ಆಸ್ತಿ ಕಲಹ; ಕೊಡಲಿಯಿಂದ ತಮ್ಮನನ್ನೇ ಕೊಚ್ಚಿ ಕೊಂದ ಅಣ್ಣಂದಿರು
ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಆಸ್ತಿ ವಿವಾದಕ್ಕೆ (Property dispute) ಇಬ್ಬರು ಸಹೋದರರು ಸೇರಿ ತಮ್ಮನನ್ನೇ ಕೊಂದು (Murder Case) ಮುಗಿಸಿದ್ದಾರೆ. ಶೇಕಪ್ಪ ನವಲಗುಂದ (35) ಮೃತ ದುರ್ದೈವಿ. ಜಮೀನಿನಲ್ಲಿ ಇದ್ದ ಶೇಕಪ್ಪನನ್ನು ಅಣ್ಣಂದಿರೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Murder Case : ಆಸ್ತಿ ಕಲಹ; ಕೊಡಲಿಯಿಂದ ತಮ್ಮನನ್ನೇ ಕೊಚ್ಚಿ ಕೊಂದ ಅಣ್ಣಂದಿರು
ಹೊಸಪೇಟೆ ಬಳಿ ಆಟೋ- ಲಾರಿ ಡಿಕ್ಕಿ: ಆರಕ್ಕೂ ಅಧಿಕ ಮಂದಿ ಸಾವು
ವಿಜಯನಗರ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಆರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಎರಡು ಆಟೊಗಳು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಮೃತರು ಬಳ್ಳಾರಿಯ ಕೌಲ್ ಬಜಾರ್‌ನ ಗೌತಮ್ ನಗರದವರು ಅಂತ ಹೇಳಲಾಗುತ್ತಿದೆ. ಗಾಯಾಳುಗಳಾದ ಇಬ್ಬರು ಮಹಿಳೆಯರು ಮತ್ತು ಮಕ್ಕಳನ್ನು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಹೊಸಪೇಟೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
ನೇರಳೆ ಮಾರ್ಗದಲ್ಲಿ ಜು.2ರಂದು ಮೆಟ್ರೊ ರೈಲು ಸಂಚಾರ ಬಂದ್
ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಜುಲೈ 2ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ (Purple line) ನಿರ್ವಹಣೆ (Metro Work) ಕಾಮಗಾರಿಯನ್ನು (Maintenance wokrs) ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಬಂದ್ ಮಾಡಲಾಗುತ್ತಿದೆ.
Metro Work : ಪ್ರಯಾಣಿಕರ ಗಮನಕ್ಕೆ, ನೇರಳೆ ಮಾರ್ಗದಲ್ಲಿ ಭಾನುವಾರ ಮೆಟ್ರೊ ರೈಲು ಸಂಚಾರ ಬಂದ್!
ಬೆಂಗಳೂರಿನಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್ ಆಗಿ ಪ್ರಾಣಬಿಟ್ಟ ಕಾರ್ಮಿಕ
ಜುವೆಲ್ಲರಿ ಅಂಗಡಿಯೊಂದರಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ನಗರತ್ ಪೇಟೆ ಬೀದಿಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನು ವಿಷ್ಣು ಸಾವಂತ್ ಎಂದು ಗುರುತಿಸಲಾಗಿದೆ.
Cylinder Blast: ಬೆಂಗಳೂರಿನಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್; ಪ್ರಾಣಬಿಟ್ಟ ಕಾರ್ಮಿಕ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ: ಶೇ.41.39 ವಿದ್ಯಾರ್ಥಿಗಳು ಪಾಸ್!
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು (sslc supplementary result 2023) ಪ್ರಕಟಿಸಿದ್ದು, ಈ ಬಾರಿ ಶೇ. 41.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ. 39.59 ರಷ್ಟು ಫಲಿತಾಂಶ ಬಂದಿತ್ತು.