Karnataka Live News: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಔಟ್‌, ಎಚ್‌.ಡಿ ಕುಮಾರಸ್ವಾಮಿಗೆ ಹೊಣೆ - Vistara News

ಕರ್ನಾಟಕ

Karnataka Live News: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಔಟ್‌, ಎಚ್‌.ಡಿ ಕುಮಾರಸ್ವಾಮಿಗೆ ಹೊಣೆ

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಔಟ್‌, ಡಿ.ಕೆ. ಶಿವಕುಮಾರ್‌ ಅವರ ವಿರುದ್ಧಸಿಬಿಐ ತನಿಖೆಗೆ ಹೈಕೋರ್ಟ್‌ ಅಸ್ತು.. ಹೀಗೆ ಪ್ರಮುಖ ಬೆಳವಣಿಗೆಗಳ ಕ್ಷಣ ಕ್ಷಣದ ಅಪ್‌ಡೇಟ್‌ಗಳು

VISTARANEWS.COM


on

CM Ibrahim HD Devegowda HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಕಿತ್ತು ಹಾಕಲಾಗಿದೆ. ಎಚ್‌.ಡಿ ಕುಮಾರಸ್ವಾಮಿ ಅವರು ಇನ್ನು ಮುಂದೆ ಹೊಸ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇದನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಘೋಷಿಸಿದರು. ಇದರ ಜತೆಗೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿಗಳು (Karnataka Live News) ಇಲ್ಲಿ ಕಾಣಿಸಿಕೊಳ್ಳಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Murder Case: ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ.

VISTARANEWS.COM


on

murder case infosys engineer
Koo

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ರೌಡಿ ಚೈಲ್ಡ್‌ ರವಿ ಕೊಲೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

Continue Reading

ಕರ್ನಾಟಕ

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

Govt Employees Association: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಚುನಾವಣೆ ನಡೆಸಲಿ ಪದಾಧಿಕಾರಿಗಳು ತೀರ್ಮಾನಿಸಿದ್ದಾರೆ.

VISTARANEWS.COM


on

Govt Employees Association
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees Association) ಚುನಾವಣೆ ನಡೆಸಲು ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. 2024-2029ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿ ಹೊರತುಪಡಿಸಿ, ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ಸಂಘದ ಬೈಲಾ ನಿಯಮದನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದೊಳಗೆ ಸಿದ್ಧಪಡಿಸಿ ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಕರಡು ಮತದಾರರ ಪಟ್ಟಿಯನ್ನು ಹೊರಡಿಸಿದ ನಂತರ ಸಂಘದ ಸದಸ್ಯರಿಂದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ನೀಡಬೇಕು ಹಾಗೂ ಈ ಕುರಿತು ವ್ಯಾಪಕ ಪ್ರಚಾರ ಮಾಡಬೇಕು. ಯಾವುದೇ ಕಾರಣಕ್ಕೂ ನಿಗದಿತ ಅವಧಿಯ ವಿಸ್ತರಣೆಗೆ ಅವಕಾಶವಿರುವುದಿಲ್ಲ. ತಪ್ಪಿದಲ್ಲಿ ಸಂಬಂಧಿಸಿದ ಶಾಖೆಗಳೇ ಹೊಣೆ. ಈ ಸಂಬಂಧ ತಮ್ಮ ಶಾಖೆಗಳಲ್ಲಿ ಕಾರ್ಯಕಾರಿ ಸಮಿತಿ ಸಭೆಗಳನ್ನು ಸಂಘದ ಬೈಲಾ ರೀತ್ಯಾ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ | Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

ಮತದಾರರ ಪಟ್ಟಿ ಪರಿಷ್ಕರಣೆಗೆ ನೋಂದಣಿ

  • ತಾಲೂಕು ಶಾಖೆಗಳ ಮತ ಕ್ಷೇತ್ರಗಳು ಜೂನ್ 8 ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಜುಲೈ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ ನೀಡಲಾಗಿದೆ.
  • ಯೋಜನಾ ಶಾಖೆಗಳ ಮತಕ್ಷೇತ್ರಗಳು ಜೂನ್ 8 ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಜುಲೈ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ.
  • ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು ಜೂನ್ 8 ರಿಂದ 30ರ ತನಕ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿಯನ್ನು ಜುಲೈ 1ರಂದು ಪ್ರಕಟಿಸಬೇಕು. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ.
  • ಬೆಂಗಳೂರು ನಗರ ರಾಜ್ಯ ಪರಿಷತ್ ಮತ ಕ್ಷೇತ್ರಗಳು ಜೂನ್ 8ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ ಜುಲೈ 1. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ ಜುಲೈ 2ರಿಂದ 10 ಆಗಿದೆ.

Continue Reading

ಪ್ರಮುಖ ಸುದ್ದಿ

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

‌Prajwal Revanna Case: ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

VISTARANEWS.COM


on

prajwal revanna case
Koo

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್‌ ಮನೆ ತಪಾಸಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯಾಸ್ಪದ ಕಲೆಗಳುಳ್ಳ ಬೆಡ್‌ಶೀಟ್‌ ಪತ್ತೆಯಾಗಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Continue Reading

ಪ್ರಮುಖ ಸುದ್ದಿ

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Lakshmi Hebbalkar : ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

VISTARANEWS.COM


on

Lakshmi Hebbalkar
Koo

ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರತಿಸ್ಪರ್ಧಿ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ 2.5 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ. ಅವರ ಸೋಲಿನ ಬಳಿಕ ಉಡುಪಿಯ ಕಾಂಗ್ರೆಸ್​ ಘಟಕಕ್ಕೆ ನಿರಾಸೆಯಾಗಿದೆ. ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ.

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರ ಒತ್ತಾಯ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಬ್ಯುಸಿಯಾಗಿದ್ದರು. ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಜಗದೀಶ್​ ಶೆಟ್ಟರ್ ವಿರುದ್ಧ ಸೋತಿದ್ದಾರೆ.

ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಕಾಂಗ್ರೆಸ್ ಕಾರ್ಯಕರ್ತರು!

ಕ್ಕಬಳ್ಳಾಪುರ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ(Karnataka election results 2024) ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಇದೀಗ ಸ್ವಪಕ್ಷದ ಶಾಸಕನ ವಿರುದ್ಧವೇ ಕಾಂಗ್ರೆಸ್‌ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿರುವುದು ಕಂಡುಬಂದಿದೆ.

ಹೌದು, ಈ ಹಿಂದೆ ನಡೆದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೇ ಸ್ವಪಕ್ಷದ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲಲು ಶಾಸಕ ಪ್ರದೀಪ್ ಈಶ್ವರ್ ಕಾರಣ. ಅವರು ಆಡಿದ ಮಾತುಗಳೇ ರಕ್ಷಾರಾಮಯ್ಯ ಸೋಲಿಗೆ ಕಾರಣವಾಗಿದೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಪುತ್ರ ಜಗದೀಶ್ ಪ್ರತಿಕ್ರಿಯಿಸಿ, ಪ್ರದೀಪ್ ಈಶ್ವರ್ ಮಾತುಗಳಿಂದಲೇ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಒಂದಾದವು. ಪಕ್ಷ ಕಟ್ಟಿ ಬೆಳಸಿದೆವು, ಅದರೆ ಪ್ರದೀಪ್ ಈಶ್ವರ್ ಬಂದು ಹಾಳು ಮಾಡಿದರು. ದಯವಿಟ್ಟು ಕೊಟ್ಟ ಮಾತಿನಂತೆ ನಡೆದುಕೊಳ್ಳಿ, ಇಲ್ಲವೆಂದರೆ ಮಾತು ಕಡಿಮೆ ಮಾಡಿ ಎಂದು ಕಿಡಿಕಾರಿದ್ದಾರೆ.

Continue Reading
Advertisement
Devendra Fadnavis
ದೇಶ6 mins ago

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

SCO vs ENG
ಕ್ರೀಡೆ16 mins ago

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

murder case infosys engineer
ಕ್ರೈಂ20 mins ago

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Govt Employees Association
ಕರ್ನಾಟಕ52 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ59 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ1 hour ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ1 hour ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 20242 hours ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ2 hours ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌