ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು (Pre monsoon) ಸಕ್ರಿಯವಾಗಿದ್ದು, ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?
ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಜಿಟಿ ಜಿಟಿ ಮಳೆಯೊಂದಿಗೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಎಲ್ಲೆಲ್ಲಿ ಮಳೆಯಾಗಿದೆ?
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಇತ್ತು. ಚಿಂತಾಮಣಿ ಪಿಟಿಒ 6 ಸೆಂ.ಮೀ, ಹಲಬರ್ಗಾ, ಜನವಾಡ, ಮನ್ನಳ್ಳಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ ತಲಾ 3 ಸೆಂ.ಮೀ ಮಳೆಯಾಗಿದೆ.
ಹುಣಸೂರು, ಕೋಲಾರ, ಚಿಕ್ಕಬಳ್ಳಾಪುರ ತಲಾ 2 ಸೆಂ.ಮೀ ಹಾಗೂ ಅಫಜಲಪುರ, ಮುಧೋಳ, ಸೈದಾಪುರ, ದೇವದುರ್ಗ, ಜಾಲಹಳ್ಳಿ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಗೋಪಾಲನಗರ ಎಆರ್‌ಜಿ, ಎಂಪ್ರಿ, ಗುಬ್ಬಿ, ಮಧುಗಿರಿ, ಮಾಗಡಿಯಲ್ಲಿ ತಲಾ 1 ಸೆಂ.ಮೀ ಆಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ