Site icon Vistara News

Karnataka Rajyotsava : ಸಾಮಾಜಿಕ, ಪ್ರಾದೇಶಿಕ ನ್ಯಾಯ, ಅರ್ಹತೆ, ಪ್ರತಿಭೆ ಮೇಲೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಿಎಂ ಸೂಚನೆ

karnataka rajyotsava meeting

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Kannada Rajyotsava 2023) ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಸಾಮಾಜಿಕ, ಪ್ರಾದೇಶಿಕ ನ್ಯಾಯವನ್ನು (Social and Regional Justice) ಕಡ್ಡಾಯವಾಗಿ ಪಾಲಿಸಬೇಕು. ಎಲ್ಲ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ನಿರ್ಧಾರವನ್ನು ಸೂಚಿಸಿದರು.

ಅರ್ಜಿ ಕೊಡುವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿನ ತೀರ್ಮಾನ

ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ – ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.

68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ; ಸಂಘ-ಸಂಸ್ಥೆಗಳಿಗೆ 10 ಪ್ರಶಸ್ತಿ

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಇದನ್ನೂ ಓದಿ: HD Kumaraswamy : ವರ್ಗಾವಣೆಗೆ ಹಣ ಪಡೆದಿಲ್ಲವೆಂದು ಸಿಎಂ, ಡಿಸಿಎಂ, 30 ಸಚಿವರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಎಚ್‌ಡಿಕೆ ಸವಾಲು

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಎಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ.ಜಾಣಗೆರೆ ವೆಂಕಟರಾಮಯ್ಯ, ಡಾ. ಎಚ್‌.ಎಲ್‌. ಪುಷ್ಪ, ಡಾ. ವೀರಣ್ಣ ದಂಡೆ, ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ಡಾ. ವಿಠಲ್‌ ಐ. ಬೆಣಗಿ, ಡಾ. ಸಣ್ಣರಾಮು, ವೆಂಕಟರಾಮಯ್ಯ, ಡಾ. ಎಂ.ಎಸ್‌. ಮೂರ್ತಿ, ಡಾ. ಗೀತಾ ಶಿವಮೊಗ್ಗ, ಡಾ. ಜಯದೇವಿ ಜಂಗಮ ಶೆಟ್ಟಿ , ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌-, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌. ನರಸಿಂಹರಾಜು, ಡಾ. ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ ಚಂದ್ರಗುಪ್ತ, ಜೆ.ಲೋಕೇಶ್‌ ಉಪಸ್ಥಿತರಿದ್ದರು.

Exit mobile version