ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಬೆಂಗಳೂರಿಗೆ ಭೇಟಿ ನೀಡಿ ನೂತನ ಬೋಯಿಂಗ್ ತಂತ್ರಜ್ಞಾನ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ಕಲಬುರಗಿಗೂ ಭೇಟಿ ನೀಡಿದ್ದಾರೆ. ಇದರೊಂದಿಗೆ ಇನ್ನಷ್ಟು ಮಹತ್ವದ ರಾಜ್ಯ ಸುದ್ದಿಗಳ ಕ್ಷಣಕ್ಷಣದ (Karnataka Live News) ಅಪ್‌ಡೇಟ್ಸ್ ಇಲ್ಲಿವೆ.
Peenya Flyover : ಲೋಡ್ ಟೆಸ್ಟಿಂಗ್ ಕಂಪ್ಲೀಟ್; ಪೀಣ್ಯ ಫ್ಲೈಓವರ್ ಸಂಚಾರಕ್ಕೆ ಮುಕ್ತ
ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್ (Peenya Flyover)ನಲ್ಲಿ ಜನವರಿ 16ರಿಂದ ವಾಹನ ಸಂಚಾರವು (peenya flyover news) ಬಂದ್ ಆಗಿತ್ತು. ಇದೀಗ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಜ.19ರ ಬೆಳಗ್ಗೆ 11 ಗಂಟೆಗೆ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಕಳೆದ ಮೂರು ದಿನಗಳಿಂದ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.
Peenya Flyover : ಲೋಡ್ ಟೆಸ್ಟಿಂಗ್ ಕಂಪ್ಲೀಟ್; ಪೀಣ್ಯ ಫ್ಲೈಓವರ್ ಸಂಚಾರಕ್ಕೆ ಮುಕ್ತ
ಜ.22ರಂದು ಅಯೋಧ್ಯೆಗೆ ಹೋಗುವೆ: ದೇವೇಗೌಡ
ಹಾಸನ: ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವುದಾಗಿ ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಜೊತೆ ವಿಶೇಷ ವಿಮಾನದಲ್ಲಿ ತೆರಳುವುದಾಗಿ ತಿಳಿಸಿದ್ದಾರೆ.
ಕಲಬುರಗಿಗೆ ಆಗಮಿಸಿದ ಮೋದಿ
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಇಲ್ಲಿಂದ ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರದತ್ತ ತೆರಳಿದ್ದಾರೆ. ಅಲ್ಲಿ 1೦ ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ.