ಬೆಂಗಳೂರು: ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡು 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ನವ ದೆಹಲಿಯಲ್ಲಿ ಎನ್‌ಐಎ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, ಈತ ಹಲವು ಪ್ರಕರಣಗಳಲ್ಲಿ ಬೇಕಿದ್ದಾನೆ. ವಿಚಾರಣೆ ಮೂಲಕ ಈತನಿಂದ ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಇಲ್ಲಿ ಗಮನಿಸಿ.
ISIS Terrorist : ದೆಹಲಿಯಲ್ಲಿ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಅರಾಫತ್ ಅಲಿ ಸೆರೆ
ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡು 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ನವ ದೆಹಲಿಯಲ್ಲಿ ಎನ್‌ಐಎ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, ಈತ ಹಲವು ಪ್ರಕರಣಗಳಲ್ಲಿ ಬೇಕಿದ್ದಾನೆ. ವಿಚಾರಣೆ ಮೂಲಕ ಈತನಿಂದ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.
http://vistaranews.com/crime/shimoga-based-isis-terrorist-arafat-ali-arrested-in-delhi/454552.html
ನಾಳೆ ಕರಾವಳಿ, ಮಲೆನಾಡಲ್ಲಿ ವ್ಯಾಪಕ ಮಳೆ; ಬೆಂಗಳೂರಲ್ಲಿ ಹೇಗಿರಲಿದೆ ಗೊತ್ತಾ?
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ (Rain News) ಮಳೆಯಾಗಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ (Weather report) ಇದೆ.
Weather report : ನಾಳೆ ಕರಾವಳಿ, ಮಲೆನಾಡಲ್ಲಿ ವ್ಯಾಪಕ ಮಳೆ; ಬೆಂಗಳೂರಲ್ಲಿ ಹೇಗಿರಲಿದೆ ಗೊತ್ತಾ?
ಮಳೆಗಾಗಿ ಹೂತಿರುವ ಶವವನ್ನೇ ಹೊರತೆಗೆದ ಗ್ರಾಮಸ್ಥರು!
ಮಳೆಯಾಗದ ಹಿನ್ನೆಲೆಯಲ್ಲಿ ಮಣ್ಣಲ್ಲಿ ಹೂತಿರುವ ಶವವನ್ನು ಹೊರತೆಗೆದು ಸುಟ್ಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ದನಕನದೊಡ್ಡಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Rain News : ಮಳೆಗಾಗಿ ಹೂತಿರುವ ಶವವನ್ನೇ ಹೊರತೆಗೆದ ಗ್ರಾಮಸ್ಥರು!