Site icon Vistara News

Karnataka Live News: ಇನ್ನು ಮಾಸ್ಕ್‌ ಧರಿಸಿ ಬಸ್‌ನಲ್ಲಿ ಪ್ರಯಾಣಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

karnataka live news kannada today december 4

ಬೆಂಗಳೂರು: ರಾಜಧಾನಿಯಲ್ಲಿರುವ ಮುಖ್ಯಮಂತ್ರಿ ಸಿ‌ದ್ದರಾಮಯ್ಯ ಅವರಿಂದ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಭೇಟಿ, ಕೇಂದ್ರ ಆರೋಗ್ಯ ಸಚಿವರಿಂದ ಕೋವಿಡ್‌ ಕುರಿತು ಮಹತ್ವದ ಸಭೆ ಸೇರಿದಂತೆ ರಾಜ್ಯದ ಇಂದಿನ ಪ್ರಮುಖ ರಾಜಕೀಯ ಘಟನೆಗಳು, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳ ಕ್ಷಣಕ್ಷಣದ ಅಪ್‌ಡೇಟ್‌ (Karnataka Live News) ಇಲ್ಲಿ ಗಮನಿಸಿ.

Prabhakar R

ರಾಜ್ಯದಲ್ಲಿ ಕೋವಿಡ್‌ನಿಂದ ಇಬ್ಬರ ಸಾವು

ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಉಪತಳಿ ಜೆಎನ್‌ 1 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ರಾಜ್ಯದಲ್ಲಿ ಇಬ್ಬರು ಕೊರೊನಾದಿಂದ ಮೃತಪಟ್ಟಿರುವುದು ಕಂಡುಬಂದಿದೆ.

COVID Subvariant JN1: ರಾಜ್ಯದಲ್ಲಿ ಕೋವಿಡ್‌ನಿಂದ ಇಬ್ಬರ ಸಾವು
Prabhakar R

ಕೆಎಸ್‌ಡಿಎಲ್ ಟೆಂಡರ್‌ಗಾಗಿ ಲಂಚ; ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಕೇಸ್‌ ರದ್ದು

ಕೆಎಸ್‌ಡಿಎಲ್ ಟೆಂಡರ್‌ಗಾಗಿ ಲಂಚ ಪಡೆದ ಪ್ರಕರಣದಲ್ಲಿ (Corruption Case) ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ನಲ್ಲಿನ ಪ್ರಕ್ರಿಯೆ ಪಾಲಿಸದ ಕಾರಣ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಇದರಿಂದ ಮಾಜಿ ಶಾಸಕ ನಿರಾಳರಾಗುವಂತಾಗಿದೆ.

https://vistaranews.com/karnataka/corruption-case-against-madal-virupakshappa-dropped/536980.html

Prabhakar R

ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ; ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ವಿಪಕ್ಷಗಳ 141 ಸಂಸದರ ಅಮಾನತು ಖಂಡಿಸಿ ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಬುಧವಾರ ಪ್ರತಿಭಟನೆ (Congress Protest) ನಡೆಸಿದರು. ಸಂಸತ್ ಮೇಲಿನ ದಾಳಿಯ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಿರುವುದು ಸರಿಯಲ್ಲ. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

Congress Protest: ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ; ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
Prabhakar R

ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾ

ಹಾಸನ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ದೇವರಾಜೇಗೌಡ ಮತ್ತು ಇತರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಸುದೀರ್ಘ ವಿಚಾರಣೆ ನಡೆಸಿ ಮೊಕದ್ದಮೆಯನ್ನು ಬುಧವಾರ ವಜಾಗೊಳಿಸಿದೆ.

Suraj Revanna: ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾ
Adarsha Anche

COVID Subvariant JN1: ಇನ್ನು ಮಾಸ್ಕ್‌ ಧರಿಸಿ ಬಸ್‌ನಲ್ಲಿ ಪ್ರಯಾಣಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಸ್‌ಗಳಲ್ಲಿ ಹೆಚ್ಚಿನ ಜನರು ಪ್ರಯಾಣಿಸುತ್ತಾರೆ. ಹೀಗಾಗಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರೆಲ್ಲರೂ ಮಾಸ್ಕ್‌ ಧರಿಸಿ ಸಂಚಾರ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

https://vistaranews.com/karnataka/covid-subvariant-jn1-wear-mask-and-travel-by-bus-says-ramalinga-reddy/536748.html

Exit mobile version