ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮುಂದಿನ ಐದು ವರ್ಷಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಮಹಾನಗರಪಾಲಿಕೆಯಲ್ಲಿ ಠರಾವು ಮಾಡಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ತಿರಸ್ಕರಿಸಿತ್ತು. ಈ ಮೂಲಕ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದಂತಾಗಿತ್ತು. ಇದೀಗ ಬಿಜೆಪಿ ಪ್ರತಿಭಟನೆ ನಡೆಸಿದ್ದರಿಂದ ಹುಬ್ಬಳ್ಳಿ ಪಾಲಿಕೆಯ ಆಯುಕ್ತರು ಕೂಡ ಅನುಮತಿ ನೀಡಿರುವುದು ಕಂಡುಬಂದಿದೆ.
ಬಸ್‌ಗಳ ಮಧ್ಯೆ ಸಿಲುಕಿ ಮಹಿಳೆಯರಿಬ್ಬರು ದಾರುಣ ಸಾವು!
ಕೆಎಸ್ಆರ್‌ಟಿಸಿ ಬಸ್ (Ksrtc bus) ನಿಲ್ದಾಣದಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಎರಡು ಬಸ್‌ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು (Road Accident) ಮೃತಪಟ್ಟಿದ್ದಾರೆ. ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60), ಪಂಕಜ (50) ಮೃತ ದುರ್ದೈವಿಗಳು.
Road Accident : ಬಸ್‌ಗಳ ಮಧ್ಯೆ ಸಿಲುಕಿ ಮಹಿಳೆಯರಿಬ್ಬರ ದಾರುಣ ಸಾವು!
ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ
ಕುಕ್ಕರ್ ಬಾಂಬ್ ಸ್ಫೋಟದ (ಮಂಗಳೂರು ಸ್ಫೋಟ) ರೂವಾರಿ ಶಾರಿಕ್‌ನ ಟಾರ್ಗೆಟ್ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನವೇ ಆಗಿತ್ತು ಎಂದು ಎನ್ಐಎ ಅಧಿಕೃತ (Cooker blast in Mangalore) ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್, ಮಂಗಳೂರು ಗೋಡೆ ಬರಹದ ಮಾಸ್ಟರ್ ಮೈಂಡ್ ಆಗಿರುವ ಅರಾಫತ್ ಅಲಿ ಬಂಧನ ಬೆನ್ನಲ್ಲೇ ಅಧಿಕೃತ ಹೇಳಿಕೆ ಪ್ರಕಟಿಸಿದೆ.
ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ
ಚೈತ್ರ ಕುಂದಾಪುರ ಫಿಟ್ಸ್‌ನಿಂದ ಅಸ್ವಸ್ಥ
ಬೆಂಗಳೂರು: ವಂಚನೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಚೈತ್ರ ಕುಂದಾಪುರ ಇಂದು ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಈ ಮೊದಲು ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಸುದ್ದಿಯಾಗಿತ್ತು. ನಂತರ, ಫಿಟ್ಸ್‌ನಿಂದ ಮೂರ್ಛೆ ಹೋಗಿದ್ದಾಳೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಆಪ್ತರ ಜತೆ ಸಿಎಂ ಸಮಾಲೋಚನೆ
ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಜೊತೆಗೆ ಸಿಎಂ ಸಿದ್ದರಾಮಯ್ಯ ನಿನ್ನೆ ರಾತ್ರಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೂ ಭೇಟಿ ನೀಡಿದ್ದರು. ಬಿ.ಕೆ ಹರಿಪ್ರಸಾದ್ ಅಸಮಾಧಾನದ ಬೆನ್ನಲ್ಲೇ ಆಪ್ತರ ಜೊತೆ ಸಿಎಂ ಮಾತುಕತೆ ಕುತೂಹಲ ಮೂಡಿಸಿದ್ದು, ಬಿಕೆಗೆ ಟಕ್ಕರ್ ನೀಡಲು ಮಾಸ್ಟರ್ ಪ್ಲ್ಯಾನ್ ನಡೆದಿದೆಯಾ ಎಂಬ ಅನುಮಾನ ಮೂಡಿದೆ.
ಬೆಂಗಳೂರು ಸೇರಿ ಕರಾವಳಿ, ಮಲೆನಾಡಲ್ಲಿ ಸುರಿಯಲಿದೆ ಮಳೆ
ಬೆಂಗಳೂರಲ್ಲಿ ಅಲ್ಲಲ್ಲಿ ಮಳೆಯ ಸಿಂಚನವಾದರೆ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Weather report) ಸಾಧ್ಯತೆ ಇದೆ.
Weather report : ಬೆಂಗಳೂರು ಸೇರಿ ಕರಾವಳಿ, ಮಲೆನಾಡಲ್ಲಿ ಸುರಿಯಲಿದೆ ಮಳೆ