Site icon Vistara News

Karnataka Rain: ವಿಜಯಪುರದಲ್ಲಿ ಸಿಡಿಲು ಬಡಿದು 12 ಕುರಿಗಳು ಬಲಿ, ಕಂಗಾಲಾದ ರೈತರು; ರಾಜ್ಯದ ಅಲ್ಲಲ್ಲಿ ಇಂದೂ ಇದೆ ಮಳೆ

#image_title

ವಿಜಯಪುರ: ಇಲ್ಲಿನ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಿಡಿಲು ಬಡಿದು 12 ಕುರಿಗಳು ಮೃತಪಟ್ಟಿವೆ. ವಿಜಯಪುರದಲ್ಲಿ ಕಳೆದೆರಡು ದಿನಗಳಿಂದ ಗುಡುಗು ಸಹಿತ ಮಳೆ (Karnataka Rain) ಆಗುತ್ತಿದ್ದು, ಜನಜೀವನಕ್ಕೆ ತೊಂದರೆಯಾಗಿದೆ.

ಗ್ರಾಮದ ಮಲಕಪ್ಪ ಸಾಸನೂರ ಹಾಗೂ ಮಾಳಪ್ಪ ತಳಗೇರಿ ಎಂಬುವವರಿಗೆ ಸೇರಿದ 12 ಕುರಿಗಳು ಬಲಿಯಾಗಿವೆ. ಭಾನುವಾರ ಸಂಜೆ ಹೊಲದಲ್ಲಿ ಮೇವು ಮೇಯಿಸುವಾಗ, ಮಳೆ ಬಂದ ಹಿನ್ನೆಲೆಯಲ್ಲಿ ಮರದ ಕೆಳಗೆ ಕುರಿಗಳನ್ನು ಕಟ್ಟಲಾಗಿತ್ತು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಎಲ್ಲ ಕುರಿಗಳು ಮೃತಪಟ್ಟಿವೆ. ಕಂಗಾಲಾದ ರೈತರಿಬ್ಬರು ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸೋಮವಾರ ಕೊಪ್ಪಳ, ವಿಜಯಪುರದಲ್ಲಿ ಗುಡುಗು ಮಳೆ ಸಾಧ್ಯತೆ

ಏ.17ರಂದು ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain Update) ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka rain news) ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Elections 2023 : ಹಿರಿಯ ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಸೇರ್ಪಡೆ; ಕಮಲ ಪಾಳಯಕ್ಕೆ ಹೊಡೆತ

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ನಗರದಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

Exit mobile version