Site icon Vistara News

Karnataka live news: ಹುಬ್ಬಳ್ಳಿ ಈದ್ಗಾ ಗಣೇಶೋತ್ಸವಕ್ಕೆ ಪಾಲಿಕೆ ಅನುಮತಿ; ಪ್ರತಿಭಟನೆ ಕೈಬಿಟ್ಟ ಬಿಜೆಪಿ

hubballi Ganeshotsava

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮುಂದಿನ ಐದು ವರ್ಷಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಮಹಾನಗರಪಾಲಿಕೆಯಲ್ಲಿ ಠರಾವು ಮಾಡಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ತಿರಸ್ಕರಿಸಿತ್ತು. ಈ ಮೂಲಕ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದಂತಾಗಿತ್ತು. ಇದೀಗ ಬಿಜೆಪಿ ಪ್ರತಿಭಟನೆ ನಡೆಸಿದ್ದರಿಂದ ಹುಬ್ಬಳ್ಳಿ ಪಾಲಿಕೆಯ ಆಯುಕ್ತರು ಕೂಡ ಅನುಮತಿ ನೀಡಿರುವುದು ಕಂಡುಬಂದಿದೆ.

Prabhakar R

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಾಲಿಕೆ ಅನುಮತಿ; ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. 18 ಷರತ್ತುಗಳನ್ನು ವಿಧಿಸಿ ಗಣೇಶ ಪ್ರತಿಷ್ಠಾಪನೆಗೆ (Ganesh Chaturthi) ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು ಅನುಮತಿ ನೀಡಿದ್ದಾರೆ. ಹೈಕೋರ್ಟ್‌ ಹಸಿರು ನಿಶಾನೆ ತೋರಿದರೂ ಪಾಲಿಕೆ ಅನುಮತಿ ನೀಡದ ಕಾರಣ ಬಿಜೆಪಿಯು ಪ್ರತಿಭಟನೆ ನಡೆಸುತ್ತಿತ್ತು. ಇದೀಗ ಪಾಲಿಕೆಯಿಂದ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೋರಾಟ ಕೈಬಿಟ್ಟಿದ್ದಾರೆ.

Ganesh Chaturthi: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಾಲಿಕೆ ಅನುಮತಿ; ಪ್ರತಿಭಟನೆ ಕೈಬಿಟ್ಟ ಬಿಜೆಪಿ
Krishna Bhat

Hubballi Ganeshotsava : ಹುಬ್ಬಳ್ಳಿ ಈದ್ಗಾ ಗಣೇಶೋತ್ಸವಕ್ಕೆ ಹೈಕೋರ್ಟ್‌ ಗ್ರೀನ್‌ಸಿಗ್ನಲ್‌; ಇನ್ನೂ ಅನುಮತಿ ಕೊಡದ ಪಾಲಿಕೆ
Prabhakar R

HSRP Number Plate: ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ಕಡ್ಡಾಯ; ಅಳವಡಿಸದಿದ್ರೆ ಭಾರಿ ದಂಡ!

ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಅವಕಾಶವಿದೆ. ಹೀಗಾಗಿ ಗಡುವಿನೊಳಗೆ ವಾಹನ ಮಾಲೀಕರು ಹೊಸ ಮಾದರಿಯ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಬೇಕು, ಇಲ್ಲದಿದ್ದರೆ 500ರಿಂದ 1000 ರೂ. ದಂಡ ಕಟ್ಟಬೇಕಾಗುತ್ತದೆ.

HSRP Number Plate: ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ಪಡೆಯೋದು ಹೇಗೆ? ಅಳವಡಿಸದಿದ್ರೆ ಭಾರಿ ದಂಡ!

Deepa S

ಕೊಡಗು, ಚಿಕ್ಕಮಗಳೂರು ಸೇರಿ ಕರಾವಳಿಯಲ್ಲಿ ಜೋರು ಮಳೆ

ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದರೆ, ಮಲೆನಾಡು ಹಾಗೂ ಒಳನಾಡಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ (Weather report) ಮಳೆಯಾಗಲಿದೆ.

Weather Report : ಕೊಡಗು, ಚಿಕ್ಕಮಗಳೂರು ಸೇರಿ ಕರಾವಳಿಯಲ್ಲಿ ಜೋರು ಮಳೆ
Deepa S

ಅಮಾವಾಸ್ಯೆಯಂದು ಮಾಟ ಮಂತ್ರ; ತಲೆಬುರಡೆ, ನಿಂಬೆ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

ಮಾಂತ್ರಿಕ ಶಕ್ತಿಯನ್ನು (Black Magic) ಉಪಯೋಗಿಸಿಕೊಂಡು ಜನರನ್ನು ಹಿಂಸಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಸದ್ಯ ಬೆಳಗಾವಿಯಲ್ಲಿ ರಾತೋರಾತ್ರಿ ಮನೆಯ ಮುಂದೆ ಕಿಡಿಗೇಡಿಗಳು ಮಾಟಮಂತ್ರ ಮಾಡಿರುವ ಘಟನೆ ನಡೆದಿದೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಭಯಾನಕ ರೀತಿಯಲ್ಲಿ ವಾಮಾಚಾರ ಮಾಡಲಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಘಟನೆ ನಡೆದಿದೆ.

Black Magic : ಅಮಾವಾಸ್ಯೆಯಂದು ಮಾಟ ಮಂತ್ರ; ತಲೆಬುರಡೆ, ನಿಂಬೆ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!
Exit mobile version