Site icon Vistara News

Karnataka Rain: ಮುಂದಿನ 24 ಗಂಟೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ; ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Weather Forecast

ಬೆಂಗಳೂರು: ರಾಜ್ಯದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು (Karnataka Rains) ಹವಾಮಾನ ಇಲಾಖೆ (Weather report) ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ವಿಜಯಪುರ ಹಾಗೂ ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್‌ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ (Latest Rain Alert) ಮಳೆಯಾಗಲಿದೆ.

ಇನ್ನು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Suicide Case: ಪ್ರೀತಿಸಿ ಮದುವೆ ಆದವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಎಂದ ಮೃತಳ ಕುಟುಂಬಸ್ಥರು

ಉತ್ತರ ಒಳನಾಡು ಹಾಗೂ ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಬೆಳಗಾವಿಯ ಗೋಕಾಕ್‌ನಲ್ಲಿ 5 ಸೆಂ.ಮೀ, ಬೈಲಹೊಂಗಲ, ಔರಾದ್ ತಲಾ 3 ಹಾಗೂ ಮುಂಡಗೋಡ, ನರಗುಂದ, ಬೆಳಗಾವಿ, ಖಜೂರಿ, ಹುಮನಾಬಾದ್, ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 36.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Exit mobile version