ಬೆಂಗಳೂರು: ರಾಜಧಾನಿಯ 6 ಕಡೆ ಎನ್‌ಐಎ ದಾಳಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರತಿಭಟನೆಗಳ ನಡುವೆ ಅಧಿವೇಶನ ಮುಂದುವರಿಕೆ ಸೇರಿದಂತೆ ರಾಜ್ಯದ ಇಂದಿನ ಮಹತ್ವದ ಸುದ್ದಿಗಳನ್ನು (Karnataka Live News) ಇಲ್ಲಿ ಗಮನಿಸಿ.
BJP Protest: 25 ದಿನದಲ್ಲಿ ರೈತರ ಸಾಲ ಮನ್ನಾ ಮಾಡಿ; ರಾಜ್ಯ ಸರ್ಕಾರಕ್ಕೆ ಬಿಎಸ್‌ವೈ ಗಡುವು
ಬರ ನಿರ್ವಹಣೆ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ಬುಧವಾರ ಸಂಜೆ ಬೃಹತ್ ಪ್ರತಿಭಟನೆ (BJP Protest) ನಡೆಸಲಾಯಿತು. ರಾಜ್ಯದಲ್ಲಿ ತೀವ್ರ ಬರಗಾಲದಿಂದ (Drought Situation) ಸಂಕಷ್ಟದಲ್ಲಿರುವ ರೈತರ ಮೇಲೆ ಈ ಸರ್ಕಾರ ಬರೆ ಎಳೆಯುತ್ತಿದೆ, ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದರು.
http://vistaranews.com/karnataka/the-state-government-should-waive-off-farmers-loans-within-25-days-says-bs-yediyurappa/532026.html
ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನ, ಗಲಾಟೆ
ಸಂಸತ್‌ನಲ್ಲಿ ಭದ್ರತಾ ಲೋಪಕ್ಕೆ (Security Breach in Loksabha) ಕಾರಣವಾದ ಸಂಸದ ಪ್ರತಾಪ್ ಸಿಂಹ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರದ ಸಂಸದರ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಈ ವೇಳೆ ಮೈಸೂರು-ಹುಣಸೂರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
http://vistaranews.com/karnataka/congress-workers-attempt-to-gherao-pratap-simhas-office-in-mysore/531990.html
ಬೆಂಗಳೂರಿಗೆ ಕಾಲಿಟ್ಟ ಮಕ್ಕಳ ಕದಿಯೋ ಬಿಹಾರಿ ಗ್ಯಾಂಗ್; ಇಬ್ಬರ ರಕ್ಷಣೆ
ಪುಟ್ಟ ಮಕ್ಕಳನ್ನು ಒಬ್ಬಂಟಿಯಾಗಿ ಬಿಡುವ ಪೋಷಕರು ಎಚ್ಚರ ವಹಿಸಬೇಕಾಗಿದೆ. ಏಕೆಂದರೆ, ರಾಜಧಾನಿಗೆ ಮಕ್ಕಳ ಕದಿಯೋ ಬಿಹಾರಿ ಗ್ಯಾಂಗ್ ಕಾಲಿಟ್ಟಿದೆ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆನ್ನಲ್ಲೇ ಮಕ್ಕಳ ಕಳ್ಳತನ ಪ್ರಕರಣ (Child Theft) ಬೆಳಕಿಗೆ ಬಂದಿದೆ. ಇಬ್ಬರು ಮಕ್ಕಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ಬಿಹಾರಿ ಗ್ಯಾಂಗ್ ಸಿಕ್ಕಿಬಿದ್ದಿದ್ದು, ಅಪಾಯದಿಂದ ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ.
Child Theft: ಬೆಂಗಳೂರಿಗೆ ಕಾಲಿಟ್ಟ ಮಕ್ಕಳ ಕದಿಯೋ ಬಿಹಾರಿ ಗ್ಯಾಂಗ್; ಇಬ್ಬರ ರಕ್ಷಣೆ
ಸಂಸತ್‌ಗೆ ನುಗ್ಗಿದ ದುಷ್ಕರ್ಮಿಗಳು; ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸಂಸತ್ ಭವನದ ಮೇಲೆ ನಡೆದಿರುವ ದಾಳಿ (Security Breach in Lok Sabha) ತೀವ್ರ ಕಳವಳಕಾರಿ ಸಂಗತಿಯಾಗಿದೆ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದರಿಂದ ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ.
Security Breach in Lok Sabha: ಸಂಸತ್‌ಗೆ ನುಗ್ಗಿದ ದುಷ್ಕರ್ಮಿಗಳು; ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಪೆಟ್ರೋಲ್, ಡಿಸೇಲ್ ಇನ್ನಷ್ಟು ತುಟ್ಟಿ ?
ಬೆಳಗಾವಿ: ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ರಾಜ್ಯ ಸರ್ಕಾರ ಹಾಕುವ ತೆರಿಗೆ ಏರಿಕೆ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾವನೆ ಇಟ್ಟಿದ್ದಾರೆ. ಏರಿಕೆ ಮಾಡಿ ಬಂದ ತೆರಿಗೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್, ಗ್ಯಾಸ್ ಬಂಕ್ ಹಾಗೂ ಲಾರಿ ಬಸ್ ಮತ್ತು ಲಾರಿ ಕ್ಲಿನಿಂಗ್ ಮಾಡುವ ಅಸಂಘಟಿತ ಕಾರ್ಮಿಕರ ಯೋಗಕ್ಷೇಮಕ್ಕೆ ಬಳಸಬೇಕು ಎಂದಿದ್ದು, ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.