ಬೆಂಗಳೂರು: ಬಿಜೆಪಿಯಲ್ಲಿ ಹಲವಾರು ಪ್ರಮುಖ ಕುತೂಹಲಕಾರಿ ವಿದ್ಯಮಾನಗಳು ಸಂಭವಿಸಿದ್ದು, ನಾಯಕತ್ವದಲ್ಲಿ ಬದಲಾವಣೆಯ ಕುರಿತು ಅನುಮಾನಗಳನ್ನು ಮೂಡಿಸಿದೆ. ರಾಜ್ಯದ ಪ್ರಮುಖ ಸುದ್ದಿ ಬೆಳವಣಿಗೆಗಳಿಗಾಗಿ (Karnataka Live News) ಇಲ್ಲಿ ನೋಡಿ.
ಇಂದಿನಿಂದ ಐದು ದಿನ ಭಾರಿ ಮಳೆ
ಜು.21 ರಿಂದ 25 ರವರೆಗೆ ಉತ್ತರ ಒಳನಾಡು, ಕರಾವಳಿ ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ಧಾರವಾಡ, ರಾಯಚೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ.
Weather Report : ಇಂದಿನಿಂದ ಐದು ದಿನ ಭಾರಿ ಮಳೆ; ಎಲ್ಲೆಲ್ಲಿ ವರುಣಾರ್ಭಟ
ಕುತೂಹಲ ಕೆರಳಿಸಿದ ಬಿಜೆಪಿಯಲ್ಲಿನ ಬೆಳವಣಿಗೆಗಳು
ಬೆಂಗಳೂರು: ಬಿಜೆಪಿಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳು ರಾಜಕೀಯ ನಾಯಕತ್ವ ಬದಲಾವಣೆಯ ಬಗ್ಗೆ ಕುತೂಹಲ ಕೆರಳಿಸಿವೆ. ಬಿ.ವೈ. ವಿಜಯೇಂದ್ರ ಅವರಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿ, ಸಿ.ಟಿ.ರವಿ ಅವರಿಂದ ಬಿ.ಎಸ್. ಯಡಿಯೂರಪ್ಪ ಅವರ ಭೇಟಿ, ತೇಜಸ್ವಿನಿ ಅನಂತಕುಮಾರ್ ಅವರಿಂದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ, ಬಿಜೆಪಿ ಲೆಟರ್‌ಹೆಡ್‌ನಲ್ಲಿ ಎಚ್.ಡಿ. ಕುಮಾರಸ್ವಾಮಿ ಸಹಿ ಕುತೂಹಲ ಕೆರಳಿಸಿವೆ.