ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಮುಖರು
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಟಿಎಂಸಿ ಚೀಫ್ ಮಮತಾ ಬ್ಯಾನರ್ಜಿ, ಶಿವಸೇನೆಯಿಂದ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಕ್ತಿ ಮೋರ್ಚಾದ ಹೇಮಂತ್ ಸೊರೆನ್, ಜೆಡಿಯು ನಾಯಕ ನಿತೀಶ್ ಕುಮಾರ್, ಎನ್ಸಿಪಿಯಿಂದ ಶರದ್ ಪವಾರ್, ಸುಪ್ರಿಯಾ ಸುಳೆ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ಜಮ್ಮು-ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಆರ್ಜೆಡಿ ನಾಯಕ ಲಾಲೂಪ್ರಸಾದ್ ಯಾದವ್, ಸಿಪಿಐ (ಎಂ)ನ ನಾಯಕ ಸೀತಾರಾಂ ಯೆಚೂರಿ, ಸಿಪಿಐ ಪಕ್ಷದ ಡಿ.ರಾಜಾ, ಜಮ್ಮು ಕಾಶ್ಮೀರ ನ್ಯಾಶನಲ್ ಕಾನ್ಫರೆನ್ಸ್ನ ಒಮರ್ ಅಬ್ದುಲ್ಲಾ.
ಪ್ರತಿಪಕ್ಷಗಳ ನಾಯಕರಿಗೆ ಸಿಎಂ-ಡಿಸಿಎಂ ಔತಣಕೂಟ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಟ್ಟಾಗಿರುವ ವಿಪಕ್ಷಗಳ ಮಹಾಸಭೆ ನಿಮಿತ್ತ, 24 ವಿವಿಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಮತ್ತು ನಾಳೆ ನಗರದ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದೆ. ರಾಜಕೀಯ ನಾಯಕರಿಗೆ ಮೊದಲ ದಿನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದರೆ, ಎರಡನೇ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ ಆಯೋಜಿಸಿದ್ದಾರೆ.
ಇಂದಿನಿಂದ ಬೆಂಗಳೂರಲ್ಲಿ ವಿಪಕ್ಷಗಳ ಒಕ್ಕೂಟದ ಸಭೆ
ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ವಿಪಕ್ಷಗಳ ಒಕ್ಕೂಟದ ಸಭೆ ನಡೆಯಲಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, 24 ಪಕ್ಷಗಳ ನಾಯಕರು ಪಾಲ್ಗೊಳ್ಳುವರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿರುವ ವಿಪಕ್ಷಗಳ ಮೊದಲ ಸಭೆ ಬಿಹಾರದ, ಪಾಟ್ನಾದಲ್ಲಿ ನಡೆದಿತ್ತು. ಅಂದಿನ ಸಭೆಯಲ್ಲಿ 17 ಪಕ್ಷಗಳ ನಾಯಕರು ಇದ್ದರು. 2ನೇ ಸಭೆಯಲ್ಲಿ ಬಲ ಹೆಚ್ಚಿದೆ.