Site icon Vistara News

Karnataka live news: ರಾಜ್ಯದ ಬೆಳವಣಿಗೆಗಳ ಕ್ಷಣಕ್ಷಣದ ಸುದ್ದಿಗಳು: ಸರ್ಕಾರದ ವಿರುದ್ಧ ಬಿಜೆಪಿ ಧರಣಿಗೆ ಸಜ್ಜು

Karnataka Live News Updates

ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಮಹತ್ವದ ಸುದ್ದಿ ಬೆಳವಣಿಗೆಗಳಿಗಾಗಿ (Karnataka live news) ಇಲ್ಲಿ ಗಮನಿಸಿ.

Deepa S

ಲಾರಿ ಹರಿದು ಶಾಲಾ ಶಿಕ್ಷಕಿ ಮೃತ್ಯು

ಬೆಂಗಳೂರು ಗ್ರಾಮಾಂತರದ‌ ಹೊಸಕೋಟೆ ತಾಲೂಕಿನ ದೇವನಗುಂದಿ ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಸ್ಕೂಟರ್‌ನಿಂದ ಕೆಳಗೆ ಬಿದ್ದ ಶಿಕ್ಷಕಿ ಮೇಲೆಯೇ ಲಾರಿ ಹರಿದಿದೆ. ವಾಗಟ ಗ್ರಾಮದ ಶಿಕ್ಷಕಿ ವೇದಾವತಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Road Accident : ಚಲಿಸುತ್ತಿದ್ದ ಬಸ್‌ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ; ಲಾರಿ ಹರಿದು ಶಾಲಾ ಶಿಕ್ಷಕಿ ಮೃತ್ಯು
Adarsha Anche

Murugha Seer : ಮುರುಘಾ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ

ಮುರುಘಾಮಠದ ನೂತನ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರು ಅಧಿಕಾರವಹಿಸಿಕೊಂಡಿದ್ದಾರೆ. ಹೈಕೋರ್ಟ್‌ ನಿರ್ದೇಶನದ ಮೇರೆಗೆ ಅವರು ಅಧಿಕಾರವಹಿಸಿಕೊಂಡಿದ್ದು, ಮುಂದಿನ ನಿರ್ದೇಶನದವರೆಗೆ ಕಾರ್ಯನಿರ್ವಹಣೆ ಮಾಡಲಿದ್ದಾರೆ.

Deepa S

ಮೂರು ಕಡೆ ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು

ರಾಜ್ಯದ ಮೂರು ಕಡೆ ಪ್ರತ್ಯೇಕ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಮಕೃಷ್ಣಾಪುರ ಗೇಟ್ ಬಳಿ ಪಾದಚಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮುಂಬೈ ಮೂಲದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಕ್ರಾಸ್‌ ಸಮೀಪ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟ್ಯಾಂಕರ್ ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident : ಮೂರು ಕಡೆ ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು, ಹಲವರು ಗಂಭೀರ
Adarsha Anche

Violence against women : ಸಾಗರದ ಕಾಸ್ಪಾಡಿಯಲ್ಲಿ ಸಿನಿಮಾ ನಟಿ ಮೇಲೆ ದಾಳಿ; ಮಾರಣಾಂತಿಕ ಹಲ್ಲೆ

ಕಿರುತೆರೆ ಹಾಗೂ ಚಲನಚಿತ್ರ ನಟಿಯಾಗಿರುವ ಅನು ಗೌಡ ಅವರ ಮೇಲೆ ಜಮೀನು ವಿವಾದ ಸಂಬಂಧ ಹಲ್ಲೆ ನಡೆದಿದೆ. ಸ್ಥಳೀಯರ ಜತೆಗೆ ನಡೆದ ಗಲಾಟೆಯಲ್ಲಿ ತಲೆಗೆ ಗಂಭೀರ ಏಟು ಬಿದ್ದಿದೆ.

Violence against women : ಸಾಗರದ ಕಾಸ್ಪಾಡಿಯಲ್ಲಿ ಸಿನಿಮಾ ನಟಿ ಮೇಲೆ ದಾಳಿ; ಮಾರಣಾಂತಿಕ ಹಲ್ಲೆ
Deepa S

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನೈರುತ್ಯ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಂಗಳೂರು, ಕಾರವಾರದಲ್ಲಿ ವರುಣ (Rain News) ಅಬ್ಬರಿಸುತ್ತಿದ್ದಾನೆ. ಈ ಕಾರಣದಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಿಂದ ಹೆಚ್ಚಿನ ಮಳೆಯಾಗುತ್ತಿದೆ. ಇದೇ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Rain News : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ; ಇಂದು ಶಾಲಾ-ಕಾಲೇಜುಗಳಿಗೆ ರಜೆ, 20 ಜಿಲ್ಲೆಗಳಿಗೆ ಅಲರ್ಟ್‌

Exit mobile version