Site icon Vistara News

Karnataka Live News: ಬಿಜೆಪಿ ಅವಧಿಯ ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ರದ್ದು ಮಾಡಿದ ಸರ್ಕಾರ

cm pm live1

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN1) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ (State Health Department) ಮತ್ತೊಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಸಿಲಿಂಡರ್, ಪಿಎಸ್‌ಎ (PSA) ಆಕ್ಸಿಜನ್ ಪ್ಲಾಂಟ್, ಲಿಕ್ವಿಡ್ ಆಕ್ಸಿಜನ್ ಘಟಕಗಳ ವಾಸ್ತವ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದ ಇಂದಿನ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಸುದ್ದಿ ಬೆಳವಣಿಗೆಗಳನ್ನು (Karnataka Live News) ತಿಳಿಯಲು ಇಲ್ಲಿ ಭೇಟಿ ಕೊಡಿ.

Prabhakar R

ಹೆದ್ದಾರಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು, ಮತ್ತೊಬ್ಬರ ರಕ್ಷಣೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಜಿಲ್ಲೆಯ (Chikkamagaluru News) ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪ ನಡೆದಿದೆ. ಮಣ್ಣಿನೊಳಗೆ ಸಿಲುಕಿದ ಇಬ್ಬರು ಕಾರ್ಮಿಕರು ಜಿಸಿಬಿಯಿಂದ ಮಣ್ಣು ತೆಗೆಯುವ ವೇಳೆ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಪೈಕಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರನ್ನು ರಕ್ಷಣೆ ಮಾಡಲಾಗಿದೆ.

Chikkamagaluru News: ಹೆದ್ದಾರಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು, ಮತ್ತೊಬ್ಬರ ರಕ್ಷಣೆ

Deepa S

ರಾಜ್ಯದಲ್ಲಿ ಮಾಯವಾಯ್ತಾ ಮಳೆ?

ರಾಜ್ಯಾದ್ಯಂತ ಸೋಮವಾರ ಒಣ ಹವೆ (Dry weather) ಇತ್ತು. ವಿಜಯಪುರದಲ್ಲಿ ಕಡಿಮೆ ಉಷ್ಣಾಂಶ 14.2 ಡಿ.ಸೆ ದಾಖಲಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಶುಷ್ಕ ವಾತಾವರಣವೇ ಇರಲಿದೆ. ಆದರೆ ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ (Rain News) ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ (Karnataka weather Forecast) ಸಾಧ್ಯತೆ ಇದೆ.

Karnataka Weather : ರಾಜ್ಯದಲ್ಲಿ ಮಾಯವಾಯ್ತಾ ಮಳೆ?
Prabhakar R

ರಾಜ್ಯಕ್ಕೆ ಮತ್ತೆ ಕಾವೇರಿ ಪೆಟ್ಟು; ಜನವರಿವರೆಗೆ ನೀರು ಬಿಡಲು CWRC ಆದೇಶ

ಕಾವೇರಿ ನೀರು ಬಿಡುಗಡೆ (Cauvery Dispute) ಸಂಬಂಧ ನವ ದೆಹಲಿಯಲ್ಲಿ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಜನವರಿವರೆಗೆ ತಮಿಳುನಾಡಿಗೆ ನೀರು ಹರಿಸಲು ಆದೇಶ ನೀಡಲಾಗಿದೆ. 2023ರ ಡಿಸೆಂಬರ್ ಬಾಕಿ ಅವಧಿಗೆ ಹಾಗೂ 2024ರ ಜನವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ CWDT ಆದೇಶದ ಪ್ರಕಾರ ನಿಗದಿತ ಪ್ರಮಾಣದ ನೀರನ್ನು ಹರಿಸಬೇಕು ಎಂದು ಸೂಚಿಸಲಾಗಿದೆ.

Cauvery Dispute: ರಾಜ್ಯಕ್ಕೆ ಮತ್ತೆ ಕಾವೇರಿ ಪೆಟ್ಟು; ಜನವರಿವರೆಗೆ ನೀರು ಬಿಡಲು CWRC ಆದೇಶ
Deepa S

ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಐವರು ಗಾಯ, ಒಬ್ಬನ ಸ್ಥಿತಿ ಚಿಂತಾಜನಕ

ಬೊಮ್ಮನಹಳ್ಳಿ ಸಮೀಪದ ಗಾರ್ವೇಬಾವಿ ಪಾಳ್ಯದ ಲಕ್ಷ್ಮೀ ಲೇಔಟ್‌ನ ಏಳನೇ ಕ್ರಾಸ್‌ನ ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ (Cylinder Blast) ಲಿಕೇಜ್‌ನಿಂದಾಗಿ ಸ್ಫೋಟಗೊಂಡಿದೆ. ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.

Cylinder Blast : ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಐವರು ಗಾಯ, ಒಬ್ಬನ ಸ್ಥಿತಿ ಚಿಂತಾಜನಕ
Deepa S

ಅಮ್ಮನ ಸಾವಿನ ರಹಸ್ಯ ಬಿಚ್ಚಿಟ್ಟ 6 ವರ್ಷದ ಬಾಲಕಿ!

ಅಮ್ಮನ ಸಾವಿನ ರಹಸ್ಯವನ್ನು 6 ವರ್ಷದ ಬಾಲಕಿಯೊಬ್ಬಳು ಎಳೆ ಎಳೆಯಾಗಿ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ. ಕೊಳ್ಳೇಗಾಲದ ಆದರ್ಶನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹವು (Murder Case) ಪತ್ತೆಯಾಗಿತ್ತು. ಅಗರ ಗ್ರಾಮದ ರೇಖಾ (27) ಎಂಬಾಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಜತೆಗೆ ಆಕೆಯ ಮಗಳು ಮನ್ವಿತಾ (6) ನಾಪತ್ತೆ ಆಗಿದ್ದಳು. ಮಗಳಂತೂ ಕೊಲೆಯಾಗಿ ಹೋದಳು, ಮೊಮ್ಮಗಳನ್ನು ಪತ್ತೆ ಹಚ್ಚಿ ಕೊಡಿ ಎಂದು ಮೃತ ರೇಖಾಳ ತಂದೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದರು.

Murder Case : ಅಮ್ಮನ ಸಾವಿನ ರಹಸ್ಯ ಬಿಚ್ಚಿಟ್ಟ 6 ವರ್ಷದ ಬಾಲಕಿ!
Exit mobile version