Site icon Vistara News

Leaf Spot Disease Of Arecanut: ಅಡಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಂಶೋಧನೆ; 197 ಕೋಟಿ ರೂ.ಗೆ ಕರ್ನಾಟಕ ಪ್ರಸ್ತಾಪ

Karnataka seeks Rs 197 crore to research arecanut crop disease

Arecanut Crop Disease

ಬೆಂಗಳೂರು: ಕರ್ನಾಟಕದಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುವ ಅಡಕೆ ಎಲೆ ಚುಕ್ಕಿ ರೋಗ (Leaf Spot Disease Of Arecanut) ಹಾಗೂ ಹಳದಿ ಎಲೆ ರೋಗದ ನಿಯಂತ್ರಣ ಹಾಗೂ ರೋಗದ ಕುರಿತು ಹೆಚ್ಚಿನ ಸಂಶೋಧನೆ ನಡೆಸಲು 197 ಕೋಟಿ ರೂ. ಅನುದಾನ ನೀಡಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

“ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್‌ನಲ್ಲಿ ಬೆಳೆದ ಅಡಕೆ ಬೆಳೆಗೆ ಎಲೆ ಚುಕ್ಕಿ ರೋಗ ಹಾಗೂ ಹಳದಿ ಎಲೆ ರೋಗವು ಬೆಳೆಗಳನ್ನು ಬಾಧಿಸುತ್ತಿದೆ. ಕ್ಷಿಪ್ರವಾಗಿ ರೋಗವು ಹರಡುತ್ತಿದ್ದು, ರೈತರಿಗೆ ಇನ್ನಿಲ್ಲದ ತೊಂದರೆಯಾಗುತ್ತಿದೆ. ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ, ಅಡಕೆ ಎಲೆಗಳ ರೋಗದ ನಿಯಂತ್ರಣ ಹಾಗೂ ಸಂಶೋಧನೆಯ ಅವಶ್ಯಕತೆ ಇದೆ” ಎಂದು ರಾಜ್ಯ ಸರ್ಕಾರವು ಕೇಂದ್ರ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ ಪ್ರಸ್ತಾಪದಲ್ಲಿ ಮನವಿ ಮಾಡಿದೆ.

ಕಳೆದ ವರ್ಷ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿಯಾಗಿ ಅಡಕೆ ಎಲೆ ರೋಗದ ಕುರಿತು ಮಾಹಿತಿ ನೀಡಿದ್ದರು. ಇದರ ಬಳಿಕ ಕೃಷಿ ಸಚಿವಾಲಯದ ತಜ್ಞರ ಸಮಿತಿಯು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೋಗದ ಕುರಿತು ಪರಿಶೀಲನೆ ನಡೆಸಿದ್ದರು. ತಜ್ಞರ ಸಮಿತಿ ಶಿಫಾರಸಿನಂತೆ ಈಗ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಇದನ್ನೂ ಓದಿ: Campco Golden jubilee : ಅಡಕೆ ಸಂಶೋಧನೆಗೆ ಬಜೆಟ್‌ನಲ್ಲಿ ಅನುದಾನ: ಕ್ಯಾಂಪ್ಕೊ ಸುವರ್ಣ ಮಹೋತ್ಸವದಲ್ಲಿ ಬೊಮ್ಮಾಯಿ

Exit mobile version