Board Exam: 5, 8, 9, 11ನೇ ತರಗತಿ‌ ಮಕ್ಕಳಿಗೆ ಪಬ್ಲಿಕ್‌ ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್‌ ಆದೇಶ ವಿರುದ್ಧ ಮೇಲ್ಮನವಿಗೆ ಸರ್ಕಾರ ಸಜ್ಜು - Vistara News

ಕರ್ನಾಟಕ

Board Exam: 5, 8, 9, 11ನೇ ತರಗತಿ‌ ಮಕ್ಕಳಿಗೆ ಪಬ್ಲಿಕ್‌ ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್‌ ಆದೇಶ ವಿರುದ್ಧ ಮೇಲ್ಮನವಿಗೆ ಸರ್ಕಾರ ಸಜ್ಜು

Board Exam: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಗುರುವಾರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

VISTARANEWS.COM


on

High court Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಪಠ್ಯಕ್ರಮದ (State syllabus) ಎಲ್ಲಾ ಶಾಲೆಗಳಲ್ಲಿ 5, 8, 9 ಮತ್ತು 11ನೇ ತರಗತಿ‌ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ (Board exam) ನಡೆಸುವ ಕ್ರಮವನ್ನು ರದ್ದು ಪಡಿಸಿದ ಹೈಕೋರ್ಟ್ ಏಕಸದಸ್ಯ ಪೀಠದ (high court order) ಆದೇಶ ಪ್ರಶ್ನಿಸಿ ಮೇಲ್ಮನವಿ (Appeal) ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಗುರುವಾರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ. ಪೀಠದ ಆದೇಶಕ್ಕೆ ತಡೆಯಾಜ್ಞೆ ತಂದು ನಿಗದಿಪಡಿಸಿದ ವೇಳಾಪಟ್ಟಿಯಂತೆ 5, 8, 9 ಮತ್ತು 11ನೇ ತರಗತಿಗಳಿಗೆ ಪರೀಕ್ಷೆ ನಡೆಸುವ ಉದ್ದೇಶ ಹೊಂದಿದೆ. ಪರೀಕ್ಷಾ ದಿನಾಂಕ ಸಮೀಪದಲ್ಲಿ ಇರುವುದರಿಂದ, ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಗುರುವಾರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.

ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್‌ ಪರೀಕ್ಷೆಗೆ (Public Exam) ಹೈಕೋರ್ಟ್‌ (Karnataka High Court) ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education department) ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್‌ ಎಕ್ಸಾಂ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಹೀಗಾಗಿ ಈ ಬಾರಿ ಈ ಕ್ಲಾಸ್‌ಗಳಿಗೆ ಬೋರ್ಡ್‌ ಎಕ್ಸಾಂ ಇರುವುದಿಲ್ಲ (Exam Cancelled).

ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಾದವಾಗಿತ್ತು.

ಆದರೆ, 2023ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು. ಇದೀಗ ಹೈಕೋರ್ಟ್‌ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿರುವುದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ.

ಈಗ‌ ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಪಬ್ಲಿಕ್ ಎಕ್ಸಾಮ್‌ ನಡೆಸಲಾಗುತ್ತಿದೆ. 9ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಪದ್ಧತಿ ಇಲ್ಲ.

ಖಾಸಗಿ ಶಿಕ್ಷಣ ಸಂಸ್ಥೆಗಳ ವಾದ ಏನಾಗಿತ್ತು?

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿತ್ತು ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹೀಗಾಗಿ ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು.

ಶಿಕ್ಷಣ ಇಲಾಖೆಯ ವಾದ ಏನಾಗಿತ್ತು ?

ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸರ್ಕಾರದ ಪರ ವಕೀಲರು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: Exam Cancelled : Big Breaking ; 5,8,9 ಮತ್ತು 11ನೇ ತರಗತಿ ಪಬ್ಲಿಕ್‌ ಪರೀಕ್ಷೆ ರದ್ದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

Modi in Karnataka: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಪ್ರಧಾನಿ ಮೋದಿ ಅವರು ಶನಿವಾರ ರಾತ್ರಿ ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ.

VISTARANEWS.COM


on

Koo

ಬೆಳಗಾವಿ: ಎರಡು ದಿನಗಳ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರಿಗಾಗಿ 36 ವಿಧದ ಭಕ್ಷ್ಯ ಭೋಜನಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮೋದಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ.

ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯವಿದ್ದು, ಅವರಿಗಾಗಿ ಜೋಳದ ರೊಟ್ಟಿ, ರಾಗಿ ಮುದ್ದೆ, ಟೊಮ್ಯಾಟೊ ಸಾರು ಸೇರಿ 36 ಖಾದ್ಯಗಳನ್ನು ಹೋಟೆಲ್ ಸಿಬ್ಬಂದಿ ತಯಾರಿಸಿದ್ದರು. ಆದರೆ ರಾತ್ರಿ ಭೋಜನ ತಿರಸ್ಕರಿಸಿರುವ ಪ್ರಧಾನಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿತ್ತು

ಇನ್ನು ಪ್ರಧಾನಿ ಮೋದಿ ಅವರು ಐಟಿಸಿ ವೆಲ್‌ಕಮ್ ಹೋಟೆಲ್‌ಗೆ ಆಗಮಿಸುವ ವೇಳೆ ರಸ್ತೆ ಇಕ್ಕೆಲಗಳಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಮೋದಿ ಪರ ಜೈಕಾರಗಳನ್ನು ಕೂಗಿದರು. ಈ ವೇಳೆ ಮೋದಿ ಅವರು ಮುಗುಳ್ನಗುತ್ತಾ ಜನರತ್ತ ಕೈಬೀಸಿ ಹೋಟೆಲ್‌ನೊಳಗೆ ಹೋದರು.

ಪ್ರಧಾನಿಗೆ ಕಾರ್ಯಕರ್ತರು ಸೇರಿ ಗಣ್ಯರ ಸ್ವಾಗತ

ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಇದಕ್ಕೂ ಮೊದಲೇ ಸಂಸದ ವಿದೇಶಕ್ಕೆ ಹೋಗಿದ್ದಾರೆ.

VISTARANEWS.COM


on

Hassan Pen Drive Case
Koo

ದೇವನಹಳ್ಳಿ: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan Pen Drive Case) ಅವರು ವಿದೇಶಕ್ಕೆ ಹೋಗಿರುವುದು ಕಂಡುಬಂದಿದೆ. ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.

LH 755 ಲುಫ್ತಾನ್ಸಾ (Lufthansa airlines) ಏರ್‌ಲೈನ್ಸ್ ಮೂಲಕ ಕೆಐಎಎಲ್‌ನಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಅವರು ವಿದೇಶಕ್ಕೆ ಹೋಗಿರಬಹುದು ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Modi in Karnataka: ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಬೆಳಗಾವಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು.

VISTARANEWS.COM


on

Modi in Karnataka
Koo

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ನಗರಕ್ಕೆ ಪ್ರಧಾನಿ‌ ನರೇಂದ್ರ ಮೋದಿ (Modi in Karnataka) ಅವರು ಶನಿವಾರ ರಾತ್ರಿ ಆಗಮಿಸಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು. ಅಲ್ಲಿಂದ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ಗೆ ಪ್ರಧಾನಿ ತೆರಳಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ನಗರದ ಕಾಕತಿಯಲ್ಲಿರುವ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಮೋದಿ ಅವರು ವಾಸ್ತವ್ಯ ಮಾಡಲಿದ್ದು, ಅವರಿಗಾಗಿ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ. ಗುಜರಾತಿ ಸೇರಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಶೈಲಿಯ ಖಾದ್ಯಗಳನ್ನು ಸಿದ್ಧಪಡಿಸಿದ್ದು, ಮೂವತ್ತಕ್ಕೂ ಹೆಚ್ಚು ಬಗೆಯೆ ಪದಾರ್ಥಗಳನ್ನು ತಯಾರಿಸಲಾಗಿದೆ. ಇವುಗಳಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ, ಟೊಮ್ಯಾಟೊ ‌ಸಾರು,‌ ದಾಲ್ ಕೂಡ ಸೇರಿವೆ.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

Karnataka Election: PM Modi Roadshow Ends In Bengaluru, Here are some photos

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಹಾಸನ

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Hassan Pen Drive Case: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Hasan pen drive case
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading
Advertisement
ಕರ್ನಾಟಕ6 mins ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ12 mins ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ20 mins ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ35 mins ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್39 mins ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ1 hour ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ2 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ2 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು2 hours ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ2 hours ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20247 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ12 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ19 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌