ಬೆಂಗಳೂರು: ರಾಜಧಾನಿಯ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಬೆಂಕಿ ಆಕಸ್ಮಿಕದ ಹಿನ್ನೆಲೆಯಲ್ಲಿ ದುಷ್ಕೃತ್ಯದ ಶಂಕೆ ಮೂಡಿದ್ದು, ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂದಿನ ಇನ್ನಷ್ಟು ಮಹತ್ವದ ಸುದ್ದಿ ಬೆಳವಣಿಗೆಗಳನ್ನು (Karnataka live news) ಇಲ್ಲಿಯೇ ಓದಿ.
ಬಿಬಿಎಂಪಿಯಲ್ಲಿ ಕಡತ ನಾಶಕ್ಕಾಗಿ ಬೆಂಕಿ?
ಬೆಂಗಳೂರು: ಕಾಮಗಾರಿಗಳ ಗುಣಮಟ್ಟ ಪರಿಶೀಲನೆ ನಡೆಯುವ ಕಾರಣ ಬಿಬಿಎಂಪಿ ಪ್ರಯೋಗಾಲಯಕ್ಕೆ ಬೆಂಕಿ ಹಚ್ಚಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.