Site icon Vistara News

Karnataka Rain: ವೀಕೆಂಡ್‌ನಲ್ಲೂ ಇರಲಿದೆ ಮಳೆರಾಯನ ಕಿರಿಕ್‌; ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಮಳೆ ಅಲರ್ಟ್‌

#image_title

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಹಾಸನ, ಕೋಲಾರ, ಮಂಡ್ಯ , ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾದಗಿರಿಯ ನಿರ್ಣದಲ್ಲಿ ದಾಖಲೆ ಮಳೆ

ಶುಕ್ರವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಯಾದಗಿರಿಯ ನಿರ್ಣದಲ್ಲಿ 7 ಸೆಂ.ಮೀ, ಶಹಪುರದಲ್ಲಿ 6 ಸೆಂ.ಮೀ ಹಾಗೂ ನಿಟ್ಟೂರು 5 ಸೆಂ.ಮೀ, ಮನ್ನಾಲಿ, ಮಂಠಾಳ, ಸಂತಪುರ, ಜನವಾಡ, ಹುಮನಾಬಾದ್ ಹಾಗೂ ಕಲಬುರಗಿಯ ಕಮಲಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Karnataka Rain: ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ; ರೈತರು ಕಂಗಾಲು, ಗೋಳು ಕೇಳುವವರ‍್ಯಾರು?

ಮುಡಬಿ, ಕೋಲಾರ, ಮಾಲೂರು ಹಾಗೂ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಎಂಪ್ರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ರಾಜೇಶ್ವರ್, ಹಲಬರ್ಗ, ಮುಧೋಳ, ಅಡಕಿ, ಮಹಾಗೋನ್, ಕೋಡ್ಲಾ ಹಾಗೂ ಗುಂಡಗುರ್ತಿ, ತಾಳಿಕೋಟೆ, ಗೋಪಾಲ ನಗರ, ಉತ್ತರಹಳ್ಳಿ, ಹೊಸಕೋಟೆ, ಗೌರಿಬಿದನೂರುನಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ. ಇನ್ನು ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 36.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 12.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version