Site icon Vistara News

Karnataka Live News: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮತ್ತೆ ಬಿಜೆಪಿ ಸೇರ್ಪಡೆ

vidhanasoudha and parliament

ಬೆಂಗಳೂರು: ಒಂದೆಡೆ ರಾಜ್ಯ ಕಾಂಗ್ರೆಸ್‌ ನಾಯಕರು ಪ್ರತಿಭಟನೆಗಾಗಿ ದಿಲ್ಲಿಗೆ ತೆರಳಿದ್ದರೆ, ಇನ್ನೊಂದೆಡೆ ಬೆಂಗಳೂರಿನಲ್ಲಿ ಪ್ರತಿಭಟನೆಗಾಗಿ ಬಿಜೆಪಿ ನಾಯಕರು ಒಟ್ಟಾಗುತ್ತಿದ್ದಾರೆ. ರಾಜ್ಯದ ಇಂದಿನ ಮಹತ್ವದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಸುದ್ದಿ ಬೆಳವಣಿಗೆಗಳು (Karnataka Live news) ಇಲ್ಲಿವೆ.

Harish Kera

ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಳಗ್ಗೆ ಹನ್ನೊಂದು ಗಂಟೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಶಾಸಕರು, ವಿಧಾನಪರಿಷತ್ ಸದಸ್ಯರು, ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

Harish Kera

ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕರ್ನಾಟಕ ಕಾಂಗ್ರೆಸ್‌ ನಾಯಕರ ಪ್ರತಿಭಟನೆ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಬೆಳಿಗ್ಗೆ 11ರಿಂದ ಆರಂಭವಾಗಿ ಮಧ್ಯಾಹ್ನ ಒಂದು ಗಂಟೆಗೆ ಮುಕ್ತಾಯವಾಗಲಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಮಾತ್ರ ದೆಹಲಿ ಪೊಲೀಸರು ಪ್ರತಿಭಟನೆಗೆ ಅವಕಾಶ ಕಲ್ಪಿಸಿದ್ದಾರೆ. ಪ್ರತಿಭಟನೆಯ ನಂತರ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯ ಕಾಲಾವಕಾಶ ಕೇಳಿದ್ದಾರೆ.

Exit mobile version