Site icon Vistara News

Karnataka live news: Heart Attack: ಖ್ಯಾತ ವಿಜ್ಞಾನಿ ಕಸ್ತೂರಿರಂಗನ್‌ಗೆ ಹೃದಯಾಘಾತ; ಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್‌

Kasturirangan

ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಒಂಬತ್ತು ವರ್ಷಗಳ ಕಾಲ ಇಸ್ರೋ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿರಂಗನ್‌ ಅವರಿಗೆ ಹೃದಯಾಘಾತವಾಗಿದೆ. ಪ್ರಸಕ್ತ ಅವರು ಶ್ರೀಲಂಕಾದಲ್ಲಿದ್ದು, ಅಲ್ಲಿಂದ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ. ರಾಜ್ಯದ ಮಹತ್ವದ ಕ್ಷಣಕ್ಷಣದ ಸುದ್ದಿ ಬೆಳವಣಿಗೆಗಳನ್ನು (Karnataka live news) ತಿಳಿಯಲು ಈ ಲಿಂಕ್‌ ಫಾಲೋ ಮಾಡಿ.

Adarsha Anche

Jain muni Murder : ಜೈನಮುನಿ ಕೊಲೆ ಪ್ರಕರಣ ಸಿಬಿಐಗೆ ವಹಿಸಲ್ಲ: ಡಾ. ಜಿ. ಪರಮೇಶ್ವರ

ಹಿರೇಕೋಡಿ ಗ್ರಾಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ. ರಾಜ್ಯ ಪೊಲೀಸರು ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಖಡಕ್‌ ಉತ್ತರ ನೀಡಿದ್ದಾರೆ. ಈ ಕೊಲೆ ಬಗ್ಗೆ ಬಿಜೆಪಿಯವರು ಅನುಮಾನ ವ್ಯಕ್ತಪಡಿಸುವುದು ಬೇಡ, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Jain muni Murder : ಜೈನಮುನಿ ಕೊಲೆ ಪ್ರಕರಣ ಸಿಬಿಐಗೆ ವಹಿಸಲ್ಲ: ಡಾ. ಜಿ. ಪರಮೇಶ್ವರ
Krishna Bhat

ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಒಂಬತ್ತು ವರ್ಷಗಳ ಕಾಲ ಇಸ್ರೋ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿರಂಗನ್‌ ಅವರಿಗೆ ಹೃದಯಾಘಾತವಾಗಿದೆ. ಪ್ರಸಕ್ತ ಅವರು ಶ್ರೀಲಂಕಾದಲ್ಲಿದ್ದು, ಅಲ್ಲಿಂದ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ.

82 ವರ್ಷದ ಕಸ್ತೂರಿರಂಗನ್‌ ಅವರು ಅಧ್ಯಯನ ಸಂಬಂಧ ಶ್ರೀಲಂಕಾ ಪ್ರವಾಸದಲ್ಲಿದ್ದು, ಅಲ್ಲಿ ಹೃದಯಾಘಾತ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರಸಕ್ತ ಅವರಿಗೆ ಅಲ್ಲಿನ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊಲಂಬೋದಿಂದ ಹೊರಟಿರುವ ವಿಶೇಷ ವಿಮಾನ ಸಂಜೆ 5.30ರ ಹೊತ್ತಿಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಅಲ್ಲಿಂದ ಅವರನ್ನು ಬೆಂಗಳೂರಿನ ಪ್ರಮುಖ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿದೆ. ಕಸ್ತೂರಿರಂಗನ್‌ ಅವರು ಪಶ್ಚಿಮ ಘಟ್ಟ ಅಧ್ಯಯನ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಅಧ್ಯಕ್ಷರಾಗಿ ವರದಿ ಸಲ್ಲಿಸಿ ಗಮನ ಸೆಳೆದಿದ್ದಾರೆ.

Deepa S

ನಾಳೆ ಬೆಂಗಳೂರು ವಿವಿ ಬಂದ್‌

ಬೆಂಗಳೂರು ವಿಶ್ವವಿದ್ಯಾಲಯ (Bangalore University) ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ವಿವಿ ಬಂದ್‌ಗೆ (Student Strike) ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಕರೆ ನೀಡಿದೆ. ಹೀಗಾಗಿ ಜು.11ರಂದು ಬೆಂಗಳೂರು ವಿಶ್ವವಿದ್ಯಾಲಯವು ಸಂಪೂರ್ಣ ಸ್ತಬ್ಧ ಆಗುವ ಸಾಧ್ಯತೆ ಇದೆ.

Bangalore University : ನಾಳೆ ಬೆಂಗಳೂರು ವಿವಿ ಬಂದ್‌! ತರಗತಿ ಬಾಯ್ಕಾಟ್‌
Deepa S

ಕಟ್ಟಡ ಕಾಮಗಾರಿಯಲ್ಲಿ ಜಿಲೆಟಿನ್‌ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

ಕಟ್ಟಡ ಕಾಮಗಾರಿ (Construction work) ವೇಳೆ ಜಿಲೆಟಿನ್ ಸ್ಫೋಟಗೊಂಡು (gelatin sticks blast) ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 7ರ ರಾತ್ರಿ 11:30ರ ಸುಮಾರಿಗೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಮೂವರು ಕೂಲಿ ಕಾರ್ಮಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಶ್ರೀನಿವಾಸ್, ಮಣಿಕಂಠ, ಶಶಿಕುಮಾರ್ ಎಂಬುವವರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Gelatin Sticks : ಕಟ್ಟಡ ಕಾಮಗಾರಿಯಲ್ಲಿ ಜಿಲೆಟಿನ್‌ ಸ್ಫೋಟ; ಮೂವರು ಕಾರ್ಮಿಕರು ಗಂಭೀರ
Krishna Bhat

Murder Case: ಪುನೀತ್‌ ಫೋಟೊ ವಿವಾದವೇ ಯುವ ಬ್ರಿಗೇಡ್‌ ಕಾರ್ಯಕರ್ತನ ಕೊಲೆಗೆ ಕಾರಣ?

ಮೈಸೂರು: ತಿ. ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ಅವರ ಕೊಲೆಗೆ ಹನುಮಜಯಂತಿ ದಿನ ನಡೆದ ಫೋಟೊ ವಿವಾದವೇ ಕಾರಣವಾಯ್ತಾ? ಹೀಗೊಂದು ಪ್ರಶ್ನೆ ಈಗ ಎದ್ದುನಿಂತಿದೆ. ಇತ್ತೀಚೆಗೆ ನಡೆದ ಹನುಮ ಜಯಂತಿ ಸಂದರ್ಭದಲ್ಲಿ ದೇವಸ್ಥಾನದ ಬಳಿ ಬೈಕ್‌ ನಿಲ್ಲಿಸುವ ವಿವಾದ ಕೊಲೆಗೆ ಕಾರಣ ಎಂದು ಒಂದು ಕಡೆ ಹೇಳಲಾಗುತ್ತಿದ್ದರೆ, ಇನ್ನೊಂದು ಕಡೆ ಮೃತ ವೇಣುಗೋಪಾಲ್‌ ಅವರ ಪತ್ನಿಯ ಪ್ರಕಾರ ಹನುಮ ಜಯಂತಿ ದಿನ ಮೆರವಣಿಗೆ ವೇಳೆ ಪುನೀತ್‌ ರಾಜ್‌ ಕುಮಾರ್‌ ಫೋಟೊ ಇಡುವುದು ಬೇಡ ಎಂದು ಹೇಳಿದ್ದೇ ವಿವಾದದ ಮೂಲ. ಇದೀಗ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತಿ. ನರಸೀಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

Exit mobile version