುಕೊಳ್ಳಿ, ಇಲ್ಲವಾದರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ. ಟಿವಿ ಮಾಧ್ಯಮಗಳಲ್ಲಿ ಈ ಬಗ್ಗೆ ಬರುತ್ತಿದೆ. ಟಿವಿ ಮಾಧ್ಯಮಗಳಲ್ಲಿ ಬಂದಿದ್ದು, ಬಹುಶಃ ನಿಜ ಆಗಬಹುದು. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಭಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ, ಹಿಂಭಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಬಿಜೆಪಿಯವರು ಆಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಇಸತ್ಯಶೋಧನ ಸಮಿತಿ ಸಭೆ ನಡೆಸಿದ್ದೇವೆ. ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ. ಸರ್ಕಾರ ಬೀಳಿಸಿದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಕ್ತ ಕ್ರಾಂತಿ ಆಗುತ್ತೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಬೇಕು. ಈ ರಾಜ್ಯದಲ್ಲಿ ಯುದ್ಧವನ್ನೇ ಮಾಡಬೇಕಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ | MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತೆಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ. ಇದು ಬಿಜೆಪಿಗೆಯವರಿಗೆ ಎಚ್ಚರಿಕೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ, ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೋಟಿಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

Continue Reading

ಇನ್ವೆಸ್ಟ್ ಕರ್ನಾಟಕ

Invest Karnataka: ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ. ಹೂಡಿಕೆ; ರಾಮನಗರದಲ್ಲಿ ಘಟಕ

Invest Karnataka: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ.2,100 ಕೋಟಿ ಹೂಡಲಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

2100 crore rupees investment in the state by Sunsera Company; Sign the agreement
Koo

ಬೆಂಗಳೂರು: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ. 2,100 ಕೋಟಿ ಹೂಡಲಿದೆ (Invest Karnataka). ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸನ್ಸೇರಾ ಎಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 3,500 ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದೆ ಎಂದರು.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಕಂಪನಿಯು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಕೇಂದ್ರ ಆರಂಭಿಸಲಿದ್ದು, ಇದರಿಂದ ಸ್ಥಳೀಯರ ಕೌಶಲ ವೃದ್ಧಿಯಾಗಲಿದೆ. ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್‌.ಆರ್‌. ಸಿಂಘ್ವಿ, ಕಾರ್ಯದರ್ಶಿ ರಾಜೇಶ್‌ ಮೋದಿ ಉಪಸ್ಥಿತರಿದ್ದರು.

ಓಟಿಸ್ ಕಂಪನಿಯಿಂದ ರೂ.135 ಕೋಟಿ ಹೂಡಿಕೆ

ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ: Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ಇದಕ್ಕಾಗಿ ಕಂಪನಿಯು ಹಾರೋಹಳ್ಳಿಯಲ್ಲಿ 12 ಎಕರೆ ಭೂಮಿಯನ್ನು ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ 200ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

Continue Reading

ಕರ್ನಾಟಕ

MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

MB Patil: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರಿಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Toyota company investment in the state will continue as usual says Minister MB Patil
Koo

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರಿಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಆದರೆ ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರಿದುಕೊಂಡು ಹೋಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಟೊಯೋಟಾ ಕಂಪನಿಯು 2023 ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ಉದ್ಯಮಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವುದು ಒಂದು ಸಹಜ ವಿದ್ಯಮಾನ. ಟೊಯೋಟಾ ಕೂಡ ಅದೇ ರೀತಿಯಲ್ಲಿ ನೆರೆ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದೆ. ಇದನ್ನು ಕರ್ನಾಟಕಕ್ಕೆ ಆಗುತ್ತಿರುವ ನಷ್ಟವೆಂದು ಭಾವಿಸುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

Continue Reading
Advertisement
Crocodile Attack
Latest11 seconds ago

Crocodile Attack: ತಂದೆಯ ಜೀವ ಉಳಿಸಲು ಮೊಸಳೆ ಬಾಯಿಗೆ ಕೈ ಹಾಕಿದ ಬಾಲಕ!

Viral Video
Latest3 mins ago

Viral Video: ನಾಗದೇವತೆ ವಿಗ್ರಹದ ಮೇಲೆ ಹೆಡೆ ಬಿಚ್ಚಿ ನಿಂತ ನಾಗರ ಹಾವು!

Nutrients For The Human Body
ಆರೋಗ್ಯ6 mins ago

Nutrients For The Human Body: ನಮ್ಮ ದೇಹವೆಂಬ ಕಾರ್ಯಾಲಯದಲ್ಲಿ ಕೆಲಸ ಮಾಡುವ 22 ಪೋಷಕಾಂಶಗಳ ಬಗ್ಗೆ ನಿಮಗೆ ಗೊತ್ತೇ?

Our government has changed the concept of Anganwadi says Minister Lakshmi Hebbalkar
ಕರ್ನಾಟಕ14 mins ago

Lakshmi Hebbalkar: ಅಂಗನವಾಡಿ ಪರಿಕಲ್ಪನೆಯನ್ನೇ ನಮ್ಮ ಸರ್ಕಾರ ಬದಲಾಯಿಸಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Congress government
ಕರ್ನಾಟಕ24 mins ago

Congress government: ನಮ್ಮ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ: ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ

Nino Salukvadze
ಕ್ರೀಡೆ44 mins ago

Nino Salukvadze: ತಂದೆಯ ಆಸೆಯಂತೆ 10ನೇ ಒಲಿಂಪಿಕ್ಸ್ ಆಡಿ ದಾಖಲೆ ಬರೆದ ಜಾರ್ಜಿಯಾದ ಮಹಿಳಾ ಶೂಟರ್‌

2100 crore rupees investment in the state by Sunsera Company; Sign the agreement
ಇನ್ವೆಸ್ಟ್ ಕರ್ನಾಟಕ48 mins ago

Invest Karnataka: ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ. ಹೂಡಿಕೆ; ರಾಮನಗರದಲ್ಲಿ ಘಟಕ

Kaftan Kurta Fashion
ಫ್ಯಾಷನ್50 mins ago

Kaftan Kurta Fashion: ಸಿಂಪಲ್‌ ಲುಕ್‌ಗೆ ಸಾಥ್‌ ನೀಡುವ ದೊಗಲೆ ಕಫ್ತಾನ್‌ ಕುರ್ತಾ!

Paris Olympics
ಕ್ರೀಡೆ50 mins ago

Paris Olympics: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತದ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ; 4 ಪದಕ ನಿರೀಕ್ಷೆ!

Toyota company investment in the state will continue as usual says Minister MB Patil
ಕರ್ನಾಟಕ50 mins ago

MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌