Site icon Vistara News

Karnataka Rain: ಮತ್ತೆ ರಾಜ್ಯದಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ; ಬೆಂಗಳೂರಲ್ಲಿ ಸಂಜೆಗೇ ಮಳೆ ಕಾಟ

weather report

ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ (Karnataka Rain) ಅಬ್ಬರಿಸಲಿದ್ದಾನೆ. ಸೋಮವಾರದಿಂದ (ಮಾ.27) ಮೂರು ದಿನ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather updates) ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿ ಮಂಡ್ಯ, ಹಾಸನ ಮತ್ತು ಮೈಸೂರು, ಚಾಮರಾಜನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಸೋಮವಾರ (ಮಾ.27) ಕೊಡಗು, ಬೀದರ್, ಕಲಬುರಗಿ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Praveen Nettaru: ಸುಳ್ಯದ ಪಿಎಫ್‌ಐ ಕಚೇರಿ ಸೀಜ್‌ ಮಾಡಿದ NIA; ಇನ್ನಿದನ್ನು ಪರಭಾರೆ ಮಾಡುವಂತಿಲ್ಲ

ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಠಾಂಶ 33 ಹಾಗೂ ಕನಿಷ್ಠ ಉಷ್ಠಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.‌

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version