ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 3.75ರಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿಗಳನ್ನು ಓದಲು (Karnataka live news) ಇಲ್ಲಿ ಗಮನಿಸಿ.
ಸಾರಿಗೆ ನಿಗಮಗಳಲ್ಲಿ 6800 ಸಿಬ್ಬಂದಿ ನೇಮಕಾತಿಗೆ ಗ್ರೀನ್ ಸಿಗ್ನಲ್
ಸಾರಿಗೆ ಇಲಾಖೆಯ (Transport Department) ನಾಲ್ಕು ನಿಗಮಗಳಲ್ಲಿ 6800 ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರುಷಗಳಿಂದ ಯಾವುದೇ ನೇಮಕಾತಿ ಆಗಿರಲಿಲ್ಲ. ಇದರಿಂದ ಸುಮಾರು 13,669 ಖಾಲಿ ಹುದ್ದೆಗಳಿದ್ದವು. ಹೀಗಾಗಿ ಮೊದಲ ಹಂತದಲ್ಲಿ 6800 ಸಿಬ್ಬಂದಿ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
Transport Department: ಸಾರಿಗೆ ನಿಗಮಗಳಲ್ಲಿ 6800 ಸಿಬ್ಬಂದಿ ನೇಮಕಾತಿಗೆ ಗ್ರೀನ್ ಸಿಗ್ನಲ್
ದಸರಾ ಎಫೆಕ್ಟ್; ಊರಿನತ್ತ ಮುಖಮಾಡಿದ ರಾಜಧಾನಿಯ ಜನ, ಬಸ್‌ಗಳು ಫುಲ್ ರಶ್, ಟ್ರಾಫಿಕ್ ಜಾಮ್
ದಸರಾ ಹಬ್ಬದ (Navaratri) ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಸಿಲಿಕಾನ್ ಸಿಟಿ ಜನ ಊರುಗಳತ್ತ ಮುಖಮಾಡಿದ್ದಾರೆ. ಇದರಿಂದ ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಳಿಗಾಗಿ ಜನರು ಕಾದು ಕುಳಿತಿದ್ದು, ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಜತೆಗೆ ರಾಜಧಾನಿಯ ಮುಖ್ಯರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
https://vistaranews.com/karnataka/people-in-bengaluru-travel-to-their-hometowns-ahead-of-dasara-holidays/486860.html
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್; ತುಟ್ಟಿಭತ್ಯೆ ಶೇ. 3.75 ಹೆಚ್ಚಳ
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
DA Hike: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್; ತುಟ್ಟಿಭತ್ಯೆ ಶೇ. 3.75 ಹೆಚ್ಚಳ
ಬ್ಲೌಸ್, ಗುಪ್ತಾಂಗ, ಡ್ರೈಫ್ರೂಟ್ಸ್‌ನಲ್ಲಿ ಚಿನ್ನ ಸಾಗಣೆ; ಮೂವರು ಮಹಿಳೆಯರ ಬಂಧನ
ವಿದೇಶದಿಂದ ಚಿನ್ನದ ಕಳ್ಳ ಸಾಗಣೆ ಮಾಡುತ್ತಿದ್ದ ಮೂವರು ಖತರ್ನಾಕ್ ಮಹಿಳೆಯರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಬ್ಲೌಸ್, ಗುಪ್ತಾಂಗ ಮತ್ತು ಡ್ರೈಫ್ರೂಟ್ಸ್‌ನಲ್ಲಿ ಚಿನ್ನ ಸಾಗಿಸುತ್ತಿದ್ದಾಗ (Gold Smuggling) ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
Gold Smuggling: ಬ್ಲೌಸ್, ಗುಪ್ತಾಂಗ, ಡ್ರೈಫ್ರೂಟ್ಸ್‌ನಲ್ಲಿ ಚಿನ್ನ ಸಾಗಣೆ; ಮೂವರು ಮಹಿಳೆಯರ ಬಂಧನ
ಮೈಸೂರಿನಲ್ಲಿ ನ. 19ರಂದು ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ
ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್ ವತಿಯಿಂದ ನವೆಂಬರ್ 19ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ʼಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳʼ (Job Fair) ವನ್ನು ನಗರದ ಹೆಬ್ಬಾಳ ಇಂಡಸ್ಟ್ರಿಯಲ್ ಎಸ್ಟೇಟ್‌ನ ಇನ್ಫೋಸಿಸ್ ಸಂಸ್ಥೆ ಹತ್ತಿರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನ ಆವರಣದ ಬಿಜಿಎಸ್ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದೆ.
Job Fair: ಮೈಸೂರಿನಲ್ಲಿ ನ. 19ರಂದು ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ