karnatakarain-Heavy rainfall in North Interior in karnataka Karnataka Rain: ಉತ್ತರ ಕರ್ನಾಟದಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲಿಗೆ ಜಾನುವಾರುಗಳು ಬಲಿ, ಹೊತ್ತಿ ಉರಿದ ತೆಂಗಿನ ಮರ - Vistara News

ಕರ್ನಾಟಕ

Karnataka Rain: ಉತ್ತರ ಕರ್ನಾಟದಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲಿಗೆ ಜಾನುವಾರುಗಳು ಬಲಿ, ಹೊತ್ತಿ ಉರಿದ ತೆಂಗಿನ ಮರ

Karnataka Rain: ಉತ್ತರಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಿಡಿಲು ಹಾಗೂ ಆಲಿಕಲ್ಲು ಸಹಿತ (Weather updates) ಮಳೆಯಾಗುತ್ತಿದೆ. ಶುಕ್ರವಾರ ಕಲಬುರಗಿಯಲ್ಲಿ ಸಿಡಿಲಿಗೆ ಜಾನುವಾರುಗಳು ಮೃತಪಟ್ಟಿದ್ದರೆ ಇತ್ತ ಕೊಪ್ಪಳದಲ್ಲಿ ಸಿಡಿಲಿಗೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ/ಕಲಬುರಗಿ: ರಾಜ್ಯಾದ್ಯಂತ ಶುಕ್ರವಾರ (ಏ.7) ಮಳೆ (Karnataka Rain) ಅಬ್ಬರಿಸುತ್ತಿದ್ದು, ಸಿಡಿಲಿಗೆ ಜಾನುವಾರುಗಳು ಬಲಿಯಾಗಿವೆ. ಕಲಬುರಗಿ ಜಿಲ್ಲೆಯ ಅವರಳ್ಳಿ ಗ್ರಾಮದಲ್ಲಿ ಸಿಡಿಲಿಗೆ ಮೂರು ಜಾನುವಾರುಗಳು ಬಲಿಯಾಗಿವೆ. ಗ್ರಾಮದ ಬನ್ನೆಪ್ಪಾ ಪೂಜಾರಿ ಎಂಬುವವರಿಗೆ ಸೇರಿರುವ ಜಾನುವಾರುಗಳು ಶುಕ್ರವಾರ ನಸುಕಿನ ಜಾವ ಸಿಡಿಲಿಗೆ ಮೃತಪಟ್ಟಿವೆ. ಇತ್ತ ಲಕ್ಷಾಂತರ ಮೌಲ್ಯದ ಜಾನುವಾರುಗಳನ್ನು ಕಳೆದುಕೊಂಡ ರೈತ ಬನ್ನೆಪ್ಪಾ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

Karnataka Rain
ಬಿರುಗಾಳಿಗೆ ಹಾರಿದ ಪೊಲೀಸ್‌ ಬ್ಯಾರಿಕೇಟ್‌ಗಳು

ಇನ್ನು ಗುರುವಾರ ರಾತ್ರಿಯಿಂದಲೇ ಬಿರುಗಾಳಿ ಸಹಿತ ಮಳೆ ಆಗುತ್ತಿದ್ದು, ಶುಕ್ರವಾರ ಕಲಬುರಗಿಯಾದ್ಯಂತ ಮೋಡ ಕವಿದ ವಾತಾವರಣ ಇತ್ತು. ಇತ್ತ ಅಫಜಲಪುರದಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳು ಹಾರಿ ಹೋಗಿದ್ದವು. ಮಹಾರಾಷ್ಟ್ರ-ಕರ್ನಾಟಕ ಗಡಿಭಾಗ ಬಳೂರ್ಗಿ ಹಾಗೂ ಅರ್ಜುಣಗಿಗಳಲ್ಲಿ ವಿಧಾನಸಭಾ ಚುನಾವಣೆ ನಿಮಿತ್ತ ಪೊಲೀಸರಿಗಾಗಿ ನಿರ್ಮಿಸಿದ್ದ ಚೌಕಿಗಳು, ಟೆಂಟ್‌ಗಳು ಧರೆಗುರುಳಿದ್ದವು. ರಾತ್ರಿಯಿಡಿ ಸುರಿದ ಗಾಳಿ ಮಳೆಗೆ ಟೆಂಟ್‌ ಹಾರಿ ಹೋಗಿ, ಪೊಲೀಸರು ರಾತ್ರಿಯಿಡೀ ಜಾಗರಣೆ ಇರುವಂತಾಯಿತು.

Karnataka Rain
ತೆಂಗಿನ ಮರಕ್ಕೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ ಸಿಬ್ಬಂದಿ

ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

ಕೊಪ್ಪಳ ಜಿಲ್ಲೆಯ ವಿವಿಧೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಆಗುತ್ತಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಭೀಮಾಂಬಿಕ ದೇವಸ್ಥಾನದ ಆವರಣದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಕುಕನೂರು ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ಇರುವ ಭೀಮಾಂಬಿಕ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದರು. ಅದೃಷ್ಟವಶಾತ್‌ ಅಕ್ಕ ಪಕ್ಕ ಜನರು ಯಾರು ಇರದ ಕಾರಣಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇತ್ತ ಮೊದಲ ವರ್ಷಧಾರೆಯಿಂದ ರೈತರ ಮೊಗದಲ್ಲಿ ಹರುಷ ಉಂಟಾಗಿದ್ದು, ಕೃಷಿ ಕಾರ್ಯದಲ್ಲಿ ತೊಡಗಿದ್ದರು.

Karnataka Rain
ಬಿರುಗಾಳಿ ಸಹಿತ ಮಳೆ

ವಿಜಯನಗರದಲ್ಲಿ ಸಿಡಿಲಿನಿಂದ ಪಾರಾದ ಚೆಕ್ ಪೋಸ್ಟ್ ಸಿಬ್ಬಂದಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಚೆಕ್ ಪೋಸ್ಟ್ ಸಿಬ್ಬಂದಿ ಸಿಡಿಲಿನಿಂದ ಪಾರಾಗಿದ್ದಾರೆ. ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ತೆಂಗಿನ ಮರಕ್ಕೆ ಬೆಂಕಿ ಬಿದ್ದಿದ್ದು, ಸಿಡಿಲಿನ ಶಬ್ಧಕ್ಕೆ ಬೆದರಿ ಓಡಿದ್ದಾರೆ. ಬಿಸಿಲಿನಿಂದ ಬಸವಳಿದಿದ್ದ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ, ಹಂಪಾಪಟ್ಟಣ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇನ್ನು ಹೊಸಪೇಟೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ ಜಿಟಿ, ಜಿಟಿಯಾಗಿ ಮಳೆಯಾಗುತ್ತಿದೆ.

ಶಿರಸಿಯಲ್ಲಿ ಆಲಿಕಲ್ಲು ಮಳೆ

ಆಲಿಕಲ್ಲು ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿತ್ತು. ಅದರಂತೆ ಶಿರಸಿ ಸುತ್ತಮುತ್ತ ಶುಕ್ರವಾರ ಆಲಿಕಲ್ಲು ಸಹಿತ ಮಳೆಯಾಗಿರುವ ವರಿದಿ ಆಗಿದೆ.

ಇದನ್ನೂ ಓದಿ: Suicide Case: ಗಂಡ ಚಾಕೊಲೇಟ್‌ ತಂದು ಕೊಡಲಿಲ್ಲವೆಂದು ನೇಣಿಗೆ ಶರಣಾದಳು ಹೆಂಡತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ; ಹಣ ಸುಲಿಗೆ

ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ (Assault Case) ವಿಕೃತಿ ತೋರಿದ್ದಾರೆ.

VISTARANEWS.COM


on

sural falls assault case
Koo

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಕ್ರೈಂ

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Actor Darshan: ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

VISTARANEWS.COM


on

Actor Darshan Judicial Custody Jailer Gave UTP Number
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆ ಅಧಿಕಾರಿಗಳು, ಶೂಟಿಂಗ್ ಕ್ರೀಡಾಪಟುಗಳು, ಶಾಸಕರು, ಪರಿಷತ್ ಸದಸ್ಯರು ಸೇರಿ ಹಿರಿಯ ರಾಜಕಾರಣಿಗಳಿಗೆ ಮಾತ್ರ ವಿನಾಯಿತಿ ನೀಡಬಹುದು. ಉಳಿದಂತೆ ಎಲ್ಲರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಶಕ್ಕೆ ಪಡೆಯಬೇಕು.

ಸದ್ಯ ಪ್ರದೋಷ್‌ಗೆ ಸಂಬಂಧಪಟ್ಟಂತೆ ಗಿರಿನಗರ ಠಾಣೆ ಹಾಗೂ ದರ್ಶನ್‌ಗೆ ಸಂಬಂಧಪಟ್ಟಂತೆ ಆರ್.ಆರ್.ನಗರ ಠಾಣಾಧಿಕಾರಿಗಳಿಗೆ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಿಕ್ಕೆ ಸೂಚನೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಂದ ಎರಡು ಠಾಣೆ ಪೊಲೀಸ್ ಇನ್ಸ್ಪೆಕ್ಟರ್‌ಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Karnataka Milk Federation: ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

VISTARANEWS.COM


on

Karnataka Milk Federation
Koo


ಕರ್ನಾಟಕ ಹಾಲು ಮಹಾಮಂಡಳಿ (Karnataka Milk Federation) ನಂದಿನಿ ಹಾಲಿನ ದರ ಏರಿಕೆಯನ್ನು ಘೋಷಿಸಿದೆ. ಹೊಸ ದರ ಬುಧವಾರದಿಂದ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ ಎಳೆದಿದ್ದ ಕರ್ನಾಟಕ ಸರ್ಕಾರ, ಈಗ ಹಾಲಿನ ದರ ಏರಿಕೆ ಮಾಡಿ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ದರ ಏರಿಕೆಯಿಂದ ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳವಾಗಲಿದೆ. ಬೆಲೆ ಹೊಂದಾಣಿಕೆಯ ಜೊತೆಗೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಒದಗಿಸಲು ನಂದಿನಿ ಹಾಲಿನ ಪ್ರತಿ ಪ್ಯಾಕೆಟ್ ಈಗ 50 ಮಿಲಿ ಲೀಟರ್ ಹೆಚ್ಚು ಹಾಲನ್ನು ಹೊಂದಿರುತ್ತದೆ. ಉದಾಹರಣೆಗೆ, ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 550 ಮಿ.ಲೀ. ಹಾಲನ್ನು ಹೊಂದಿರುತ್ತದೆ. ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲೂ 50 ಮಿ.ಲೀ. ಹೆಚ್ಚಿರುತ್ತದೆ. ಈ ಹೆಚ್ಚುವರಿ ಹಾಲಿನ ದರವನ್ನು ಮಾತ್ರ ವಸೂಲಿ ಮಾಡಲಾಗುತ್ತದೆ ಎಂಬುದು ಈ ಬೆಲೆ ಏರಿಕೆ ಮಾಡಿದವರ ಸಮಜಾಯಿಷಿ.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ (Nandini Milk Price Hike) ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಈ ಕ್ರಮದಲ್ಲಿ ಸದುದ್ದೇಶವೇ ಇರುವಂತೆ ಕಾಣಿಸುತ್ತಿದೆ. ಯಾಕೆಂದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬುದು ಸದುದ್ದೇಶ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯ. ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲನ್ನು ಸೇರಿಸುವುದು ಸರಿ. ಅದು ಬಳಕೆದಾರನಿಗೆ ಲಾಭವಾಗಿ ಸಿಗುವಂತೆ ಮಾಡದೆ, ಆತನಿಗೆ ಬೇಕಿಲ್ಲದಿದ್ದರೂ ಬಲವಂತವಾಗಿ ನೀಡುತ್ತಿರುವಂತೆ ಈ ಕ್ರಮ ಇದೆ. ಬಳಕೆದಾರನ ದೃಷ್ಟಿಯಿಂದ ಇದು ಅಷ್ಟೇನೂ ಸರಿಯಾದ ಕ್ರಮವಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಈಗಲೂ ಹಾಲಿನ ಮಾರಾಟದಿಂದ ಕೆಎಂಎಫ್‌ ಲಾಭವನ್ನು ಗಳಿಸುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಜೊತೆಗೆ ಮೊಸರು, ತುಪ್ಪ, ಬೆಣ್ಣೆ ಮುಂತಾದ ನಂದಿನಿ ಹೈನು ಉತ್ಪನ್ನಗಳಿವೆ. ಹಾಗೆಯೇ ಮೈಸೂರು ಪಾಕ್‌, ಪೇಢ ಮುಂತಾದ ಸಿಹಿ ಉತ್ಪನ್ನಗಳೂ ಇವೆ. ಇವೆಲ್ಲವುಗಳ ಮಾರಾಟದಿಂದ ಬರುತ್ತಿರುವ ಒಟ್ಟಾರೆ ಆದಾಯವು ಈ ಸಂಸ್ಥೆಯನ್ನು ಸಲಹುತ್ತಿದೆ. ರಾಜ್ಯದಲ್ಲಿ ಹಾಲಿನ ಬಳಕೆಯನ್ನು ಹೆಚ್ಚು ಮಾಡಬೇಕು; ಆ ಮೂಲಕ ಹೈನುಗಾರರಿಗೆ ನೆರವಾಗಬೇಕು ಎಂಬ ಉದ್ದೇಶವೇನೋ ಚೆನ್ನಾಗಿದೆ. ಆದರೆ ಇದನ್ನು ಬೇರೆ ಮೂಲಗಳಿಂದ ಭರಿಸಬೇಕು ಹೊರತು ಹಾಲಿನಿಂದಲ್ಲ. ಯಾಕೆಂದರೆ ಹಾಲು ಒಂದು ರೀತಿಯಿಂದ ಎಲ್ಲರ ಅಗತ್ಯ ಆಹಾರ. ಹೊಟ್ಟೆ ತುಂಬ ಊಟವಿಲ್ಲದಾಗ ಹಾಲು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುವವರಿದ್ದಾರೆ. ಮಕ್ಕಳಿಗೆ, ಮಹಿಳೆಯರಿಗೆ ಹಾಲು ಅತ್ಯಂತ ಪೌಷ್ಟಿಕ ಆಹಾರ. ಆದರೆ ಎಲ್ಲರೂ ಈ ಏರಿದ ಬೆಲೆಯಲ್ಲಿ ಹಾಲನ್ನು ಕೊಳ್ಳುವ ಸ್ಥಿತಿವಂತರಾಗಿರುವುದಿಲ್ಲ.

ಜೊತೆಗೆ ಹಾಲಿನ ದರ ಏರಿಕೆಯೆಂದರೆ ಒಂದು ರೀತಿಯಲ್ಲಿ ಪೆಟ್ರೋಲ್‌ ದರ ಏರಿಕೆಯಂತೆಯೇ. ಇದನ್ನನುಸರಿಸಿ ಕಾಫಿ, ಟೀ ಮುಂತಾದ ಹೋಟೆಲ್‌ ಉತ್ಪನ್ನಗಳ ದರಗಳು ಹೆಚ್ಚಾಗಲಿವೆ. ಮೊಸರು, ತುಪ್ಪ, ಬೆಣ್ಣೆಗಳ ದರವೂ ಹೆಚ್ಚಬೇಕಾದೀತು. ಹಾಲನ್ನು ಬಳಸಿ ಮಾಡುವ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಇದು ಬಳಕೆದಾರರಿಗೆ ಹೊರೆಯೇ ಆಗಿದೆ. ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

Continue Reading
Advertisement
Sunita Williams
ವಿದೇಶ6 mins ago

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

IND vs ENG
ಕ್ರೀಡೆ11 mins ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Foxconn's Hiring
ಉದ್ಯೋಗ20 mins ago

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

Indian 2 trailer Kamal Haasan as master of disguise
South Cinema23 mins ago

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

sural falls assault case
ಕ್ರೈಂ32 mins ago

Assault Case: ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ; ಹಣ ಸುಲಿಗೆ

Members of Parliament
Latest50 mins ago

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

Actor Darshan Judicial Custody Jailer Gave UTP Number
ಕ್ರೈಂ2 hours ago

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Health Tips Kannada
ಆರೋಗ್ಯ2 hours ago

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

NEET Paper Leak
ಶಿಕ್ಷಣ2 hours ago

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

Karnataka Weather
ಕರ್ನಾಟಕ2 hours ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌