Site icon Vistara News

Karnataka Live News: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

suvarna soudha
Deepa S

ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!
Deepa S

ಕಿಲ್ಲರ್‌ ಬಿಎಂಟಿಸಿಗೆ 120 ಮಂದಿ ಬಲಿ; ಇದು ಎಷ್ಟು ವರ್ಷದ ಲೆಕ್ಕ?

ಬಿಎಂಟಿಸಿ ಬೆಂಗಳೂರಿಗರ ಪ್ರಮುಖ ಸಾರ್ವಜನಿಕ ಸಾರಿಗೆ. ಬಿಎಂಟಿಸಿಗೆ ಎಷ್ಟು ಖ್ಯಾತಿ ಇದ್ದಯೋ ಅಷ್ಟೇ ಅಪಖ್ಯಾತಿಯು ಸೇರಿಕೊಂಡಿದೆ. ಚಾಲಕರ ಅತಿವೇಗ ಚಾಲನೆ, ನಿರ್ಲಕ್ಷ್ಯದಿಂದ ಅದೆಷ್ಟೋ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಲ್ಲರ್‌ ಎಂದೇ ಹೆಸರು ಪಡೆದಿರುವ ಬಿಎಂಟಿಸಿಗೆ ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ (BMTC Accident) ಕಳೆದುಕೊಂಡಿದ್ದಾರೆ.

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!
Deepa S

ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಾಗೇ ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸೂಚನೆ ಇದೆ.

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!
Deepa S

ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

ಕಲಬುರಗಿ ನಗರದ ಸಾಯಿ ಮಂದಿರ ಹತ್ತಿರದ ಅಪಾರ್ಟ್ಮೆಂಟ್ ಬಳಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ (Lawyer Murder) ಆಗಿದೆ. ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ ವಕೀಲ.

lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!
Deepa S

ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ತುಮಕೂರಲ್ಲಿ ಭೀಕರ ರಸ್ತೆ ಅಪಘಾತ (Road Accident) ನಡೆದಿದೆ. ಚಲಿಸುತ್ತಿದ್ದ ಬೈಕ್‌ನಲ್ಲಿ ಆಯತಪ್ಪಿ ಕೆಳಗೆ ಬಿದ್ದ ಸವಾರನ ಮೇಲೆ ಲಾರಿ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ದೇಹವು ಎರಡು ತುಂಡಾಗಿದೆ. ಆರ್.ಹರೀಶ್ (21) ಮೃತ ದುರ್ದೈವಿ.

Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ
Exit mobile version