ಬೆಂಗಳೂರು: ಇಂದು ಡಿಕೆಶಿ ಅಧ್ಯಕ್ಷತೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಸಮ್ಮೇಳನ, ನಮ್ಮ ಮೆಟ್ರೋ ವಿಸ್ತೃತ ನೇರಳೆ ಮಾರ್ಗದ ಕಾರ್ಯಾರಂಭ ಸೇರಿದಂತೆ ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಇಲ್ಲಿ ಗಮನಿಸುತ್ತಿರಿ.
ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು; ವಾಹನ ಸಂಚಾರ ಅಸ್ತವ್ಯಸ್ತ
ಬೆಂಗಳೂರಿನಲ್ಲಿ ವಿವಿಧೆಡೆ ಸೋಮವಾರ ರಾತ್ರಿ ಭಾರಿ ಮಳೆ ಸುರಿಯಿತು. ವರುಣನ ಆರ್ಭಟದಿಂದ (Bangalore Rain) ರಸ್ತೆಗಳು ಕೆರೆಯಂತಾಗಿ ಬದಲಾಗಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ವಿವಿಧ ರಸ್ತೆಗಳು ಜಲಾವೃತವಾದ ಹಿನ್ನೆಲೆಯಲ್ಲಿ ಕೆಲಸ ಮುಗಿಸಿ ಮನೆಗಳಿಗೆ ತೆರಳುತ್ತಿದ್ದವರು ಪರದಾಡುವಂತಾಯಿತು.
Bangalore Rain: ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು; ವಾಹನ ಸಂಚಾರ ಅಸ್ತವ್ಯಸ್ತ
ನನ್ನ ಸ್ವತ್ತು, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್
‘ಬ್ರ್ಯಾಂಡ್ ಬೆಂಗಳೂರು’ ಯೋಜನೆ (Brand Bengaluru) ಅಡಿಯಲ್ಲಿ ರಾಜಧಾನಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ‘ನನ್ನ ಸ್ವತ್ತು’, ‘ಸ್ವಯಂ ಚಾಲಿತ ನಕ್ಷೆ ಅನುಮೋದನೆ’ ಹಾಗೂ ವಾರ್ಡ್ ಮಟ್ಟದಲ್ಲಿ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Brand Bengaluru: ನನ್ನ ಸ್ವತ್ತು, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್
ಇಂದು ಬೆಂಗಳೂರು-ಮೈಸೂರಲ್ಲಿ ಗುಡುಗು ಮಳೆ; ನಾಳೆ 9 ಜಿಲ್ಲೆಗಳಿಗೆ ಅಲರ್ಟ್
ದಕ್ಷಿಣ ಒಳನಾಡಲ್ಲಿ ಇನ್ನು ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ. ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Karnataka Weather Forecast) ನೀಡಿದೆ
https://vistaranews.com/weather/karnataka-weather-thunderstorms-lash-bengaluru-mysuru-yellow-alert-issued-for-9-districts-from-tomorrow/476377.html
ದಸರಾ ನಂತರ ಸೀಟು ಹಂಚಿಕೆಯ ಚರ್ಚೆಯಾಗಲಿದೆ: ಎಚ್.ಡಿ.ದೇವೇಗೌಡ
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ (BJP-JDS alliance) ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಬೇಕಿದೆ. ದಸರಾ ಬಳಿಕ ಅದರ ಬಗ್ಗೆ ಮಾತುಕತೆಯಾಗಲಿದೆ. ಅಧಿವೇಶನದ ಬಳಿಕ ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಅಮಿತ್ ಶಾ ಅವರ ಜತೆ ಚರ್ಚೆ ನಡೆಸಲಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
BJP-JDS alliance: ದಸರಾ ನಂತರ ಸೀಟು ಹಂಚಿಕೆಯ ಚರ್ಚೆಯಾಗಲಿದೆ: ಎಚ್.ಡಿ.ದೇವೇಗೌಡ