Site icon Vistara News

Karnataka live news: CWRC ಆದೇಶಕ್ಕೆ ಧಿಕ್ಕಾರ, ತಮಿಳುನಾಡಿಗೆ ನೀರು ಬಿಡದಿರಲು ನಿರ್ಧಾರ; ಸರ್ವ ಪಕ್ಷ ಸಭೆ ತೀರ್ಮಾನ

Cauvery protest

ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಮಿತಿ (CWRC) ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್‌ ನೀರು ಬಿಡಲು ಕರ್ನಾಟಕಕ್ಕೆ ನೀಡಿರುವ ಆದೇಶ (cauvery dispute)ವನ್ನು ಧಿಕ್ಕರಿಸಲು ರಾಜ್ಯ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಈ ತೀರ್ಮಾನಕ್ಕೆ ಬಂದಿದ್ದು, CWRC ತೀರ್ಮಾನವನ್ನು ಆರಂಭದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಮತ್ತು ಮುಂದೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ತಿಳಿಯಲು ಇಲ್ಲಿ ಗಮನಿಸಿ.

Prabhakar R

ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಬಸ್‌ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ಎರಡು ಪ್ರತ್ಯೇಕ ಘಟನೆಗಳಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡು, ಇಬ್ಬರು ಸವಾರರು ಮೃತಪಟ್ಟಿರುವುರು (Crime News) ಬುಧವಾರ ನಡೆದಿದೆ. ರಾಮನಗರದ ರಾಮದೇವರ ಬೆಟ್ಟದ ಮೇಲಿಂದ ಹಾರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದಾಗ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮತ್ತೊಂದೆಡೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಬೈಕ್‌ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Crime News: ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಬಸ್‌ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

Prabhakar R

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Terracotta Figurines : ದಕ್ಷಿಣ ಕನ್ನಡದಲ್ಲಿ ಸಿಕ್ಕಿವೆ ಕ್ರಿ.ಪೂ 700ರ ಟೆರಾಕೋಟಾ ಪುಟ್ಟ ಬೊಂಬೆಗಳು!
Prabhakar R

ಕೇರಳದಲ್ಲಿ ನಿಫಾ ವೈರಸ್ ಆತಂಕ; ಚಾಮರಾಜನಗರ ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್

ಕೇರಳದಲ್ಲಿ ನಿಫಾ ವೈರಸ್‌ ಸೋಂಕಿಗೆ ಇಬ್ಬರು ಮೃತಪಟ್ಟಿರುವುದರಿಂದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಸೆ.14ರಿಂದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮನೆಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

Nipah Virus: ಕೇರಳದಲ್ಲಿ ನಿಫಾ ವೈರಸ್ ಆತಂಕ; ಚಾಮರಾಜನಗರ ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್
Exit mobile version