ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ (Karnataka Rain) ಮುಂದುವರಿದಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿ ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆಯಿಂದ ಇರಲಿದೆ. ಬೆಂಗಳೂರು ನಗರದಲ್ಲಿ ಮುಂಜಾನೆ ಬಿಸಿಲು ಝಳಪಿಸಿದ್ದರೆ, ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು ಬುಧವಾರದಂದು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆಯಿಂದ ಕೂಡಿತ್ತು. ಮೈಸೂರಲ್ಲಿ 3 ಸೆಂ.ಮೀ, ಬಂಡೀಪುರ, ಚನ್ನಪಟ್ಟಣದಲ್ಲಿ ತಲಾ 2 ಸೆಂ.ಮೀ ಹಾಗೂ ಚಾಮರಾಜನಗರ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: Robbery Case: ಅತ್ತ ಸರಸಕ್ಕಾಗಿ ಸರ ಕದ್ದ ಮೂವರು ಹೆಂಡಿರ ಮುದ್ದಿನ ಗಂಡ; ಇತ್ತ ದರೋಡೆಗಿಳಿದ ಆಟೊ ಚಾಲಕರಿಬ್ಬರ ಸೆರೆ
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.7 ಡಿಗ್ರಿ ಸೆಲಿಯಸ್ಸ್ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 13.6 ಡಿಗ್ರಿ ಸೆಲಿಯಸ್ಸ್ ದಾಖಲಾಗಿದೆ.