Grihalakshmi Scheme: ಜುಲೈ 17 ಅಥವಾ 19ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರಿಂದ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಚಾಲನೆ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ಜುಲೈ 17ರಂದು ಅಥವಾ 19ರಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಂದ ಉದ್ಘಾಟಿಸಲು ಸರ್ಕಾರ ನಿರ್ಧರಿಸಿದೆ. ಕುಟುಂಬದ ಮುಖ್ಯಸ್ಥೆಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಿಕೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೆ ತಿಳಿಸಿದಂತೆ ಆಗಸ್ಟ್ 16ಅಥವಾ 17ರಿಂದ ಖಾತೆಗೆ ಹಣ ಸಂದಾಯ ಮಾಡಲು ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಚಾಲನೆ ಜುಲೈ 19ರಿಂದ
ಬೆಂಗಳೂರು: ಜುಲೈ 19ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ 4 ದಿನ ಮಳೆ ಅಬ್ಬರ
ಕರ್ನಾಟಕ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು (Southwest monsoon) ಚುರುಕುಗೊಂಡಿದೆ. ಹೀಗಾಗಿ ಜು.15ರಿಂದ 18ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರ್ನಾಟಕ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Weather report : 4 ದಿನ ಮಳೆ ಅಬ್ಬರ; ದಕ್ಷಿಣ ಒಳನಾಡಿನಲ್ಲಿ ಚಕ್ಕರ್, ಕರಾವಳಿಯಲ್ಲಿ ಹಾಜರ್
Central Bank Recruitment 2023 : 1000 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
ನವ ದೆಹಲಿ: ದೇಶದ ಮೊದಲ ವಾಣಿಜ್ಯ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಒಂದು ಸಾವಿರ ಮ್ಯಾನೇಜರ್‌ಗಳ ನೇಮಕಕ್ಕೆ (Central Bank Recruitment 2023) ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು (ಜುಲೈ15) ಕೊನೆಯ ದಿನವಾಗಿದೆ.
ಗೃಹಲಕ್ಷ್ಮೀ ಯೋಜನೆ ಚಾಲನೆಗೆ ದಿನಾಂಕ ಘೋಷಣೆ?
ಬೆಂಗಳೂರು: ಇಂದು ವಿಧಾನ ಸೌಧದಲ್ಲಿ ಹನ್ನೊಂದು ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ಕರೆದಿದ್ದು, ಗೃಹಲಕ್ಷ್ಮಿ ಯೋಜನೆಯ ದಿನಾಂಕ ಫಿಕ್ಸ್ ಮಾಡುವ ಸಂಭವ ಇದೆ.