Site icon Vistara News

Karnataka live news: ಜಾತಿನಿಂದನೆ ಪ್ರಕರಣ; ಉಪೇಂದ್ರಗೆ ಹೈಕೋರ್ಟ್‌ ಬಿಗ್‌ ರಿಲೀಫ್, FIRಗೆ ತಡೆ

Upendra High court

ಬೆಂಗಳೂರು: ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪ ಎದುರಿಸುತ್ತಿರುವ ಚಿತ್ರ ನಟ ಉಪೇಂದ್ರ ಅವರ ವಿರುದ್ಧ ಸಲ್ಲಿಕೆಯಾಗಿರುವ ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ತಡೆ ನೀಡಿದೆ. ಈ ಮೂಲಕ ಅದು ಚಿತ್ರ ನಟನಿಗೆ ಬಿಗ್‌ ರಿಲೀಫ್‌ ನೀಡಿದೆ. ಇದರೊಂದಿಗೆ ಇಂದಿನ ಇನ್ನಷ್ಟು ಮಹತ್ವದ ಸುದ್ದಿ ಬೆಳವಣಿಗೆಗಳನ್ನು (Karnataka live news) ತಿಳಿಯಲು ಇಲ್ಲಿ ಗಮನಿಸಿ.

Prabhakar R

ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ; ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿಯಿತೇ ರಾಜ್ಯ ಸರ್ಕಾರ?

ತನ್ನ ಪಾಲಿನ ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ, ಸುಪ್ರೀ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದಿಂದ (KRS Dam) ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಮಿಳುನಾಡು ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ.

KRS Dam: ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ; ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿಯಿತೇ ರಾಜ್ಯ ಸರ್ಕಾರ?

Prabhakar R

ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್‌ ಪದಕ, 18 ಮಂದಿಗೆ ಶ್ಲಾಘನೀಯ ಸೇವಾ ಪದಕ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದಿಂದ ಪೊಲೀಸ್‌ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು, ಸಿಬ್ಬಂದಿಗೆ ಪೊಲೀಸ್‌ ಪದಕಗಳನ್ನು ಘೋಷಿಸಲಾಗಿದೆ. ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಲಭಿಸಿದ್ದು, 18 ಪೊಲೀಸ್‌ ಅಧಿಕಾರಿಗಳಿಗೆ ಶ್ಲಾಘನೀಯ ಸೇವೆಗಾಗಿ ಪೊಲೀಸ್‌ ಪದಕ ದೊರೆತಿದೆ. ಆ.15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ.

Police Medal: ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್‌ ಪದಕ, 18 ಮಂದಿಗೆ ಶ್ಲಾಘನೀಯ ಸೇವಾ ಪದಕ

Deepa S

ಆ.15ರಂದು ಬೆಂಗಳೂರು, ಮೈಸೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ

ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ.

Weather report : ಆ.15ರಂದು ಬೆಂಗಳೂರು, ಮೈಸೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ
Krishna Bhat

Actor Upendra : ಜಾತಿನಿಂದನೆ ಪ್ರಕರಣ; ಹೈಕೋರ್ಟ್‌ ಮೆಟ್ಟಿಲೇರಿದ ನಟ ಉಪೇಂದ್ರ, FIR ರದ್ದತಿಗೆ ಮನವಿ
Deepa S

ಶ್ವಾನಗಳ ಕೈಕಾಲು ಕಟ್ಟಿಹಾಕಿ ವಿಷ ಪ್ರಾಶನ!

ಬೆಂಗಳೂರಿನ ಆರ್‌ಆರ್‌ನಗರ ಹಾಗೂ ಹೊಸಕೆರೆಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ (Bengaluru News) ನಡೆದಿದೆ. ಕೆಲ ಕಿಡಿಗೇಡಿಗಳು ನಾಯಿಗಳಿಗೆ ವಿಷ ಪ್ರಾಶನ (Poisoning of dogs) ಮಾಡಿ ಹತ್ಯೆ ಮಾಡಿದ್ದಾರೆ.

Bengaluru News : ಶ್ವಾನಗಳ ಕೈಕಾಲು ಕಟ್ಟಿಹಾಕಿ ವಿಷ ಪ್ರಾಶನ!
Exit mobile version