Site icon Vistara News

Karnataka Live News: ರಾಜ್ಯದ ಪ್ರಮುಖ ಸುದ್ದಿ ಬೆಳವಣಿಗೆಗಳು; 800 ಕೋಟಿ ರೂ. ಮಹಾವಂಚನೆ; ಚೈನ್‌ಲಿಂಕ್‌ ಹೆಸರಲ್ಲಿ ʼಆಯುರ್ವೇದʼ ದೋಖಾ!

Karnataka Live News Updates Today

ಬೆಂಗಳೂರು: ಬಿಜೆಪಿಯಲ್ಲಿ ಹಲವಾರು ಪ್ರಮುಖ ಕುತೂಹಲಕಾರಿ ವಿದ್ಯಮಾನಗಳು ಸಂಭವಿಸಿದ್ದು, ನಾಯಕತ್ವದಲ್ಲಿ ಬದಲಾವಣೆಯ ಕುರಿತು ಅನುಮಾನಗಳನ್ನು ಮೂಡಿಸಿದೆ. ರಾಜ್ಯದ ಪ್ರಮುಖ ಸುದ್ದಿ ಬೆಳವಣಿಗೆಗಳಿಗಾಗಿ (Karnataka Live News) ಇಲ್ಲಿ ನೋಡಿ.

Prabhakar R

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ; ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ (PSI Scam) ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದ್ದು, ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕಾರ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

PSI Scam: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ; ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

Prabhakar R

ನಂದಿನಿ ಹಾಲು ಲೀಟರ್‌ಗೆ 3 ರೂ. ಏರಿಕೆ; ಆ.1ರಿಂದ ಜಾರಿ

ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಆಗಸ್ಟ್‌ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್‌ ಪದಾಧಿಕಾರಿಗಳ ಸಭೆಯಲ್ಲಿ ದರ ಹೆಚ್ಚಳದ (Nandini Milk Price Hike) ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಸಂಗ್ರಹವಾದ ಹಣವನ್ನು ರೈತರಿಗೆ ವರ್ಗಾವಣೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

Nandini Milk Price Hike: ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಏರಿಕೆ; ಆ.1ರಿಂದ ಜಾರಿ

Deepa S

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ; ಕರಾವಳಿಗರೂ ತತ್ತರ

ರಾಜ್ಯದಲ್ಲಿ ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ (Weather report) ಚುರುಕುಗೊಂಡಿದೆ. ಕರಾವಳಿಯಲ್ಲಿ ಸಾಮಾನ್ಯವಾಗಿದೆ. ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ನಲ್ಲಿ 23 ಸೆಂ.ಮೀ ಅತಿ ಹೆಚ್ಚು ಮಳೆಯಾಗಿರುವ (Rain News) ವರದಿ ಆಗಿದೆ. ಇನ್ನೆರಡು ದಿನಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ವ್ಯಾಪಕ ಮಳೆಯಾಗಲಿದೆ.

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ; ಕರಾವಳಿಗರೂ ತತ್ತರ
Krishna Bhat

BJP Protest : ಜು. 22ರಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ
Prabhakar R

ಕಾರು-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್‌, ಗುಡ್ಡೇನಹಳ್ಳಿಯ ಅಶೋಕ್‌, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್‌ ಮೃತರು.

Hassan Accident: ಕಾರು-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ
Exit mobile version