ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ನಡೆದ ವಿಷ ಜಲ ದುರಂತದಲ್ಲಿ ಆರನೇ ಜೀವ ಬಲಿಯಾಗಿದೆ. ತಾಯಿಯ ಹೊಟ್ಟೆಯೊಳಗಿದ್ದ ಮಗುವೇ ಪ್ರಾಣ ಕಳೆದುಕೊಂಡಿದೆ. ಇದೂ ಸೇರಿದಂತೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿ ಬೆಳವಣಿಗೆಗಳಿಗಾಗಿ (Karnataka Live News) ಇಲ್ಲಿ ಗಮನಿಸಿ.
ಬಿಬಿಎಂಪಿ ವಾರ್ಡ್ಗಳ ಸಂಖ್ಯೆ 225ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರದಲ್ಲಿ ಬಿಬಿಎಂಪಿ (BBMP Election) ವಾರ್ಡ್ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಲಾಗಿತ್ತು. ಈ ಹಿಂದದಿನ ಅಧಿಸೂಚನೆಯನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು, ವಾರ್ಡ್ಗಳ ಸಂಖ್ಯೆಯನ್ನು 225 ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
BBMP Election: ಬಿಬಿಎಂಪಿ ವಾರ್ಡ್ಗಳ ಸಂಖ್ಯೆ 225ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ
ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆಗೆ ಯತ್ನ; 3 ಮಹಿಳೆಯರು ಸೇರಿ ಹಲವರು ವಶಕ್ಕೆ
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಕಬಳಿಕೆಗೆ ಯತ್ನಿಸಿದ ಮೂವರು ಮಹಿಳೆಯರು ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗದಗಸ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದೆ. ಗದಗದ (Gadag News) ಕೇಶವ ದಾಸ್ ಸಾಹುಕಾರ್ ಕುಟುಂಬ ಸದಸ್ಯರ ಆಸ್ತಿ ಕಬಳಿಕೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ.
Gadag News: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆಗೆ ಯತ್ನ; 3 ಮಹಿಳೆಯರು ಸೇರಿ ಹಲವರು ವಶಕ್ಕೆ
ಲಾಲ್ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ
76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಿರುವ 214ನೇ ಫಲ ಪುಷ್ಪ ಪ್ರದರ್ಶನಕ್ಕೆ (Lalbagh Flower Show 2023) ಶುಕ್ರವಾರ ಸಂಜೆ ಚಾಲನೆ ದೊರೆತಿದೆ. ವಿಧಾನಸೌಧ ನಿರ್ಮಾತೃ, ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
Lalbagh Flower Show 2023: ಲಾಲ್ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ
ವಾರಾಂತ್ಯದಲ್ಲಿ ಇಲ್ಲೆಲ್ಲ ವ್ಯಾಪಕ ಮಳೆ
ವಾರಾಂತ್ಯದಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಮಳೆಯೊಂದಿಗೆ (Rain News) ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.
Weather Report : ವಾರಾಂತ್ಯದಲ್ಲಿ ಇಲ್ಲೆಲ್ಲ ವ್ಯಾಪಕ ಮಳೆ; ನಿಮ್ಮ ಊರು ಇದೆಯಾ ನೋಡಿ